ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಲ್ಲ: ಇದು ತಿರುಚಿದ ಫೋಟೊ

ಕಾವೇರಿ ಕರ್ನಾಟಕಕ್ಕಿಂತ ತಮಿಳುನಾಡಿನಲ್ಲೇ ಹೆಚ್ಚು ಹರಿಯುವುದರಿಂದ ತಮಿಳುನಾಡಿಗೆ ಕಾವೇರಿ ಮೇಲೆ ಹೆಚ್ಚಿನ ಹಕ್ಕಿದೆ. ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ.

ಫ್ಯಾಕ್ಟ್‌ಚೆಕ್: KRS ನಿಂದ ಒಂದು ಹನಿ ನೀರು ಬಿಡುವುದಿಲ್ಲ, ತಮಿಳುನಾಡಿನ ಮನವಿಯನ್ನು CWRC ತಿರಸ್ಕರಿಸಿರುವುದರಿಂದ ಸಂತಸವಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿದ ಮಾತನಾಡಿದ ಅವರು, ‘2,000 ಕ್ಯೂಸೆಕ್ಸ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್ಸ್ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ರಾಜಿಯಾಗುವುದಿಲ್ಲ. ನಮಗೆ ಮಂಡ್ಯ ಭಾಗದ ರೈತರ ಹಿತ ಮುಖ್ಯ’ ಎಂದಿದ್ದಾರೆ.

ತಮಿಳುನಾಡಿನ ಪರವಾಗಿ ಡಿ.ಕೆ ಶಿವಕುಮಾರ್‌ರವರು ಯಾವುದೇ ಟ್ವೀಟ್ ಮಾಡಿಲ್ಲ. ಅವರ ರಾಜಕೀಯ ವಿರೋಧಿಗಳು ಕೆಟ್ಟ ಹೆಸರು ತರುವುದಕ್ಕಾಗಿ ಮೇಲಿನ ಪೋಸ್ಟರ್ ತಿರುಚಿ ಎಡಿಟ್ ಮಾಡಿದ್ದಾರೆ.


ಇದನ್ನು ಓದಿ: ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದರು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *