Fact Check | ಶೇ.80ಕ್ಕಿಂತ ಹೆಚ್ಚು ಅಂಕ ತೆಗೆದ ವಿದ್ಯಾರ್ಥಿಗಳಿಗೆ ಮೊಬೈಲ್‌ ಮತ್ತು ಟ್ಯಾಬ್‌ ವಿತರಿಸಲಾಗುವುದು ಎಂಬುದು ಸುಳ್ಳು

“ಮುಂಬರುವ 10 ಮತ್ತು ದ್ವಿತಿಯ ಪಿಯುಸಿ ಬೋರ್ಡ್ ಪರೀಕ್ಷೆ 2024 ರಲ್ಲಿ ಶೇಕಡಾ 80 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು 4.34 ಲಕ್ಷ ಮೊಬೈಲ್ ಫೋನ್‌ಗಳು ಮತ್ತು ಟ್ಯಾಬ್‌ಗಳನ್ನು ವಿತರಿಸುತ್ತಿದೆ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದೆ.

ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಪರಿಶೀಲನೆ ನಡೆಸಿದಾಗ ಅಸಲಿ ಸಂಗತಿ ಹೊರ ಬಂದಿದ್ದು, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈ ರೀತಿಯ ಸುಳ್ಳು ಸುದ್ದಿ ಹಬ್ಬುತ್ತಿರುವುದು ಬೆಳಕಿಗೆ ಬಂದಿದೆ.

ಫ್ಯಾಕ್ಟ್‌ಚೆಕ್‌
ಈ ಕುರಿತು ಪೂಜ ಅಗರ್ವಾಲ್‌ ಎಂಬಾಕೆ ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆಕೆಯ ಪ್ರಕಾರ 10 ಮತ್ತು ಪಿಯುಸಿ ಬೋರ್ಡ್‌ ಎಕ್ಸಾಮ್‌ನಲ್ಲಿ 80% ಅಂಕ ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮೊಬೈಲ್‌ ಮತ್ತು ಟ್ಯಾಬ್‌ ನೀಡಲಾಗುತ್ತೆ. ಈಕೆಯ ಈ ಹೇಳಿಕೆಯ ಆಧಾರದ ಮೇಲೆ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಸತ್ಯಶೋಧನೆಯನ್ನು ಮಾಡಿದೆ..

ಇದಕ್ಕಾಗಿ ಕೆಲವೊಂದು ಕೀ ಫ್ರೇಮ್‌ಗಳನ್ನು ಬಳಸಿ ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಟವನ್ನು ನಡೆಸಲಾಗಿದೆ. ಆದರೆ ಇದಕ್ಕೆ ಸಂಬಂಧಿಸಿದ್ದಂತೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಮತ್ತೊಂದು ಕಡೆ ಈ ಕುರಿತು ಯಾವುದಾದರೂ ವರದಿಗಳು ಆಗಿವೆಯೇ ಎಂದು ಪರಿಶೀಲನೆಯನ್ನು ನಡೆಸಿದಾಗ ಯಾವುದೇ ರಾಷ್ಟ್ರೀಯ ಮತ್ತು ಸ್ಥಳೀಯ ಹಾಗೂ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿಯೂ ಕೂಡ ಈ ಕುರಿತು ಅಧಿಕೃತ ವರದಿಗಳು ಇದುವರೆಗೂ ಕಂಡು ಬಂದಿಲ್ಲ.

ಮತ್ತೊಂದು ಕಡೆ ಕೇಂದ್ರ ಶಿಕ್ಷಣ ಇಲಾಖೆ ಈ ಕುರಿತು ಯಾವುದಾದರೂ ಸುತ್ತೋಲೆಗಳನ್ನು ಅಥವಾ ಆದೇಶಗಳನ್ನು ಹೊರಡಿಸಿದೆಯೇ ಎಂದು ಪರಿಶೀಲನೆ ನಡೆಸಿದಾಗ ಇದಕ್ಕೆ ಪೂರಕವಾದ ಯಾವುದೇ ರೀತಿಯಾದ ಆದೇಶಗಳು ಇದುವರೆಗೂ ಕಂಡು ಬಂದಿಲ್ಲ. ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ 10 ಮತ್ತು ದ್ವಿತಿಯ ಪಿಯುಸಿಯನ್ನು 80% ಅಂಕಗಳೊಂದಿಗೆ ತೇರ್ಗಡೆಗೊಂಡವರಿಗೆ ಉಚಿತವಾಗಿಇ ಮೊಬೈಲ್‌ ಮತ್ತು ಟ್ಯಾಬ್‌  ನೀಡಲಾಗುತ್ತದೆ ಎಂಬುದು ಸುಳ್ಳಿನಿಂದ ಕೂಡಿದೆ.


ಇದನ್ನೂ ಓದಿ :Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ


ವಿಡಿಯೋ ನೋಡಿ : Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *