ಸಾಮಾಜಿಕ ಜಾಲತಾಣದಲ್ಲಿ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವು ರೀತಿಯಾದ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬಲು ಪ್ರಾರಂಭವಾಗಿದೆ. ಅದರಲ್ಲೂ ಪ್ರಮುಖವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆಡಳಿತರೂಢ ಬಿಜೆಪಿಯ ವಿರುದ್ಧ ಹಲವು ರೀತಿಯಾದ ಸುಳ್ಳು ಸುದ್ದಿಗಳನ್ನು ಸಾಕಷ್ಟು ಮಂದಿ ಪರಿಶೀಲನೆ ನಡೆಸದೇ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ರಾಜಕೀಯವಾಗಿ ಜನಸಾಮಾನ್ಯರನ್ನು ದಾರಿ ತಪ್ಪಿಸಲಾಗುತ್ತಿದೆ ಎಂಬುವುದು ವಾಸ್ತವಾಗಿದೆ.
“ಇತ್ತೀಚೆಗೆ 2001ರಲ್ಲಿ ಅಮೆರಿಕದಲ್ಲಿ 1.60 ಲಕ್ಷ ಅಮೆರಿಕನ್ ಡಾಲರ್ ಮತ್ತು ಮಾದಕ ವಸ್ತುಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಆರೋಪದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಎಫ್‌ಬಿಐ ಅಧಿಕಾರಿಗಳು ಬಂಧಿಸಿದ್ದರು. ಆ ವೇಳೆ ಸೋನಿಯಾ ಗಾಂಧಿಯವರು ಆಗ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಕರೆ ಮಾಡಿ ಸಹಾಯ ಬೇಡಿದ್ದರು. ತದ ನಂತರ ರಾಹುಲ್ ಗಾಂಧಿಯನ್ನು ಬಿಡುಗಡೆಗೊಳಿಸಲಾಯಿತು” ಎಂಬ ಸುದ್ದಿ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫ್ಯಾಕ್ಟ್‌ಚೆಕ್
ಈ ಕುರಿತು ಫ್ಯಾಕ್ಟ್‌ಚೆಕ್ ಮಾಡಿದಾಗ ಇದೊಂದು ಸುಳ್ಳು ಸುದ್ದಿ ಎಂಬುದು ಬಟಾ ಬಯಲಾಗಿದೆ. ಅಸಲಿಗೆ ಈ ಕುರಿತು ಪರಿಶೀಲನೆ ನಡೆಸಿದಾಗ ರಾಹುಲ್ ಗಾಂಧಿಯನ್ನು ಸೆಪ್ಟೆಂಬರ್ 2001 ರಲ್ಲಿ ಬೋಸ್ಟನ್ ಲೋಗನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತನಿಖೆಗೆ ಒಳಪಡಿಸಲಾಗಿತ್ತು ಎಂಬ ವರದಿಯೊಂದು ಲಭ್ಯವಾಗಿದೆ. ಅದಕ್ಕೆ ಸೂಕ್ತ ಕಾರಣವೂ ಇದೆ.!
ಅಮೆರಿಕದಲ್ಲಿ ನಡೆದ ‘9/11’ ಭಯೋತ್ಪಾದಕ ದಾಳಿಯ ನಂತರ ತೆಗೆದುಕೊಂಡ ಭದ್ರತಾ ಕ್ರಮಗಳ ಭಾಗವಾಗಿ ಬಾಸ್ಟನ್ ವಿಮಾನ ನಿಲ್ದಾಣದಲ್ಲಿ ರಾಹುಲ್ ಗಾಂಧಿಯನ್ನು ‘ಸುಮಾರು ಒಂದು ಗಂಟೆ’ ಕಾಲ ಎಫ್‌ಬಿಐ ಅಧಿಕಾರಿಗಳು ತಮ್ಮ ಸುಪರ್ಧಿಗೆ ತೆಗೆದುಕೊಂಡು ವಿಚಾರಣೆ ನಡೆಸಿದ್ದರು. ಆದರೆ ರಾಹುಲ್ ಬಂಧನವಾಗಿರಲಿಲ್ಲ ಎಂದು ತಿಳಿದು ಬಂದಿದೆ. ಹಾಗಾಗಿ ವೈರಲ್ ಪೋಸ್ಟ್‌ನಲ್ಲಿ ಮಾಡಲಾದ ಆಪಾದನೆ ಸುಳ್ಳಾಗಿದೆ
ಇದನ್ನೂ ಓದಿ : ಕ್ಯಾ. ಪ್ರಾಂಜಲ್ ಕುರಿತು ಸಿಎಂ ಸಿದ್ದರಾಮಯ್ಯನವರ ಅರ್ಧ ಹೇಳಿಕೆ ಹಂಚಿ ತಪ್ಪಾಗಿ ಅರ್ಥೈಸಿದ ಸಂಸದ ತೇಜಸ್ವಿ ಸೂರ್ಯ
ವಿಡಿಯೋ ನೋಡಿ : ಕ್ಯಾ. ಪ್ರಾಂಜಲ್ ಕುರಿತು ಸಿಎಂ ಸಿದ್ದರಾಮಯ್ಯನವರ ಅರ್ಧ ಹೇಳಿಕೆ ಹಂಚಿ ತಪ್ಪಾಗಿ ಅರ್ಥೈಸಿದ ಸಂಸದ ತೇಜಸ್ವಿ ಸೂರ್ಯ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ