“ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ 2017ರಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು. ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ಆಪಾದಿತರಿಗೆ ಮುಂದಿನ ಸೋಮವಾರ ಜನವರಿ 8ರಂದು ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.” ಎಂದು ರಾಜ್ಯದ ಪ್ರಮುಖ ಮಾಧ್ಯಮ ಸಂಸ್ಥೆ ಟಿವಿ 9 ಕನ್ನಡ ಸೇರಿದ ಹಾಗೆ ಹಲವು ಮಾಧ್ಯಮಗಳು ವರದಿಯನ್ನ ಮಾಡಿವೆ.
ಫ್ಯಾಕ್ಟ್‌ಚೆಕ್
ಈ ಸುದ್ದಿ ನಿಜವೇ ಎಂದು ಪರಿಶೀಲಿಸಲಿ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿ ಅಂತರ್ಜಾಲದಲ್ಲಿ ಈ ಕುರಿತು ಹುಡುಕಿದೆವು. ಆಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಕಂಡು ಬಂದಿದೆ. ಅದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಹರಡಬಾರದು ಎಂದು ಕಿವಿ ಮಾತು ಹೇಳುವುದರ ಜೊತೆಗೆ ಈ ಸುದ್ದಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಬರೆದುಕೊಂಡಿದ್ದಾರೆ.
ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ.
2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ… pic.twitter.com/fszzuGtjKB
— Siddaramaiah (@siddaramaiah) January 4, 2024
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ “ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ.”
“2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ.”
ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು.ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.”
ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ” ಬಾಬಾಬುಡನ್ ಗಿರಿಯ ಗೋರಿ ದ್ವಂಸ ಪ್ರಕರಣ ರೀ ಓಪನ್ ಆಗಿಲ್ಲ ಎಂಬುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟ ಪಡಿಸಿದ್ದಾರೆ.
ಇದನ್ನೂ ಓದಿ : Fact Check: ರಾಹುಲ್ ಗಾಂಧಿಯವರು ಸುಕನ್ಯ ದೇವಿ ಎಂಬ ಹೆಣ್ಣುಮಗಳ ಅತ್ಯಾಚಾರದಲ್ಲಿ ಭಾಗಿಯಾಗಿದ್ದರು ಎಂಬುದು ಸುಳ್ಳು
ವಿಡಿಯೋ ನೋಡಿ :Fact Check: ರಾಹುಲ್ ಗಾಂಧಿಯವರು ಸುಕನ್ಯ ದೇವಿ ಎಂಬ ಹೆಣ್ಣುಮಗಳ ಅತ್ಯಾಚಾರದಲ್ಲಿ ಭಾಗಿಯಾಗಿದ್ದರು ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ