Fact Check | ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ ಎಂಬುದು ಸುಳ್ಳು

“ಚೀನಾ ಮುನಿಸುಕೊಳ್ಳುತ್ತದೆ ಎಂಬ ಕಾರಣಕ್ಕೆ ಅರುಣಾಚಲ ಪ್ರದೇಶದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ ಮತ್ತು ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ನ್ಯಾಯ ಯಾತ್ರೆ ಕೂಡ ಲಡಾಕ್‌ನಲ್ಲಿ ನಡೆಸಲಾಗಿಲ್ಲ. ಇದು ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ಅವರಿಗೆ ಚೀನಾದ ಮೇಲೆ ಎಷ್ಟು ಪ್ರೀತಿ ಇದೆ ಎಂಬುದನ್ನು ತೋರಿಸುತ್ತಿದೆ” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ಇನ್ನು ಇದೇ ಪೋಸ್ಟ್‌ ಗಮನಿಸಿದ ಸಾಕಷ್ಟು ಮಂದಿ ಇದನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಳತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ಆಡಳಿತರೂಢ ಬಿಜೆಪಿ ಪಕ್ಷದ ಬೆಂಬಲಿಗರು ಇದನ್ನೇ ನಿಜವೆಂದು ನಂಬಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ.

 

ಫ್ಯಾಕ್ಟ್‌ಚೆಕ್‌

ಈ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲಿಸಲು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ  ವೈರಲ್‌ ಆಗುತ್ತಿರುವ ಪೋಸ್ಟ್‌ನ ಕುರಿತು ಕೆಲ ಕೀ ವರ್ಡ್‌ಗಳನ್ನು ಬಳಸಿ ಹುಡುಕಾಟವನ್ನು ನಡೆಸಿತು. ಇದಕ್ಕಾಗಿ ಈ ಕುರಿತು ಯಾವುದಾದರು ವರದಿಗಳು ರಾಷ್ಟ್ರೀಯ ಮತ್ತು ಸ್ಥಳೀಯ ಮಾಧ್ಯಮಗಳಲ್ಲಿ ಕಂಡು ಬಂದಿದೆಯೇ ಎಂದು ಹುಡುಕಾಟ ನಡೆಸಿದಾಗ ಎಲ್ಲಿಯೂ ಕೂಡ ಈ ಬಗ್ಗೆ ವೈರಲ್‌ ಆಗುತ್ತಿರುವ ಪೋಸ್ಟ್‌ಗೆ ಪೂರಕವಾದ ವರದಿಗಳು ಕಂಡು ಬಂದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಹುಡುಕಿದಾಗ 8 ಏಪ್ರಿಲ್‌ 2024ರಂದು ಟೈಮ್ಸ್‌ ಆಫ್‌ ಇಂಡಿಯಾದಲ್ಲಿ ಪ್ರಕಟಗೊಂಡ ವರದಿಯಲ್ಲಿ ಅರುಣಾಚಲ ಪ್ರದೇಶದ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವುದು ಸ್ಪಷ್ಟವಾಗಿ ಕಂಡು ಬಂದಿದೆ. ಇನ್ನು, ಈಗಾಗಲೆ ಈ ಕುರಿತು ಮಾಹಿತಿಯನ್ನು ಚುನಾವಣ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಮಾಡಿಸಿದ್ದು, ಬೋಸಿರಾಮ್ ಸಿರಾಮ್ ಮತ್ತು ನಬಾಮ್ ಟುಕಿ ಎಂಬ ಕಾಂಗ್ರೆಸ್‌ ಅಭ್ಯರ್ಥಿಗಳು ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ದ ಹಿಂದೂ ಕೂಡ ವರದಿಯನ್ನು ಪ್ರಕಟಿಸಿದೆ ಇನ್ನು ಇನ್ನೂ ಅರುಣಾಚಲ ವಿಧಾನಸಭೆ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್‌ನ ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವ ಕುರಿತು ಕೂಡ ವರದಿಗಳು ಕಂಡು ಬಂದಿದೆ.  ಹಾಗಾಗಿ‌‌ ಮೇಲಿನ‌ ಆರೋಪಗಳು ಸುಳ್ಳಿನಿಂದ ಕೂಡಿದೆ.


ಇದನ್ನೂ ಓದಿ : Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ


ಈ ವಿಡಿಯೋ ನೋಡಿ : Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *