Fact Check | ಬಿಜೆಪಿ ನಾಯಕನ ಮೇಲೆ ಡಿಎಂಕೆ ಸದಸ್ಯರು ಹಲ್ಲೆ ಮಾಡಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಬಿಜೆಪಿ ಮುಖಂಡ ರಾಜೇಶ್ ಬಿಜು ಅವರನ್ನು ಡಿಎಂಕೆ ಪಕ್ಷದ ಕಾರ್ಯಕರ್ತರು ಥಳಿಸಿದ್ದಾರೆ. ಇದು ತಮಿಳುನಾಡು ಸರ್ಕಾರ ಬಿಜೆಪಿ ಕಾರ್ಯಕರ್ತರನ್ನು ನಡೆಸಿಕೊಳ್ಳುವ ರೀತಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ಮಂದಿ ತಮಿಳುನಾಡಿನ ಡಿಎಂಕೆ ಸರ್ಕಾರದ ವಿರುದ್ಧ ವ್ಯಾಪಕವಾಗಿ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ.

ಸುಳ್ಳು ಮಾಹಿತಿಯೊಂದಿಗೆ ವೈರಲ್‌ ಆಗುತ್ತಿರುವ ಪೋಸ್ಟ್‌
ಸುಳ್ಳು ಮಾಹಿತಿಯೊಂದಿಗೆ ವೈರಲ್‌ ಆಗುತ್ತಿರುವ ಪೋಸ್ಟ್‌

ಇನ್ನು ಕೆಲವು ಮಂದಿ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಇದೇ ವೇಳೆಯಲ್ಲಿ ಈ ವಿಡಿಯೋ ಕೇವಲ ತಮಿಳುನಾಡು ಮಾತ್ರವಲ್ಲದೆ ಬೇರೆ ಬೇರೆ ರಾಜ್ಯಗಳಲ್ಲಿ ಕೂಡ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತಿದೆ. ಆ ಮೂಲಕ ಇಂಡಿಯಾ ಮೈತ್ರಿಕೂಟ ಡಿಎಂಕೆ ಪಕ್ಷ ಬಿಜೆಪಿ ಕಾರ್ಯಕರ್ತರ ಮೇಲೆ ಗೂಂಡಗಿರಿಯನ್ನು ಪ್ರದರ್ಶಿಸುತ್ತಿದೆ ಎಂದು ಕೂಡ ಬಿಂಬಿಸಲಾಗುತ್ತಿದೆ. ಹಾಗಾದರೆ ಈ ವಿಡಿಯೋದಲ್ಲಿನ ವಾಸ್ತವವೆನು ಎಂಬುದನ್ನು ಈ ಅಂಕಣದಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್‌ಚೆಕ್‌

ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಪರಿಶೀಲನೆ ನಡೆಸಿದಾಗ ವೈರಲ್‌ ಆಗಿರುವ ವಿಡಿಯೋ 2023ರದ್ದಾಗಿದೆ. ವಿಡಿಯೋದಲ್ಲಿ ಜಗಳವಾಡುತ್ತಿರುವ ಎರಡೂ ಬಣದವರು ಬಿಜೆಪಿಯವರೇ ಆಗಿದ್ದಾರೆ. ವಿಡಿಯೋದಲ್ಲಿ ಕಾಣುವ ವ್ಯಕ್ತಿಗಳು ಡಿಎಂಕೆ ಪಕ್ಷದ ಸದಸ್ಯರಲ್ಲ. ಚೆನ್ನೈ ಪೂರ್ವ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಎಸ್.ಸುಬ್ಬಯ್ಯ ಮತ್ತು ಅವರ ಬೆಂಬಲಿಗರು ಬಿಜೆಪಿ ಐಟಿ ವಿಭಾಗದ ಕಾರ್ಯದರ್ಶಿ ರಾಜೇಶ್ ಬಿಜು ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ತಮಿಳಿನ ಮಲೈಮುರಾಸು ಎಂಬ ಸುದ್ದಿ ವಾಹಿನಿ ಕೂಡ ತನ್ನ ಯುಟ್ಯೂಬ್‌ ಚಾನಲ್‌ನಲ್ಲಿ ವರದಿಯನ್ನು ಪ್ರಸಾರ ಮಾಡಿದೆ.

ಇನ್ನು ಈ ಕುರಿತು 1 ಆಗಸ್ಟ್‌ 2023ರಂದು ಪಕಟವಾಗಿದ್ದ ಅಂಕಣವೊಂದು ಪತ್ತೆಯಾಗಿದ್ದು ಅದರಲ್ಲಿ,  ಬಿಜೆಪಿಯ ಸುಬ್ಬಯ್ಯ ಮದ್ಯ ಸೇವಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆ ಅಂಕಣದಲ್ಲಿ ಉಲ್ಲೇಖಿಸಲಾಗಿತ್ತು.

ಇದಲ್ಲದೆ, ಗ್ರೇಟರ್ ಚೆನ್ನೈ ಪೋಲೀಸ್ ಅವರ ಅಧಿಕೃತ ‘X’ ಖಾತೆಯಲ್ಲಿ ಇತ್ತೀಚಿನ ಟ್ವೀಟ್ ಅನ್ನು ಹುಡುಕಾಟ ನಡಿಸಿದಾಗ, ವೈರಲ್‌ ವಿಡಿಯೊದಲ್ಲಿ ಚಿತ್ರಿಸಲಾದ ಘಟನೆ ಇತ್ತೀಚೆಗೆ ಸಂಭವಿಸಿಲ್ಲ. ಇದು 31 ಜುಲೈ 2023 ರಂದು ಸಂಭವಿಸಿದೆ ಎಂದು ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಉಲ್ಲೇಖಿಸಿದ್ದಾರೆ.. ನಂಗನಲ್ಲೂರಿನಲ್ಲಿ ರಾಜಕೀಯ ಪಕ್ಷವೊಂದರ ಎರಡು ಬಣಗಳ ನಡುವಿನ ವೈಯುಕ್ತಿಕ ಜಗಳಕ್ಕೆ ಸಂಬಂಧಿಸಿದ ವಿಡಿಯೋ ಇದಾಗಿದೆ ಎಂಬುದನ್ನು ಕೂಡ ಅವರ ತಮ್ಮ ಟ್ವಿಟ್‌ನಲ್ಲಿ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ ಈ ಎಲ್ಲಾ ಅಂಶಗನ್ನು ಕೂಲಂಕುಶವಾಗಿ ಪರಿಶೀಲಿಸಿದಾಗ ವೈರಲ್‌ ವಿಡಿಯೋದಲ್ಲಿ ಯುವಕನನ್ನು ಥಳಿಸುತ್ತಿರುವುದು ಡಿಎಂಕೆ ಪಕ್ಷ ಅಲ್ಲ ಎಂಬುದು ಸಾಭೀತಾಗಿದ್ದು, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈ ರೀತಿಯ ಸಳ್ಳು ಸುದ್ದಿಗಳು ಕೂಡ ಹೆಚ್ಚಾಗಿದೆ.. ಹಾಗಾಗಿ ಯಾವುದೇ ಸುದ್ದಿಗಳನ್ನು ನಂಬುವ ಅಥವಾ ಶೇರ್‌ ಮಾಡುವ ಮೊದಲು ಎಚ್ಚರಿಕೆ ವಹಿಸಿ


ಈ ಸುದ್ದಿಯನ್ನು ಓದಿ : ಮೈಸೂರಿನ ಸಭೆಯಲ್ಲಿ ದೇವೇಗೌಡರು ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಕರೆಕೊಟ್ಟಿದ್ದಾರೆ ಎಂಬುದು ಸುಳ್ಳು


ಈ ವಿಡಿಯೋ ನೋಡಿ :  ಮೈಸೂರಿನ ಸಭೆಯಲ್ಲಿ ದೇವೇಗೌಡರು ಬಿಜೆಪಿಯನ್ನು ಸೋಲಿಸಲೇಬೇಕು ಎಂದು ಕರೆಕೊಟ್ಟಿದ್ದಾರೆ ಎಂಬುದು ಸುಳ್ಳು


ನಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *