Fact Check: ರಾಹುಲ್ ಗಾಂಧಿಯವರು ಸುಕನ್ಯ ದೇವಿ ಎಂಬ ಹೆಣ್ಣುಮಗಳ ಅತ್ಯಾಚಾರದಲ್ಲಿ ಭಾಗಿಯಾಗಿದ್ದರು ಎಂಬುದು ಸುಳ್ಳು

Rahul Gandhi

ರಾಜಕೀಯ ನಾಯಕರುಗಳ ಮೇಲೆ ಆರೋಪ- ಪ್ರತ್ಯಾರೋಪಗಳನ್ನು ಮಾಡುವುದು ಸರ್ವೇ ಸಾಮಾನ್ಯವಾಗಿರುತ್ತದೆ ಆದರೆ ಕಳೆದ ಎರಡು ದಶಕಗಳಿಂದ ರಾಹುಲ್ ಗಾಂಧಿಯವರ ಮೇಲೆ ಸುಳ್ಳು ಸುದ್ದಿಗಳಿಂದ ಸುಳ್ಳು ಆರೋಪಗಳಿಂದ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ.

2006ರಲ್ಲಿ ಸುಕನ್ಯಾ ದೇವಿ ಎಂಬ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎಂಬ ಹೇಳಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಬಿಜೆಪಿ ಮತ್ತು ಬಲಪಂಥೀಯ ಕಾರ್ಯಕರ್ತರು ಹಂಚಿಕೊಳ್ಳುತ್ತಿದ್ದಾರೆ.

ಆದರೆ ಸತ್ಯವೇನೆಂದರೆ 2012ರಲ್ಲಿ ರಾಹುಲ್ ಗಾಂಧಿ ವಿರುದ್ಧದ ಅತ್ಯಾಚಾರ ಆರೋಪವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. 2006 ರ ಅತ್ಯಾಚಾರ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧದ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ತಿಳಿಸಿದೆ. ಮತ್ತು ಆ ದಿನ ಅತ್ಯಾಚಾರ ನಡೆದಿದೆ ಎಂದು ಸಾಬೀತುಪಡಿಸಲು “ಒಂದು ಸಣ್ಣ ಪುರಾವೆಯೂ ಕಂಡುಬಂದಿಲ್ಲ” ಎಂದು ಹೇಳಿದೆ. ಸುಳ್ಳು ಪ್ರಕರಣ ದಾಖಲಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ (ಎಸ್ಪಿ) ಮಾಜಿ ಶಾಸಕ ಕಿಶೋರ್ ಸಮ್ರಿಟೆ ಅವರಿಗೆ ಸುಪ್ರೀಂ ಕೋರ್ಟ್ ಐದು ಲಕ್ಷ ದಂಡ ವಿಧಿಸಿತ್ತು. ಎಂದು ಅಕ್ಟೋಬರ್ 2012 ರಲ್ಲಿ ‘ಇಂಡಿಯಾ ಟುಡೇ‘ ತನ್ನ ಲೇಖನದಲ್ಲಿ ವರದಿ ಮಾಡಿದೆ.

ಇನ್ನೂ ಆ ಅತ್ಯಾಚಾರ ಪ್ರಕರಣದಲ್ಲಿ ತನ್ನ ವಿರುದ್ಧ ಮಾಡಲಾಗಿರುವ ಆರೋಪಗಳಲ್ಲಿ ಯಾವುದೇ ಸತ್ಯವಿಲ್ಲ ಎಂದು ರಾಹುಲ್ ಗಾಂಧಿ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ‘ದಿ ಟೈಮ್ಸ್ ಆಫ್ ಇಂಡಿಯಾ’ ತನ್ನ ಲೇಖನದಲ್ಲಿ ತಿಳಿಸಿತ್ತು. ಆದ್ದರಿಂದ ರಾಹುಲ್ ಗಾಂಧಿಯವರು ಸುಕನ್ಯ ದೇವಿಯವರ ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿದ್ದರು ಎಂಬುದು ಸುಳ್ಳು.


ಇದನ್ನು ಓದಿ: Fact Check: 5ನೇ ಕಿಂಗ್ ಜಾರ್ಜ್ ಶ್ಲಾಘಿಸಿ ರವೀಂದ್ರನಾಥ ಟ್ಯಾಗೋರ್‌ರವರು “ಜನ ಗಣ ಮನ” ಗೀತೆ ರಚಿಸಿಲ್ಲ


ವಿಡಿಯೋ ನೋಡಿ: Fact Check | ಜನ್‌ಧನ್‌ ಯೋಜನೆಯಲ್ಲಿ 30 ಲಕ್ಷದವರೆಗೆ ಸಾಲ, ಸಬ್ಸಿಡಿ ಸಿಗಲಿದೆ ಎಂಬುದು ಸುಳ್ಳು | Jan Dhan | Bank


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *