Fact Check: ನರೇಂದ್ರ ಮೋದಿಯವರ ಅಧಿಕಾರವಾದಿಯಲ್ಲಿ ಒಂದೇ ಒಂದು ರಾಜ್ಯ ಸರ್ಕಾರವನ್ನು ಅಮಾನತ್ತು ಮಾಡಿಲ್ಲ ಎಂಬುದು ಸುಳ್ಳು

Narendra Modi

“ನೆಹರು 7 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ಇಂದಿರಾ ಗಾಂಧಿಯವರ ಕಾಲದಲ್ಲಿ 49 ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ರಾಜೀವ್ ಗಾಂಧಿ ಕಾಲದಲ್ಲಿ 6 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ನರಸಿಂಹ ರಾವ್ ಕಾಲದಲ್ಲಿ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು, ಮನಮೋಹನ್ ಸಿಂಗ್ ಕಾಲದಲ್ಲಿ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು. ಆದರೆ 2014ರ ನಂತರ ಒಂದೇ ಒಂದು ರಾಜ್ಯ ಸರ್ಕಾರವನ್ನು ಅಮಾನತ್ತು ಮಾಡಿಲ್ಲ. ಆದರೂ ಮೋದಿ ಸರ್ವಾಧಿಕಾರಿಯೇ?” ಎಂದು ಪ್ರತಿಪಾದಿಸಿದ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್: ಸ್ವಾತಂತ್ರ್ಯದ ನಂತರ, ವಿವಿಧ ರಾಜ್ಯಗಳಲ್ಲಿ ಹಲವಾರು ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. ಜವಾಹರಲಾಲ್ ನೆಹರು ಅವರ ಅಧಿಕಾರಾವಧಿಯಲ್ಲಿ 8 ಬಾರಿ ವಿಧಿಸಲಾಗಿದ್ದರೆ, ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ 48 ಸಂದರ್ಭಗಳಲ್ಲಿ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು ರಾಜೀವ್ ಗಾಂಧಿಯವರ ಆಡಳಿತಾವಧಿಯಲ್ಲಿ 6 ಬಾರಿ , ಪಿವಿ ನರಸಿಂಹ ರಾವ್ ಆಡಳಿತಾವಧಿಯಲ್ಲಿ 11  ಬಾರಿ ಮತ್ತು ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ 10 ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

ಅಂತೆಯೇ ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿಯೂ 5 ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಅಲ್ಲದೇ ಆಪರೇಷನ್ ಕಮಲದ ಹೆಸರಿನಲ್ಲಿ ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ ಸರ್ಕಾರಗಳನ್ನು ಬದಲಿಸಲಾಗಿದೆ. 1947 ರಿಂದ 2016 ರವರೆಗೆ ವಿವಿಧ ಸಂದರ್ಭಗಳಲ್ಲಿ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಿಸಿದ ಘಟನೆಗಳನ್ನು ವಿವರಿಸುವ ಸಂಸತ್ತಿನ ಲೈಬ್ರರಿಯಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ 2014-16 ರ ನಡುವೆ ಮೂರು ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ. ಮಹಾರಾಷ್ಟ್ರದಲ್ಲಿ 28-9-2014 ರಂದು, ಅರುಣಾಚಲ ಪ್ರದೇಶದಲ್ಲಿ 26-1-2016 ರಂದು ಮತ್ತು ಉತ್ತರಾಖಂಡದಲ್ಲಿ 27-3-2016 ರಂದು ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

2019 ರ RTI ಪ್ರಶ್ನೆಯು ರಾಜಕೀಯ ಅಸ್ಥಿರತೆಯ ಕಾರಣದಿಂದಾಗಿ 12-11-2019 ರಂದು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ ಎಂದು ತಿಳಿಸುತ್ತದೆ, ಅದನ್ನು ಅಂತಿಮವಾಗಿ 23-11-2019 ರಂದು ಹಿಂತೆಗೆದುಕೊಳ್ಳಲಾಯಿತು.

ಆದ್ದರಿಂದ ನರೇಂದ್ರ ಮೋದಿಯವರ ಅಧಿಕಾರವಾದಿಯಲ್ಲಿ ಒಂದೇ ಒಂದು ರಾಜ್ಯ ಸರ್ಕಾರವನ್ನು ಅಮಾನತ್ತು ಮಾಡಿಲ್ಲ ಪ್ರತಿಪಾದನೆ ತಪ್ಪಾಗಿದೆ.


ಇದನ್ನು ಓದಿ: Fact Check: ಕರಾವಳಿಯಲ್ಲಿ ಮುಸ್ಲಿಮರು ಹಿಂದೂ ದೇವಾಲಯವನ್ನ ಮಸೀದಿಯನ್ನಾಗಿ ಮಾಡಿದ್ದಾರೆ ಎಂಬುದು ನಿಜವಲ್ಲ


ವಿಡಿಯೋ ನೋಡಿ: Fact Check: ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *