Fact Check | ಕನ್ನಡ ಸುದ್ದಿ ಮಾಧ್ಯಮಗಳಿಂದ ಶಾಲಾ ವೇಳಾಪಟ್ಟಿ ಬಗ್ಗೆ ಸುಳ್ಳು ಸುದ್ದಿ

“ರಂಜಾನ್ ಆಚಣೆಗಾಗಿ ಸರ್ಕಾರಿ ಶಾಲೆ ಸಮಯ ಬದಲಾವಣೆ, ರಂಜಾನ್ ತಿಂಗಳ ಆರಂಭದಿಂದ ಏಪ್ರಿಲ್ ಹತ್ರವರೆಗೆ ಅನ್ವಯವಾಗುವಂತೆ ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕೆ ಶಾಲೆ ಸಮಯ ಚೇಂಜ್ ಎಂಬ ಸುದ್ದಿಯೊಂದು ವ್ಯಾಪಕವಾಗಿ ಹಬ್ಬುತ್ತಿದೆ, ಜೊತೆಗೆ ಕನ್ನಡದ ಸುದ್ದಿ ಮಾಧ್ಯಮಗಳಾದಂತಹ ಟಿವಿ9 ಕನ್ನಡ, ಸುವರ್ಣ ನ್ಯೂಸ್ ಸೇರಿದ ಹಾಗೆ ಹಲವು ದೃಶ್ಯ ಮಾಧ್ಯಮಗಳು ಕೂಡ ಇದೇ ಸುದ್ದಿಯನ್ನು ಬಿತ್ತರಿಸುವೆ” ಎಂಬ ಸುದ್ದಿಯನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೇ ನಂಬಿ ಸಾಕಷ್ಟು ಮಂದಿ ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಆದರೆ ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಪರಿಶೀಲನೆ ನಡೆಸಿದಾಗ ಅಸಲಿ ವಿಚಾರ ಬಹಿರಂಗೊಂಡಿದೆ.

ಫ್ಯಾಕ್ಟ್‌ಚೆಕ್‌

ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯ ಆಯುಕ್ತರ ಕಚೇರಿಯಿಂದ ಈ ಸುತ್ತೋಲೆ ಹೊರಬಂದಿದೆ.
ಈ ಸುತ್ತೋಲೆಯ ಆರಂಭದಲ್ಲಿಯೇ ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡುವ ಬಗ್ಗೆ ಎಂಬ ಸ್ಪಷ್ಟ ಉಲ್ಲೇಖ ಮಾಡಲಾಗಿದೆ.

ಇನ್ನು ಪ್ರಸ್ತಾವನೆಯಲ್ಲಿ ಕೂಡ ಎರಡನೇ ಪ್ಯಾರದಲ್ಲಿ “ಉಲ್ಲೇಖಿತ 2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಂದು ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ 31 10 2002 ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ಅನ್ನು ಯತಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮನುಸಾರ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ.”ಎನ್ನುವುದನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಅಂದ್ರೆ ಈ ಒಂದು ಸುತ್ತೋಲೆ ಕೇವಲ ರಾಜ್ಯದ ಉರ್ದು ಮಾಧ್ಯಮದ ಕಿರಿಯ ಹಿರಿಯ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ಅನ್ವಯಿಸುತ್ತದೆ ಹೊರತು ಸರ್ಕಾರಿ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಇದರ ಜೊತೆಗೆ ಈ ಸುತ್ತೋಲೆಯನ್ನ ಹೊರಡಿಸಿರುವುದು ಉರ್ದು ಮತ್ತು ಇತರೆ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಲಯ ಹೊರತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಲ್ಲ. ಆದರೂ ಕನ್ನಡದ ಕೆಲವೊಂದು ದೃಶ್ಯ ಮಾಧ್ಯಮಗಳು ದುರುದ್ದೇಶದಿಂದ ಈ ರೀತಿ ಸುಳ್ಳು ಸುದ್ದಿ ಹರಡಿವೆ.


ಇದನ್ನೂ ಓದಿ : Fact Check: ಕಾಂಗ್ರೆಸ್ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ. ಇದು ಎಡಿಟೆಡ್ ವಿಡಿಯೋ


ವಿಡಿಯೋ ನೋಡಿ : Fact Check: ಕಾಂಗ್ರೆಸ್ ಜನರನ್ನು ವಿಭಜಿಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಲ್ಲ. ಇದು ಎಡಿಟೆಡ್ ವಿಡಿಯೋ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *