ಸಿದ್ದರಾಮಯ್ಯನವರು ಮಹಿಳೆಯೊಬ್ಬರ ಬಟ್ಟೆ ಎಳೆದು ದೌರ್ಜನ್ಯ ನಡೆಸಿದ್ದರು ಎಂದು ಸುಳ್ಳು ಹರಡಿದ ಆರ್. ಅಶೋಕ್

ಸಿದ್ದರಾಮಯ್ಯ

ಇತ್ತೀಚೆಗೆ ಚಾಮರಾಜನಗರದ ಹನೂರು ಕ್ಷೇತ್ರದಲ್ಲಿ ನಡೆದ ಸಭೆಯೊಮದರಲ್ಲಿ ಸಿದ್ದರಾಮಯ್ಯನವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯನವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ರೌಡಿ. ಆತ ಗುಜರಾತ್ ನಲ್ಲಿ ನರಮೇಧಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿಯವರು ಅಂತವರನ್ನು ತಮ್ಮ ಜೊತೆಗೆ ಇಟ್ಟುಕೊಳ್ಳುವುದು ಸರಿಯಲ್ಲ ಎಂದಿದ್ದಾರೆ.

ಇದಕ್ಕೆ ತೀವ್ರ ವಿರೋದ ವ್ಯಕ್ತವಾಗಿದ್ದು ಸದ್ಯ ಯತೀಂದ್ರ ಸಿದ್ದರಾಮಯ್ಯನವರನ್ನು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಸಾಕಷ್ಟು ಟೀಕಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿರುವ ವಿರೋದ ಪಕ್ಷದ ನಾಯಕ ಆರ್. ಅಶೋಕ್ ಅವರು “ಸದನದಲ್ಲಿ ಪೊಲೀಸರನ್ನು ಬೆದರಿಸುವುದು, ಸ್ಪೀಕರ್ ಗೆ ಧಮ್ಕಿ ಹಾಕುವುದು, ಮಹಿಳೆಯರ ಬಟ್ಟೆ ಎಳೆದು ದೌರ್ಜನ್ಯ ಮಾಡುವುದು, ಕಾರ್ಯಕರ್ತರ ಕಪಾಳಕ್ಕೆ ಹೊಡೆಯುವುದು, Mr.ಯತೀಂದ್ರ ಅವರೇ, ನಿಮ್ಮ ತಂದೆ ಸಿದ್ದರಾಮಯ್ಯನವರು ಗೂಂಡಾಗಿರಿ ಪ್ರದರ್ಶನ ಮಾಡಿರುವ ಇಂತಹ ದೃಶ್ಯಗಳು ಇಂಟರ್ ನೆಟ್ ನಲ್ಲಿ ಸಾಕಷ್ಟಿವೆ.” ಎಂದು ಕೆಲವು ಹಳೆಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್: ಈ ಘಟನೆ 2019ರಲ್ಲಿ ನಡೆದಿದ್ದು, ವರುಣಾ ಕ್ಷೇತ್ರದ ಶಾಸಕ, ಯತೀಂದ್ರ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ನಡೆದ ಅಹವಾಲು ಸಭೆಯಲ್ಲಿ ಮಗನ ವಿರುದ್ಧ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜಮಾಲ ಅವರು ದೂರು ಹೇಳಿ, ಮೇಜು ಕುಟ್ಟಿ ಮಾತನಾಡಿದಾಗ ಸಿದ್ದರಾಮಯ್ಯ ಸಿಟ್ಟಿಗೆದ್ದಿದ್ದು, ಆಕೆ ಕೈಯಿಂದ ಮೈಕ್ ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದುಪ್ಪಟ್ಟಾ ಜಾರಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಇಂದು ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ‌ ದೀರ್ಘ ಭಾಷಣವನ್ನು ನಿಲ್ಲಿಸಲು ಪ್ರಯತ್ನಿಸುವಾಗ ನಡೆದ ಘಟನೆ‌ ಆಕಸ್ಮಿಕವಾದುದು, ಅದರಲ್ಲಿ ದುರುದ್ದೇಶ ಇರಲಿಲ್ಲ. 15 ವರ್ಷಗಳಿಂದ‌ ನಾನು ಬಲ್ಲ‌ ಆ‌‌ ಕಾರ್ಯಕರ್ತೆ ನನ್ನ‌ಸೋದರಿ ಸಮಾನ. ಎಂದಿದ್ದರು.

ಈ ಕುರಿತು ಸ್ಪಷ್ಟನೆ ನೀಡಿರುವ ಜಮಲಾರ್ ಅವರು “ಸಿದ್ದರಾಮಯ್ಯ ಒಳ್ಳೆಯ ಮುಖ್ಯಮಂತ್ರಿ ಆಗಿದ್ದು, ಇವತ್ತು ಅವರು ನಮ್ಮ ಕ್ಷೇತ್ರಕ್ಕೆ ಬಂದಿದ್ದರು. ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದೆ. ಆ ವೇಳೆ ನಾನು ಟೇಬಲ್ ಮೇಲೆ ಕೈ ಇಟ್ಟು ಮಾತನಾಡಿದ್ದೆ. ಆದ್ದರಿಂದ ಅವರಿಗೆ ಕೋಪ ಬಂದಿದೆ ಅಷ್ಟೇ ಎಂದು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಜಮಲಾರ್ ತಿಳಿಸಿದ್ದಾರೆ.

“ಮಾಜಿ ಸಿಎಂ ಎದುರು ನಾನು ಆ ರೀತಿ ಕೋಪದಿಂದ ಮಾತನಾಡಬಾರದಿತ್ತು. ಪರಿಣಾಮ ಅವರಿಗೆ ಸಾರ್ವಜನಿಕ ಸಭೆಯಲ್ಲಿ ಅಸಮಾಧಾನ ಆಗಿದೆ. ಅಲ್ಲದೇ ಕ್ಷೇತ್ರದ ಶಾಸಕರು ಬರುತ್ತಿದ್ದ ಬಗ್ಗೆ ನಮಗೆ ಮಾಹಿತಿ ಇರುತ್ತಿರಲಿಲ್ಲ. ಆದ್ದರಿಂದ ಅದನ್ನು ಕೇಳಿದೆ. ನನಗೆ ಪಕ್ಷದ ಕಾರ್ಯಕರ್ತರು ಮಾಹಿತಿ ನೀಡದೇ ಇದ್ದದ್ದು ಸಮಸ್ಯೆ ಕಾರಣವಾಗಿದೆ. ಇದಕ್ಕಿಂತ ಹೆಚ್ಚಿನ ಸಮಸ್ಯೆ ಇಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.
ಆದ್ದರಿಂದ ಪ್ರಸ್ತುತ ವಿಡಿಯೋ ಹಂಚಿಕೊಂಡಿರುವ ಬಿಜೆಪಿ ನಾಯಕ ಆರ್. ಅಶೋಕ್ ಅವರ ಮಾಹಿತಿ ತಪ್ಪಾಗಿದ್ದು ಜನರಿಗೆ ತಪ್ಪು ಸಂದೇಶ ನೀಡುವಂತಿದೆ.

ಇದನ್ನು ಓದಿ: Fact Check | ಸೂಪರ್ ಮಾರ್ಕೆಟ್‌ಗಳಲ್ಲಿ ಮನುಷ್ಯನ ಕೈಗಳ ಮಾಂಸವನ್ನು ಮಾರಲಾಗುತ್ತಿದೆ ಎಂಬುದು ಸುಳ್ಳು


ವಿಡಿಯೋ ನೋಡಿ: Fact Check: ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.


Leave a Reply

Your email address will not be published. Required fields are marked *