ಕ್ರಿಕೆಟಿಗ ರಶೀದ್ ಖಾನ್‌ಗೆ ಉದ್ಯಮಿ ರತನ್ ಟಾಟಾ 10 ಕೋಟಿ ರೂ ಬಹುಮಾನ ಘೋಷಿಸಿದ್ದಾರೆ ಎಂಬುದು ಸುಳ್ಳು

ರಶೀದ್ ಖಾನ್

ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತದ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಆಪ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್‌ಗೆ ICC 50 ಲಕ್ಷ ರೂ ದಂಡ ವಿಧಿಸಿದೆ. ನಂತರ ಅವರಿಗೆ ಉದ್ಯಮಿ ರತನ್ ಟಾಟಾ 10 ಕೋಟಿ ರೂ ಬಹುಮಾನ ಘೋಷಿಸಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ.

ಫ್ಯಾಕ್ಟ್‌ಚೆಕ್: ಈ ಕುರಿತು ತಮ್ಮ ಟ್ವಿಟರ್ (X) ಖಾತೆಯಲ್ಲಿ ಪ್ರತಿಕ್ರಿಯಿಸಿರುವ ರತನ್ ಟಾಟಾ, “ನಾನು ಯಾವುದೇ ಆಟಗಾರನಿಗೆ ಬಹುಮಾನ ಘೋಷಿಸಿಲ್ಲ. ನನಗೂ ಕ್ರಿಕೆಟ್‌ಗೂ ಯಾವುದೇ ಸಂಬಂಧವಿಲ್ಲ. ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬರದ ಹೊರತು ಇಂತಹ ವಾಟ್ಸಾಪ್ ಫಾರ್ವರ್ಡ್‌ಗಳು ಮತ್ತು ವೀಡಿಯೊಗಳನ್ನು ದಯವಿಟ್ಟು ನಂಬಬೇಡಿ” ಎಂದು ಮನವಿ ಮಾಡಿದ್ದಾರೆ.

ಸುದ್ದಿ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ರತನ್ ಟಾಟ ಅವರ ಹೇಳಿಕೆಯನ್ನು ಅನೇಕ ಪತ್ರಿಕೆಗಳು ವರದಿ ಮಾಡಿವೆ. ಆದ್ದರಿಂದ ಕ್ರಿಕೆಟಿಗ ರಶೀದ್ ಖಾನ್‌ಗೆ ಉದ್ಯಮಿ ರತನ್ ಟಾಟಾ 10 ಕೋಟಿ ರೂ ಬಹುಮಾನ ಘೋಷಿಸಿದ್ದಾರೆ ಎಂಬುದು ಸುಳ್ಳು.


ಇದನ್ನು ಓದಿ: Fact Check: ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಮದುವೆಯಾಗಿದ್ದಾನೆ ಎಂಬುದು ಸುಳ್ಳು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *