ವವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಸಾಲು ಮರದ ತಿಮ್ಮಕ್ಕ ಅವರ ಬಗ್ಗೆ ಕೆಲ ಕಿಡಿಗೇಡಿಗಳು ಸಾಲು ಮರದ ತಿಮ್ಮಕ್ಕ ಇನ್ನಿಲ್ಲ ಎಂದು ಸುಳ್ಳು ಸುದ್ದಿಯನ್ನ ಹರಡುತ್ತಿದ್ದಾರೆ, ಆದರೆ ತಿಮ್ಮಕ್ಕ ಅವರಿಗೆ ಯಾವುದೇ ಸಮಸ್ಯೆ ಆಗಿಲ್ಲ.. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.
ಅಕ್ಟೋಬರ್ 5ರ ಇಂದು ಬೆಳಿಗ್ಗೆ ಅವರು ಆಸ್ಪತ್ರೆಯಲ್ಲಿ ತಿಂಡಿ ಸೇವಿಸುತ್ತಿರುವ ವಿಡಿಯೋವನ್ನು ಸಾಲು ಮರದ ತಿಮ್ಮಕ್ಕನವರ ದತ್ತು ಪುತ್ರ ಉಮೇಶ್ ವನಸಿರಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲಿ ಅವರು ಚೇತರಿಸಿಕೊಳ್ಳುತ್ತಿರುವುದನ್ನು ನೋಡಬಹುದು.
ಕೆಲ ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದು, ಯಾರೂ ಕೂಡ ಈ ಸುದ್ದಿಯನ್ನು ನಂಬಬೇಡಿ, ಹಾಗೂ ಯಾರಿಗೂ ಶೇರ್ ಮಾಡಬೇಡಿ..