Fact Check : ವಾಂಖೆಡೆ ಸ್ಟೇಡಿಯಂನಲ್ಲಿ ಉದ್ಘಾಟನೆಯಾದದ್ದು ಸ್ಟೀವ್‌ ಸ್ಮಿತ್‌ ಪ್ರತಿಮೆ ಅಲ್ಲ

ಭಾರತದಲ್ಲಿ ವಿಶ್ವ ಕಪ್‌ ಕ್ರಿಕೆಟ್‌ ಪಂದ್ಯಾವಳಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಇದರ ಮಧ್ಯೆ ಕ್ರಿಕೆಟ್‌ ಜಗತ್ತಿಗೆ ಸಂಬಂಧಿಸಿದ್ದಂತೆ ಕುತೂಹಲಕಾರಿ ಬೆಳವಣಿಗೆಗಳು ಆಗಾಗ ನಡೆಯುತ್ತಲೇ ಇರುತ್ತವೆ. ಈಗ ಕ್ರಿಕೆಟ್‌ ದೇವರು ಅಂತ ಕರೆಯಿಸಿಕೊಳ್ಳು ಸಚಿನ್‌ ತೆಂಡೂಲ್ಕರ್ ಅವರ ಪ್ರತಿಮೆಯ ವಿಚಾರಕ್ಕೆ ಸಂಬಂಧ ಪಟ್ಟ ಹಾಗೆ ಬೆಳವಣಿಗೆಯೊಂದು ನಡೆದಿದೆ.

ನವಂಬರ್‌ ಒಂದರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್‌ ತೆಂಡೂಲ್ಕರ್‌ ಅವರು ಪ್ರತಿಮೆಯೊಂದನ್ನು ಅನಾವರಣಗೊಳಿಸಿದ್ದರು. ಇದೀಗ ಇದೇ ಪ್ರತಿಮೆಯ ಬಗ್ಗೆ ಸುಳ್ಳು ಸುದ್ದಿಯೊಂದು ವೈರಲ್‌ ಆಗದೆ.  “ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರು ಆಸ್ಟ್ರೇಲಿಯಾದ ಕ್ರಿಕೆಟರ್‌ ಸ್ಟೀವ್‌ ಸ್ಮಿತ್‌ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ” ಎಂದು ಹೇಳಲಾಗುತ್ತಿದೆ ಆದರೆ ಇದರ ಹಿಂದಿರುವ ಸತ್ಯ ಬೇರೆಯದ್ದೇ ಆಗಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್‌ ತೆಂಡೂಲ್ಕರ್‌ ಅವರು ತಮ್ಮದೇ ಪ್ರತಿಮೆಯನ್ನು ಉದ್ಘಾಟಿಸಿದ್ದಾರೆ. ಈ ಪ್ರತಿಮೆಯ ಕುರಿತು ಸ್ವತಃ ಸಚಿನ್‌ ತೆಂಡೂಲ್ಕರ್‌ ಅವರೇ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ ಈ ಪ್ರತಿಮೆಯ ಹಿಂದೆ ಹಲವರ ಶ್ರಮ ಇದೆ ಎಂದು ಸಾಕಷ್ಟು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಇದರ ಜೊತೆಗೆ ICC ಮತ್ತು BCCI ಕೂಡ ಸಚಿನ್‌ ತೆಂಡೂಲ್ಕರ್‌ ಅವರ ಪ್ರತಿಮೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿವೆ..

ಹೀಗಾಗಿ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಸಚಿನ್‌ ತೆಂಡೂಲ್ಕರ್‌ ತಮ್ಮದೇ ಪ್ರತಿಮೆಯನ್ನ ಅನಾವರಣಗೊಳಿಸಿದ್ದಾರೆಯೇ ಹೊರತು ಅವರು ಸ್ಟೀವ್‌ ಸ್ಮಿತ್‌ ಅವರ ಪ್ರತಿಮೆ ಅನಾವರಣಗೊಳಿಸದ್ದಾರೆ ಎಂಬುದು ಸುಳ್ಳಿನ ಸಂಗತಿಯಾಗಿದೆ.


ಇದನ್ನೂ ಓದಿ : ಕಾಂಗ್ರೆಸ್ ನಾಯಕ ಶಶಿ ತರೂರ್ ಹಮಾಸ್‌ರವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು


ಈ ವಿಡಿಯೋವನ್ನು ನೋಡಿ : ಟಿಪ್ಪು ಸುಲ್ತಾನನ ಪತ್ರದ ಕುರಿತು ಎಸ್.ಎಲ್ ಭೈರಪ್ಪನವರು ತಪ್ಪಾಗಿ ಅರ್ಥೈಸಿದ್ದಾರೆ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *