“ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಲಿಸ್ತಾನ್ ಚಳವಳಿಯನ್ನು ಬೆಂಬಲಿಸಿದ್ದರೆ ಮತ್ತು ಪ್ರತಿಭಟನೆಯೊಂದರಲ್ಲಿ ಮಾತನಾಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಕಾಂಗ್ರೆಸ್ ಖಲಿಸ್ತಾನಿಗಳಿಗೆ ಬೆಂಬಲ ಕೊಡುತ್ತಿದೆ ಎಂದು ಆರೋಪಿಸಲಾಗಿದೆ.
ಇದರ ಜೊತೆಗೆ ಮತ್ತೊಂದು ವಿಡಿಯೋ ಕೂಡ ವೈರಲ್ ಆಗಿದ್ದು ಅದರಲ್ಲಿ ರಾಜಸ್ತಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರು, “ಮೋಹನ್ ಭಾಗವತ್ ಮತ್ತು ನರೇಂದ್ರ ಮೋದಿ ಅವರು ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಬಹುದಾದಾಗ, ನಾನು ಖಲಿಸ್ತಾನ್ ಬಗ್ಗೆ ಏಕೆ ಮಾತನಾಡಬಾರದು..” ಎಂದು ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವಿಡಿಯೋವೊಂದನ್ನು ವೈರಲ್ ಮಾಡಲಾಗುತ್ತಿದೆ.
ಫ್ಯಾಕ್ಟ್‌ಚೆಕ್
ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಿದಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋಗಳು ಎಡಿಟ್ ಮಾಡಲಾಗಿದೆ ಎಂಬುದು ಖಚಿತವಾಗಿದೆ. ಖಲಿಸ್ತಾನಿ ಪರವಾಗಿ ಮಾತನಾಡಿದ್ದಾರೆ ಎನ್ನಲಾದ ಮೂಲ ವೀಡಿಯೊದಲ್ಲಿ ಗೆಹ್ಲೋಟ್ ಅವರು ಅಮೃತ್‌ಪಾಲ್ ಸಿಂಗ್‌ನಂತವರು ದೇಶಕ್ಕೆ ಅಪಾಯಕಾರಿ ಮತ್ತು ಖಲಿಸ್ತಾನಿಗಳು ಹೇಗೆ ಅಪಾಯಕಾರಿ ಎಂದು ಹೇಳಿದ್ದಾರೆ.
ಮತ್ತೊಂದು ವಿಡಿಯೋದಲ್ಲಿ ಪ್ರಧಾನಿ ಮೋದಿ ಮತ್ತು ಮೋಹನ್ ಭಾಗವತ್ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡುತ್ತಿರುವುದರಿಂದ ಅಮೃತ್‌ಪಾಲ್‌ನಂತಹ ಖಲಿಸ್ತಾನಿಗಳು ಹೇಗೆ ಉದ್ಭವಿಸಿದ್ರು ಎಂದು ವಿವರಿಸಿದ್ದಾರೆ. ಆದರೆ ಅವರ ಭಾಷಣದಲ್ಲಿ ಎಲ್ಲಿಯೂ ಖಲಿಸ್ತಾನಿಗಳನ್ನು ಬೆಂಬಲಿಸಿದ್ದು ಕಂಡು ಬಂದಿಲ್ಲ.. ಹಾಗಾಗಿ ರಾಜಸ್ತಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮಾತನಾಡಿರುವ ವೈರಲ್ ವಿಡಿಯೋ ಎಡಿಟೆಡ್ ಎಂಬುದು ಸ್ಪಷ್ಟವಾಗಿದೆ.
ಇದನ್ನೂ ಓದಿ : ಕೇರಳ ಪೋಲಿಸರು ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂಬುದು ಸುಳ್ಳು
ವಿಡಿಯೋ ನೋಡಿ : ಕೇರಳ ಪೋಲಿಸರು ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.