“ರಾಮ ಮಂದಿರ ಉದ್ಘಾಟನಾ ದಿನವಾದ ಜನವರಿ 22 ರಂದು ಬರುವ ಭಕ್ತರಿಗೆ ಊಟದ ವ್ಯವಸ್ಥೆಗೆಂದು ತೆಲುಗು ನಟ ಪ್ರಭಾಸ್ 50 ಕೋಟಿ ರೂ ದೇಣಿಗೆ ನೀಡುತ್ತಿದ್ದಾರೆ” ಎಂಬ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಕುರಿತು ಸಾಕಷ್ಟು ಮಂದಿ ನಿಜವೆಂದು ನಂಬಿ ತಮ್ಮ ವೈಯಕ್ತಿಕ ಖಾತೆಗಳಲ್ಲೂ ವ್ಯಾಪಕವಾಗಿ ಶೇರ್ ಮಾಡುತ್ತಿದ್ದಾರೆ.
ಇನ್ನು, ಇದೇ ವೈರಲ್ ಪೋಸ್ಟ್ ಅನ್ನು ಆಧಾರವಾಗಿಟ್ಟುಕೊಂಡು ಕನ್ನಡದ ಏಷ್ಯಾನೆಟ್ ಸುವರ್ಣ ನ್ಯೂಸ್ ಕೂಡ “ಅಯೋಧ್ಯೆ ರಾಮಮಂದಿರಕ್ಕೆ ನಟ ಪ್ರಭಾಸ್ 50 ಕೋಟಿ ರೂ. ದೇಣಿಗೆ, ಊಟದ ಖರ್ಚು ಪೂರ್ತಿ ಯಂಗ್ ರೆಬೆಲ್ ಸ್ಟಾರ್‌ದು..?” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿ ಈಗ ಆ ಸುದ್ದಿಯ ಶೀರ್ಷಿಕೆಯನ್ನು ಕೊಂಚ ಬದಲಾಯಿಸಿ, ಸುದ್ದಿಯ ಮಧ್ಯದಲ್ಲಿ ಸ್ವಲ್ಪ ಸತ್ಯವನ್ನ ಸೇರಿದ್ದಾರೆ.
ಫ್ಯಾಕ್ಟ್‌ಚೆಕ್
ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್ ತಂಡ ಸಂಪೂರ್ಣವಾಗಿ ಪರಿಶೀಲಿಸಿದ್ದು, ಮೊದಲು ಈ ವೈರಲ್ ಪೋಸ್ಟ್ ಕುರಿತು ದೇಶದ ಇನ್ನೀತರ ಯಾವುದೇ ಪ್ರಮುಖ ಸುದ್ದಿ ಸಂಸ್ಥೆಗಳು ಈ ಬಗ್ಗೆ ವರದಿಯನ್ನ ಮಾಡಿವೆಯೇ ಅಂತ ಹುಡುಕಲಾಯಿತು. ಆದರೆ, ಆ ರೀತಿಯ ಯಾವುದೇ ವರದಿಗಳು ಕಂಡು ಬಂದಿಲ್ಲ. ಜೊತೆಗೆ ಪ್ರಭಾಸ್ ಅವರ ಎಲ್ಲಾ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸಲಾಗಿದ್ದು, ಅಲ್ಲಿಯೂ ಯಾವುದೇ ರೀತಿಯಾದ ಮಾಹಿತಿ ಲಭ್ಯವಾಗಿಲ್ಲ.
ಇನ್ನು ಈ ಕುರಿತು ಪ್ರಭಾಸ್ ಅವರ ಆಪ್ತರು ಕೆಲವೊಂದು ಮಾದ್ಯಮಗಳಿಗೆ ಸ್ಪಷ್ಟನೆ ನೀಡಿರುವ ಕುರಿತು ಮಾಹಿತಿ ಲಭ್ಯವಾಗಿದ್ದು. ಪ್ರಭಾಸ್ ಅವರು 50 ಕೋಟಿ ದೇಣಿಗೆ ನೀಡುವುದು ಮತ್ತು ಉಚಿತ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ ಎಂಬುದು ಸುಳ್ಳು ಎಂಬುದನ್ನು ಖಚಿತ ಪಡಿಸಿದ್ದಾರೆ. ಹಾಗಾಗಿ ವೈರಲ್ ಪೋಸ್ಟ್ ಸುಳ್ಳಿನಿಂದ ಕೂಡಿದೆ.
ಇದನ್ನೂ ಓದಿ : Fact Check | ರಾಹುಲ್ ಗಾಂಧಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಧನ್ಯವಾದ ತಿಳಿಸಿದ್ದಾರೆ ಎಂಬುದು ಸುಳ್ಳು
ವಿಡಿಯೋ ನೋಡಿ : Fact Check | ರಾಹುಲ್ ಗಾಂಧಿಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಧನ್ಯವಾದ ತಿಳಿಸಿದ್ದಾರೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ