ಸಾಮಾಜಿಕ ಜಾಲತಾಣದಲ್ಲಿ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಸಂಬಂಧಿಸಿದ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಅದರಲ್ಲಿ ಟಿಟಿಡಿಗೆ ಸಂಬಂಧಿಸಿದ್ದಂತೆ ವಾಟ್ಸ್‌ಆಪ್ ಸೇರಿದ ಹಾಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಈ ವಿಡಿಯೋವನ್ನು ಸಾಕಷ್ಟು ಮಂದಿ ಇಂದಿಗೂ ಶೇರ್ ಮಾಡುತ್ತಿದ್ದಾರೆ
ವೈರಲ್ ಆಗಿರುವ ಆ ವಿಡಿಯೋದಲ್ಲಿ “ತಿರುಪತಿ ತಿಮ್ಮಪ್ಪನ ಸೇವೆ ಮಾಡುವ 16 ಪುರೋಹಿತರಲ್ಲಿ ಒಬ್ಬ ಪುರೋಹಿತರ ಮನೆಗೆ ಇನ್‌ಕಮ್ ಟ್ಯಾಕ್ಸ್ ವಿಭಾಗದ ಅಧಿಕಾರಿಗಳು ರೈಡ್ ಮಾಡಿದಾಗ ಸಿಕ್ಕಿರುವ ಹಣ, ಚಿನ್ನದ ಒಡವೆ ಹಾಗೂ ವಜ್ರ ಎಷ್ಟು ಗೊತ್ತಾ? 128 ಕೆಜಿ ಚಿನ್ನ, 150 ಕೋಟಿ ಕ್ಯಾಶ್, 70 ಕೋಟಿ ಬೆಲೆಯ ವಜ್ರ” ಎಂದು ಉಲ್ಲೇಖಿಸಿ ಹಲವು ವರ್ಷಗಳಿಂದ ಶೇರ್ ಮಾಡಲಾಗುತ್ತಿದೆ.
ಈ ವಿಡಿಯೋದ ಕುರಿತು ಏನ್‌ಸುದ್ದಿ.ಕಾಂ ಫ್ಯಾಕ್ಟ್‌ಚೆಕ್ ನಡೆಸಿದೆ. ಈ ವಿಡಿಯೋ ತಮಿಳುನಾಡಿನಲ್ಲಿ ನಡೆದ ಚಿನ್ನಾಭರಣಗಳ ಅಂಗಡಿಯಿಂದ ನಡೆದ ದರೋಡೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಂದ ಮರುವಶಪಡಿಸಿಕೊಂಡಿರುವ ವಿಡಿಯೊವಾಗಿದೆ. ಇದನ್ನು ತಮಿಳು ಮಾಧ್ಯಮ ಜಯಾ ಪ್ಲಸ್ ಡಿಸೆಂಬರ್ 22, 2021 ರಂದು ವರದಿ ಮಾಡಿತ್ತು.
ವರದಿಯ ಪ್ರಕಾರ, ತಮಿಳುನಾಡಿನ ವೆಲ್ಲೂರಿನಲ್ಲಿ ಇರುವ ಜೋಸ್ ಅಲುಕ್ಕಾಸ್ ಶೋರೂಂನಿಂದ ಈ ದರೋಡೆ ನಡೆದಿತ್ತು. ಅದನ್ನು ದರೋಡೆಕೋರದಿಂದ ಪೊಲೀಸರು ಮರು ವಶಪಡಿಸಿಕೊಂಡಿರುವ ವಿಡಿಯೊ ಇದಾಗಿದೆ.
ಡಿಸೆಂಬರ್ 14, 2021ರ ಮಧ್ಯರಾತ್ರಿ ವೆಲ್ಲೂರಿನ ಜೋಸ್ ಅಲುಕ್ಕಾಸ್ ಶೋರೂಮ್‌ನಿಂದ 15 ಕೆಜಿ ಚಿನ್ನ ಮತ್ತು ಸುಮಾರು 500 ಗ್ರಾಂ ವಜ್ರಗಳನ್ನು ದರೋಡೆ ಮಾಡಲಾಗಿತ್ತು. ಕಳ್ಳರನ್ನು ಪತ್ತೆ ಹಚ್ಚಿದ ಪೊಲೀಸರು ಅವುಗಳನ್ನು ಮರು ವಶಪಡಿಸಿಕೊಂಡಿದ್ದರು. ಹಾಗಾಗಿ ಈ ವಿಡಿಯೋಗೂ ತಿರುಪತಿಗೂ ಸಂಬಂಧವಿಲ್ಲ.