“ನಮ್ಮ ಹಿಂದೂಗಳು ಶಿರಡಿ ಸಾಯಿಬಾಬಾನಿಗೆ ಹಾಕಿದ ಹಣ ಎಲ್ಲಿಗೆ ಹೋಗುತ್ತೆ ಅಂತಾ ನೋಡಿ. ಇನ್ನಾದರೂ ಹಿಂದೂಗಳು ಎಚ್ಚೆತ್ತುಕೊಳ್ಳಿ.. ಮುಸ್ಲಿಂ ಮುಖಂಡು ಈ ಹಣವನ್ನು ಸಂಗ್ರಹಿಸಿಕೊಳ್ಳುತ್ತಿರುವ ವಿಡಿಯೋ ನೋಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು. ಇದನ್ನೇ ನಿಜವಾದ ಸುದ್ದಿ ಎಂದು ನಂಬಿ ಸಾಕಷ್ಟು ಮಂದಿ ಶೇರ್ ಕೂಡ ಮಾಡುತ್ತಿದ್ದಾರೆ.
ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಕೆಲವು ಮುಸಲ್ಮಾನ ವ್ಯಕ್ತಿಗಳು ರಾಶಿ ರಾಶಿ ಹಣವನ್ನು ಚೀಲವೊಂದಕ್ಕೆ ತುಂಬಿಸುತ್ತಿರುವುದನ್ನು ಕಾಣ ಬಹುದಾಗಿದೆ. ಆದರೇ ಈ ಹಣ ಯಾವ ದೇಶಕ್ಕೆ ಸಂಬಂಧಿಸಿದ್ದು, ಮತ್ತು ಇದು ಯಾವ ದೇವಸ್ಥಾನ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೂ ಇದು ವೈರಲ್ ಬರಹಕ್ಕೆ ಹೊಂದಿಕೊಳ್ಳುವಂತೆ ಶೇರ್ ಮಾಡಲಾಗುತ್ತಿದೆ.
ಫ್ಯಾಕ್ಟ್‌ಚೆಕ್
ಹೀಗೆ ವ್ಯಾಪಕವಾಗಿ ವೈರಲ್ ಆಗುತ್ತಿರುವ ವಿಡಿಯೋ ಕುರಿತು ಪರಿಶೀಲನೆ ನಡೆಸಲು ವಿಡಿಯೋವನ್ನು ವಿವಿಧ ಕೀ ಫ್ರೇಮ್‌ಗಳಾಗಿ ಬದಲಾಯಿಸಿ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಟವನ್ನು ನಡೆಸಲಾಯಿತು. ಈ ವೇಳೇ ಇದೇ ರೀತಿಯ ಹಲವು ಸುಳ್ಳು ಬರಹಗಳೊಂದಿಗೆ ವೈರಲ್ ವಿಡಿಯೋವನ್ನು ಹಂಚಿಕೊಂಡಿರುವುದು ಕಂಡು ಬಂದಿದೆ. ಅದೇ ರೀತಿಯಲ್ಲಿ ಈ ವಿಡಿಯೋ ಕಳೆದ ಒಂದು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ವಿವಿಧ ಸುಳ್ಳು ಬರಹಗಳೊಂದಿಗೆ ಹರಿದಾಡಿದೆ ಎಂಬುದು ಕೂಡ ದೃಢ ಪಟ್ಟಿದೆ.
ಅಸಲಿಗೆ ಜೂನ್, 2023 ರಲ್ಲಿ ಇದೇ ರೀತಿಯ ವಿಡಿಯೋವೊಂದು ವೈರಲ್ ಆಗಿತ್ತು. ಹಣ ತುಂಬಿಸುವ ಚೀಲಗಳ ಮೇಲೆ ಬಂಗಾಳಿ ಸಾಲುಗಳನ್ನು ಸ್ಪಷ್ಟವಾಗಿ ನೋಡಬಹುದು, ಬಾಂಗ್ಲಾದೇಶದ ಕಿಶೋರ್‌ಗಂಜ್‌ನಲ್ಲಿರುವ ಪಾಗ್ಲಾ ಮಸೀದಿಗೆ 5 ಕೋಟಿ 59 ಲಕ್ಷ ಬಾಂಗ್ಲಾದೇಶಿ ಟಾಕಾ ಮತ್ತು ವಜ್ರದ ಆಭರಣವನ್ನು ದೇಣಿಗೆ ನೀಡಲಾಗಿದೆ ಎಂದು ಹೇಳುವ ಇದೇ ವೀಡಿಯೊವನ್ನು ಮೇ 6, 2023 ರಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಲಾಗಿದೆ.
ಈ ಬಗ್ಗೆ ಇನ್ನೂ ಹೆಚ್ಚಿನ ಹುಡುಕಾಟವನ್ನು ನಡೆಸಿದಾಗಿ ಈ ಕುರಿತು ಬಾಂಗ್ಲಾದೇಶದ ಸುದ್ದಿವಾಹಿನಿಗಳು ಪಾಗ್ಲಾ ಮಸೀದಿಗೆ ನೀಡಿದ ಮೊತ್ತದ ಬಗ್ಗೆ ವರದಿ ಮಾಡಿರುವುದು ಕೂಡ ಕಂಡು ಬಂದಿದೆ. ಬಾಂಗ್ಲಾದ ಜಾಗೋ ನ್ಯೂಸ್‌ನ ಸುದ್ದಿ ಬುಲೆಟಿನ್ ಇದೇ ವರದಿಯನ್ನ ಮಾಡಿದೆ. ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಹಾಗಾಗಿ ವೈರಲ್ ಆಗಿರುವ ವಿಡಿಯೋಗೂ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ.
ಇದನ್ನೂ ಓದಿ : Fact Check: ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು
ಈ ವಿಡಿಯೋ ನೋಡಿ : Fact Check: ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.