ಭಾರತದ ಕ್ರಿಕೆಟರ್ ವಿರಾಟ್ ಕೊಹ್ಲಿ ಅವರು ಗಾಜಾವನ್ನು ಬೆಂಬಲಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ವ್ಯಾಪಕವಾಗಿ ಹರಡಲಾಗುತ್ತಿದೆ. ಆ ಸುದ್ದಿಯನ್ನು ವ್ಯಾಪಾಕವಾಗಿ ಹಂಚಿಕೊಳ್ಳಲಾಗುತ್ತಿದೆ.
ಅದರಲ್ಲೂ ಪ್ರಮುಖವಾಗಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು ಆ ಪೋಸ್ಟ್‌ನ ತಲೆಬರಹದಲ್ಲಿ “ಕೊಹ್ಲಿ ತಮ್ಮ ಏಕದಿನ ಪಂದ್ಯದಲ್ಲಿ 49ನೇ ಶತಕದ ಸಿಡಿಸಿದ ನಂತರ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ “ಇನ್ ಸಾಲಿಡರಿಟಿ ವಿಥ್ ಗಾಜಾ” ಎಂಬ ಪೋಸ್ಟ್ ಹಂಚಿಕೊಂಡಿದ್ದಾರೆ. ಆ ಮೂಲಕ ಅವರು ಪ್ಯಾಲೆಸ್ಟೈನ್ ಬೆಂಬಲಕ್ಕೆ ನಿಂತಿದ್ದಾರೆ.” ಎಂದು ಪೋಸ್ಟ್‌ನ್ನು ಹಂಚಿಕೊಳ್ಳುತ್ತಿದ್ದಾರೆ.
ಈ ಸುದ್ದಿ ಮತ್ತು ಪೋಸ್ಟ್‌ನ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ವಿರಾಟ್ ಕೊಹ್ಲಿ ಗಾಜಾವನ್ನು ಬೆಂಬಲಿಸುವ ರೀತಿಯಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ವೈರಲ್ ಆಗಿರುವ ಪೋಸ್ಟ್ ವಿರಾಟ್ ಕೊಹ್ಲಿ ಹೆಸರಿನ ನಕಲಿ ಇನ್‌ಸ್ಟಾಗ್ರಾಮ್ ಖಾತೆಯಾಗಿದೆ. ಹಾಗಾಗಿ ವಿರಾಟ್ ಕೊಹ್ಲಿ ತಮ್ಮ 49 ಏಕದಿನ ಶತಕದ ಬಳಿಕ ಗಾಝಾ ಪರವಾಗಿ ಪೋಸ್ಟ್ ಹಾಕಿದ್ದಾರೆ ಎಂಬುದು ಸುಳ್ಳು
ಇದನ್ನೂ ಓದಿ : ಕಾಂಗ್ರೆಸ್ ನಾಯಕ ಶಶಿ ತರೂರ್ ಹಮಾಸ್‌ರವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.