ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಆರಂಭವಾಗುತ್ತಿದ್ದಂತೆ ಈ ಯುದ್ಧಕ್ಕೆ ಸಂಬಂಧ ಪಟ್ಟಂತೆ ಹಲವು ರೀತಿಯ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭವಾಗಿದೆ.
ಅದರಲ್ಲೂ ಕೆಲವೊಂದು ಸುದ್ದಿಗಳಿಗೆ ಹಳೆಯ ಫೋಟೋಗಳನ್ನು ಬಳಸಿಕೊಂಡು ಅದು ಇತ್ತೀಚಿನ ಹಮಾಸ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಫೋಟೋವಾಗಿದೆ ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಯೋಧೆಯೊಬ್ಬಳು ಸೈನಿಕರ ರೀತಿ ಬಟ್ಟೆ ಧರಿಸಿ ಒಂದು ಕೈಯಲ್ಲಿ ಗನ್ ಮತ್ತೊಂದು ಕೈಯಲ್ಲಿ ಮಗುವನ್ನು ಹಿಡಿದುಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
“ಈ ಫೋಟೋವನ್ನ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಿಗೆ ಹಂಚಿಕೊಳ್ಳುತ್ತಿರುವ ಜನ ” ದೇಶ ರಕ್ಷಣೆಗೆ ನಿಂತ ಇಸ್ರೇಲ್ ವೀರ ಮಹಿಳೆ, ನಮ್ಮಲ್ಲಿಯೂ ಹೋರಾಡುತ್ತಾರೆ ಫ್ರೀ ಬಸ್‌ನಲ್ಲಿ ಸೀಟಿಗಾಗಿ..” ಎಂದು ಬರೆದು ಕೊಳ್ಳುತ್ತಿದ್ದಾರೆ.
Fact Check : ಇನ್ನು ಈ ಫೋಟೋ ಕುರಿತು ಫ್ಯಾಕ್ಟ್ ಚೆಕ್ ನಡೆಸಿದಾಗ ಇದು ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧಕ್ಕೆ ಸಂಬಂಧಿಸಿದ್ದು ಎಂಬುವುದಕ್ಕೆ ಯಾವುದೇ ರೀತಿಯ ಸಾಕ್ಷಿಗಳು ಲಭ್ಯವಾಗಿಲ್ಲ. ಈ ಫೋಟೋವನ್ನು 2021 ರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ರಷ್ಯಾ ಉಕ್ರೇನ್ ಯದ್ಧದ ಸಂದರ್ಭದಲ್ಲಿ ಈ ಫೋಟೋವನ್ನು ಹೆಚ್ಚು ಹೆಚ್ಚು ಶೇರ್ ಮಾಡಲಾಗಿದ್ದು, 2022ರಲ್ಲಿ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಪ್ರಸಿದ್ಧಿಯನ್ನು ಪಡೆದಿತ್ತು.
ಯಾವ ಉದ್ದೇಶಕ್ಕಾಗಿ ಈ ಫೋಟೋವನ್ನ ತೆಗೆಯಲಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲದಿದ್ದರು, 2-3 ವರ್ಷಗಳಿಂದಲೂ ಕೂಡ ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವಿವಿಧ ತಲೆಬರಹವನ್ನು ನೀಡಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಈ ಫೋಟೋ ಇತ್ತೀಚೆಗೆ ಆರಂಭವಾಗಿರುವ ಹಮಾಸ್ ಮತ್ತು ಇಸ್ರೇಲ್ ನಡುವಿನ ಯುದ್ಧಕ್ಕೆ ಸಂಬಂಧಿಸಿದ್ದಲ್ಲ ಎಂಬುವುದು ದೃಢಪಟ್ಟಿದೆ.
ಈ ಸುದ್ದಿಯನ್ನು ಓದಿ : ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಮದುವೆಯಾಗಿದ್ದಾನೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.