Fact Check : ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಬಿಜೆಪಿ ಸರ್ಕಾರದ ಯೋಜನೆ ನಿಲ್ಲಿಸುತ್ತೇನೆ ಎಂದು ಹೇಳಿಲ್ಲ

ದೇಶದ ಕೆಲವು ರಾಜ್ಯಗಳು ವಿಧಾನಸಭೆ ಚುನಾವಣೆಗೆ ತಯಾರಿಯನ್ನ ನಡೆಸುತ್ತಿವೆ. ಈ ನಡುವೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ವಿವಿಧ ಪಕ್ಷಗಳ ಕಾರ್ಯಕರ್ತರು ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭ ಮಾಡಿದ್ದಾರೆ. ಇದು ಹಲವು ರಾಜಕೀಯ ನಾಯಕರ ವೈಯಕ್ತತಿಕ ವರ್ಚಸ್ಸಿಗೆ ಧಕ್ಕೆ ತರುತ್ತಿದೆ. ಹೀಗಾಗಿ ಹಲವು ನಾಯಕರು ಮುಜುಗರ ಅನುಭವಿಸು ಹಾಗಾಗಿದೆ.

ಇದೇ ರೀತಿಯಾದ ಮುಜುಗರ ಮತ್ತು ಸುಳ್ಳು ಸುದ್ದಿಯಿಂದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರು ಎದುರಿಸುತ್ತಿದ್ದಾರೆ. ಈಗ ಅವರ ವಿರುದ್ಧ ಸುಳ್ಳು ಸುದ್ದಿ ಹರಡಲು ಪ್ರಾರಂಭ ಮಾಡಿರುವ ಮಧ್ಯ ಪ್ರದೇಶದ ಬಿಜೆಪಿ ಕಾರ್ಯಕರ್ತರು ಈಗ ಕಮಲ್‌ನಾಥ್‌ ಅವರ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದಕ್ಕೆ ಪೂರಕ ಎಂಬಂತೆ “ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಪ್ರತಿ ತಿಂಗಳು 1000 ರೂ ನೀಡುವ ಬಿಜೆಪಿ ಸರ್ಕಾರದ ಲಾಡ್ಲಿ ಬೆಹನಾ ಯೋಜನೆಯನ್ನು ಸ್ಥಗಿತಗೊಳಿಸುತ್ತೇವೆ” ಎಂದು ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್‌ ಹೇಳಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರೋದು ಮಾತ್ರವಲ್ಲದೆ ಕಾಂಗ್ರೆಸ್‌ಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಇನ್ನು ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ಈ ರೀತಿಯ ಯಾವುದೇ ಹೇಳಿಕೆಯನ್ನು ಮಾಜಿ ಸಿಎಂ ಕಮಲ್‌ನಾಥ್‌ ಹೇಳಿಲ್ಲ. ಈ ಬಗ್ಗೆ ಯಾವುದೇ ವರದಿಗಳು ಸಿಕ್ಕಿಲ್ಲ ಎಂಬುವುದು ಸ್ಪಷ್ಟವಾಗಿ ತಿಳಿದು ಬಂದಿದೆ. ವೈರಲ್‌ ವಿಡಿಯೋದಲ್ಲಿ ಕಮಲ್‌ನಾಥ್‌ ಅವರು ಚುನಾವಣಾ ಪ್ರಚಾರವನ್ನು ನಡೆಸಿದ್ದಾರೆಯೇ ಹೊರತು ಯಾವುದೇ ಯೋಜನೆಯನ್ನು ಸ್ಥಗಿತಗೊಳಿಸುವ ಕುರಿತು ಅವರು ಮಾತನಾಡಿಲ್ಲ.

ಒಂದು ವೇಳೆ ಈ ರೀತಿಯ ಯೋಜನೆಗಳನ್ನು ಸ್ಥಗಿತಗೊಳಿಸಿದರೆ ಅದರಿಂದ ಬಹುದೊಡ್ಡ ಸಮಸ್ಯೆಗಳನ್ನು ಮಧ್ಯಪ್ರದೇಶದ ಕಾಂಗ್ರೆಸ್‌ ಎದುರಿಸಬೇಕಾಗುತ್ತದೆ. ಹಾಗಾಗಿ ಈ ವಿಚಾರದಲ್ಲಿ ಮಧ್ಯ ಪ್ರದೇಶದ ಮಾಜಿ ಸಿಎಂ ಎಡವಟ್ಟಿನ ಹೆಜ್ಜೆಗಳನ್ನು ಇಡುವ ಸಾಧ್ಯತೆ ಇಲ್ಲ ಎಂಬುದು ರಾಜಕೀಯ ಪಂಡಿತರ ಮಾತು. ಇನ್ನು ಕಮಲ್‌ನಾಥ್‌ ಅವರ ವಿಡಿಯೋಗೆ ನಕಲಿ ಅಡಿಯೋವನ್ನು ಸೇರಿಸಿ ಅಪಪ್ರಚಾರ ಮಾಡಲಾಗಿದೆ ಎಂಬುದು ವಿಡಿಯೋ ಪರಿಶೀಲನೆಯನಂತರ ತಿಳಿದು ಬಂದಿದೆ.

Leave a Reply

Your email address will not be published. Required fields are marked *