Fact Check: ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಿಲ್ಲ

ಸರ್ಧಾರ್ ವಲ್ಲಭಬಾಯಿ ಪಟೇಲ್

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಬಿಜೆಪಿಯೇತರ ರಾಜ್ಯಗಳ ಮೇಲೆ ಅದರಲ್ಲೂ ದಕ್ಷಿಣ ರಾಜ್ಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ. ಇತ್ತೀಚೆಗೆ ವಿಡಿಯೋ ಒಂದು ವೈರಲ್ ಆಗಿದ್ದು ಅದರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಗುಂಪೊಂದು ಟ್ಯಾಕ್ಟ್‌ರ್ ಬಳಸಿ ತೆರವುಗೊಳಿಸುತ್ತಿರುವುದನ್ನು ಕಾಣಬಹುದಾಗಿದೆ.

ಆದರೆ, “ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ.” ಎಂದು ಪ್ರತಿಪಾದಿಸಲಾಗುತ್ತಿದೆ. 

ಫ್ಯಾಕ್ಟ್‌ಚೆಕ್: ಈ ಕುರಿತು ಹುಡುಕಿದಾಗ, ಈ ಘಟನೆ 26 ಜನವರಿ 2024ರಲ್ಲಿ ಮಧ್ಯ ಪ್ರದೇಶದ ಉಜ್ಜಯಿನಿ ಜಿಲ್ಲೆಯ ಮಕಾಡೋನ್ ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ರಾಷ್ಟ್ರ ನಾಯಕರ ಮೂರ್ತಿಯನ್ನು ಸ್ಥಾಪಿಸುವುದರ ಕುರಿತು ಎರಡು ಸಮುದಾಯಗಳ ನಡುವೆ ವಿವಾಧಕ್ಕೆ ಕಾರಣವಾಗಿದೆ. ಮಾಳ್ವಿಯ ಸಮುದಾಯದವರು ಪಟ್ಟಣದ ಪ್ರಮುಖ ವೃತ್ತದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಮೂರ್ತಿಯನ್ನು ಸ್ಥಾಪಿಸಲು ಸಿದ್ದತೆ ನಡೆಸಿದ್ದರು ಆದರೆ ಪಾಟಿದಾರ್ ಸಮುದಾಯದವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಪ್ರತಿಷ್ಟಾಪಿಸಬೇಕು ಎಂದು ಒತ್ತಾಯಿಸಿದ್ದರು ಮತ್ತು ರಾತ್ರೋ ರಾತ್ರಿ ಮೂರ್ತಿಯನ್ನು ಸ್ಥಾಪಿಸಿದ್ದರು. ಇದರಿಂದ ಸಿಟ್ಟಿಗೆದ್ದ ಭೀಮ್ ಆರ್ಮಿ ಕಾರ್ಯಕರ್ತರು ಮೂರ್ತಿಯನ್ನು ತೆರವುಗೊಳಿಸಿದ್ದಾರೆ.

ಸರ್ದಾರ್ ಪಟೇಲ್ ಅವರ ಪ್ರತಿಮೆಯ ಅಪವಿತ್ರಗೊಳಿಸುವಿಕೆಯಿಂದ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು, ಇದರಲ್ಲಿ ಪೊಲೀಸ್ ಅಧಿಕಾರಿ ಮತ್ತು ಕಾನ್‌ಸ್ಟೆಬಲ್ ಸೇರಿದಂತೆ ಹಲವಾರು ಜನರು ಗಾಯಗೊಂಡರು ಮತ್ತು ವಾಹನವನ್ನು ಸುಟ್ಟುಹಾಕಲಾಯಿತು. ಈ ಕುರಿತು ಮಧ್ಯ ಪ್ರದೇಶದ ಲಲ್ಲನ್‌ಟಾಪ್ ಎಂಬ ಸುದ್ದಿ ಮಾಧ್ಯಮ ವರದಿ ಮಾಡಿದ್ದು ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದೆ.

ಮಕಾಡನ್ ಪೊಲೀಸ್ ಠಾಣೆಯ ಉಸ್ತುವಾರಿ ಭೀಮ್ ಸಿಂಗ್ ದೇವ್ಡಾ ಅವರನ್ನು ಪ್ರಕರಣದಲ್ಲಿ ‘ಅಲಭ್ಯ ವರ್ತನೆ’ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ.

ಆದ್ದರಿಂದ ಕರ್ನಾಟಕದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೂರ್ತಿಯನ್ನು ಹೊಡೆದು ಹಾಕಲಾಗಿದೆ ಎಂಬುದು ಸುಳ್ಳು.


ಇದನ್ನು ಓದಿ: Fact Check: ಮಂಗಳೂರಿನ ಇಫ್ತಾರ್ ಕೂಟದ ವಿಡಿಯೋವನ್ನು ಬಂಗಾಳದ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿದೆ


ವಿಡಿಯೋ ನೊಡಿ: ಯುಟ್ಯೂಬರ್ ಧ್ರುವ್ ರಾಠೀ ಪಾಕಿಸ್ತಾನ ಮೂಲದವರೆಂದು ಸುಳ್ಳು ಹರಡಲಾಗುತ್ತಿದೆ | Dhruv Rathee


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *