“ಸರ್ಕಾರಿ ಅಧಿಕಾರಿಗಳಂತೆ ವೇಷ ಧರಿಸಿ ಜನಗಣತಿ ಮಾಡಲು ಕಳ್ಳರ ಗುಪೊಂದು ಬರುತ್ತದೆ, ಈ ಗುಂಪು ನಿಮ್ಮ ಖಾಸಗಿ ಮಾಹಿತಿಗಳನ್ನು ಸಂಗ್ರಹಿಸುತ್ತವೆ. ಈ ಬಗ್ಗೆ ಪೊಲೀಸ್ ಇಲಾಖೆಯೇ ಎಚ್ಚರಿಕೆಯನ್ನು ನೀಡಿದೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಸಾಕಷ್ಟು ಮಂದಿ ಇದೇ ನಿಜವಾದ ಸುದ್ದಿ ಎಂದು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ.
ಈ ಸುದ್ದಿ ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ನನಿಜವೆಂಬಂತೆ ಹಂಚಿಕೊಳ್ಳಲಾಗುತ್ತಿದೆ. ವಾಸ್ತವದಲ್ಲಿ ಜನಗಣತಿ ಎಂಬುದು ಈಗ ನಡೆಯುತ್ತಿಲ್ಲ. ಆದರೂ ಕೂಡ ಈ ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ. ಮತ್ತು ಸಾಕಷ್ಟು ಮಂದಿ ಇದು ನಿಜವೆಂದು ನಂಬಿದ್ದಾರೆ.
ಫ್ಯಾಕ್ಟ್‌ಚೆಕ್
ಈ ಕುರಿತು ಫ್ಯಾಕ್ಟ್‌ಚೆಕ್ ನಡೆಸಲು ಕನ್ನಡ ಫ್ಯಾಕ್ಟ್‌ಚೆಕ್ ತಂಡ ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಸಾಮಾಜಿಕ ಜಾಲಾತಾಣದಲ್ಲಿ ಹುಡುಕಾಟವನ್ನು ನಡೆಸಿತು. ಈ ವೇಳೆ ವೈರಲ್ ಆಗುತ್ತಿರುವ ಸಂದೇಶಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿಗಳು ಲಭ್ಯವಾಗಿಲ್ಲ.ಇನ್ನು ಪೊಲೀಸ್ ಇಲಾಖೆಯ ಪ್ರಕರಟಣೆಯನ್ನು ಹುಡುಕಿದಾಗ ಈ ವಿಚಾರಕ್ಕೆ ಸಂಬಂಧಿಸಿದ್ದಂತೆ ಯಾವುದೇ ರೀತಿಯಾದ ಪ್ರಕಟಣೆಗಳು ಕೂಡ ಕಂಡು ಬಂದಿಲ್ಲ.
ಇನ್ನು ಹೆಚ್ಚಿನ ಮಾಹತಿಗಾಗಿ ಹುಡುಕಿದಾಗ, ಭಾರತೀಯ ಗೃಹ ಇಲಾಖೆ ಅಥವಾ ಪೊಲೀಸರು ಇಂತಹ ಎಚ್ಚರಿಕೆ ಸಂದೇಶವನ್ನು ನೀಡಿದ ಯಾವುದೇ ವರದಿಗಳು ಕಂಡು ಬಂದಿಲ್ಲ. 2017 ರಲ್ಲಿ, ದಕ್ಷಿಣ ಆಫ್ರಿಕಾದ ಗೃಹ ವ್ಯವಹಾರಗಳ ಈ ರೀತಿಯ ಒಂದು ಪೋಸ್ಟ್ ಅನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿತ್ತು. ಅದರಲ್ಲಿ ಇಲಾಖೆಯು ಇಂತಹ ಮೋಸದ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ವಹಿಸುವಂತೆ ಪ್ರಕಟಣೆ ಹೊರಡಿಸಿತ್ತು.
Media statement on #Elections scam pic.twitter.com/X5ttw3Iulz
— HomeAffairsSA 🇿🇦 (@HomeAffairsSA) October 20, 2017
ಇದೇ ರೀತಿಯ ಸಂದೇಶ ಹಲವು ವರ್ಷಗಳಿಂದ ವಿವಿಧ ದೇಶಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ಈ ಸಂದೇಶಕ್ಕೂ ಭಾರತಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ. ಆದ್ದರಿಂದ, ಭಾರತೀಯ ಪೊಲೀಸರು ಈ ಎಚ್ಚರಿಕೆ ನೀಡಿದ್ದಾರೆ ಎಂಬುದು ಸುಳ್ಳಾಗಿದೆ.
ಇದನ್ನೂ ಓದಿ : Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ
ಈ ವಿಡಿಯೋ ನೋಡಿ : Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.