ಮುಖ್ಯಮಂತ್ರಿ ಸಿದ್ದರಾಮಯ್ಯನವರ ಎಡಿಟ್ ವಿಡಿಯೋ ಹಂಚಿ ಸುಳ್ಳು ಸಾರಿದ BJP ನಾಯಕರು

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎರಡು ದಿನಗಳ ಹಿಂದೆಯಷ್ಟೇ ರೈತರ ಸಾಲ ಮನ್ನದ ಕುರಿತು ತೀವ್ರವಾದ ಚರ್ಚೆಗಳು ಜರುಗಿವೆ. “ಸಾಲ ಪಡೆದಿರುವ ರೈತರು ಅಸಲನ್ನು ಕಟ್ಟಿದರೆ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನ ಮಾಡಲಾಗುವುದು, ಅದು ಮಧ್ಯಮಾವದಿ ಸಾಲ ಇರಬಹುದು ಅಥವಾ ಧೀರ್ಘವಧಿಯ ಸಾಲ ಇರಬಹುದು, ಎಲ್ಲದರ ಮೇಲಿರುವ ಬಡ್ಡಿಯನ್ನು ಮನ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ.

ಆದರೆ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ “ಎಲ್ಲಿಂದ ತರ್ಲಿ ದುಡ್ಡು? ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡುತ್ತೇವೆ ಹಾಗಂತ ಹೇಳಿದ್ದೆಲ್ಲವನ್ನು ಮಾಡೋಕೆ ಆಗತ್ತಾ, ಸಾಲ ಮನ್ನ ಮಾಡ್ತೀವಿ ಅಂತ ಹೇಳಿದ್ವಿ ಅದರಂತೆ ನಡೆಯೋಕೆ ಆಗೋದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ವಿಡಿಯೋ ಒಂದನ್ನು ಬಿಜೆಪಿ ನಾಯಕರಾದ ಸಿ.ಟಿ ರವಿ, ಡಾ. ಅಶ್ವತ್‌ ನಾರಾಯಣ್ ಸೇರಿದಂತೆ ಹಲವಾರು ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್: ಸಿಎಂ ಸಿದ್ದರಾಮಯ್ಯನವರು ಸದನದಲ್ಲಿ ಮಾತನಾಡುತ್ತ, “2018ರ ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಕಟಿಸಿದ್ದ ಪ್ರಣಾಳಿಕೆಯಲ್ಲಿ ₹1 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಬಳಿಕ ಕೃಷಿ ಸಾಲ ಮನ್ನಾ ಮಾಡಲಿಲ್ಲ ಎಂದರು. ನಂತರ ತಮ್ಮ(ಕಾಂಗ್ರೆಸ್) ಪಕ್ಷದ ನಾಯಕರಾದ ಉಗ್ರಪ್ಪನವರು 2009ರ ಡಿಸೆಂಬರ್ ಅಧಿವೇಶನದಲ್ಲಿ ರೈತರ ಸಾಲ ಮನ್ನ ಮಾಡಲು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕೇಳಿಕೊಂಡಾಗ ‘ನಾವು ನೋಟು ಪ್ರಿಂಟ್‌ ಮಾಡುವ ಯಂತ್ರ ಇಟ್ಟಿಲ್ಲ’ ಎಂದು ಉತ್ತರ ಕೊಟ್ಟಿದ್ದರು’ ಎಂದು ಟೀಕಿಸಿದ್ದಾರೆ. ಆದರೆ ಯಡಿಯೂರಪ್ಪನವರ ಹೆಸರು ಕತ್ತರಿಸಿ ಸಿದ್ದರಾಮಯ್ಯನವರು ತಮ್ಮ ಬಗ್ಗೆಯೇ ಹೇಳುತ್ತಿರುವ ಹಾಗೆ ತಿರುಚಲಾಗಿದೆ.ಈ ಕುರಿತು ಪ್ರತಿಕ್ರಯಿಸಿರುವ ಸಿದ್ದರಾಮಯ್ಯನವರು ತಮ್ಮ ಟ್ವಿಟರ್(X) ಖಾತೆಯಲ್ಲಿ ಬಿಜೆಪಿ ನಾಯಕರ ಸುಳ್ಳು ಸುದ್ದಿ ಹರಡಿರುವುದನ್ನು ಖಂಡಿಸಿದ್ದಾರೆ ಮತ್ತು ಸಧನದಲ್ಲಿ ಆಡಿದ ತಮ್ಮ ಪೂರ್ತಿ ಭಾಷಣವನ್ನು ಹಂಚಿಕೊಂಡಿದ್ದಾರೆ. ಕಳೆದೆರಡು ವಾರಗಳ ಹಿಂದೆಯಷ್ಟೇ ಸಂಸದ ತೇಜಸ್ವಿ ಸೂರ್ಯರವರು ಸಿದ್ದರಾಮಯ್ಯನವರ ಎಡಿಟ್ ವಿಡಿಯೋ ಹಂಚಿಕೊಂಡು ಟೀಕೆಗೆ ಗುರಿಯಾಗಿದ್ದರು, ಈಗ ಸಿದ್ದರಾಮಯ್ಯನವರು ಬಿಜೆಪಿ ನಾಯಕರ ಸುಳ್ಳನ್ನು ಬಯಲಿಗೆಳೆಯುತ್ತಿದ್ದಂತೆ ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದ ವಿಡಿಯೋವನ್ನು ಡಿಲಿಟ್ ಮಾಡಿದ್ದಾರೆ.

ಆದ್ದರಿಂದ ಸಧ್ಯ ಬಿಜೆಪಿ ನಾಯಕರ ಪ್ರತಿಪಾದನೆ ಸುಳ್ಳಾಗಿದ್ದು. ಗ್ಯಾರಂಟಿ ಯೋಜನೆಗಳ ಕುರಿತು ಹರಡುತ್ತಿರುವ ಸುಳ್ಳು ಸುದ್ದಿಗಳಿಗೆ ಪ್ರತಿಕ್ರಯಿಸಿ, ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಸಭಾಂಗಣದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಣೆ ಮತ್ತು ಬೆಂಗಳೂರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ2023 ನವೆಂಬರ್ 19 ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ” ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನು ಓದಿ: ಕೇರಳ ಪೋಲಿಸರು ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂಬುದು ಸುಳ್ಳು


ವಿಡಿಯೋ ನೋಡಿ: Fact Check | ಶಿವಕಾಶಿಯಲ್ಲಿ ಲಕ್ಷ ಶಿವಲಿಂಗಗಳು ಪತ್ತೆಯಾಗಿವೆ ಎಂಬುದು ಸುಳ್ಳು | Fake News | Kannada Fact Check


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

 

Leave a Reply

Your email address will not be published. Required fields are marked *