“ಈ ವಿಡಿಯೋ ನೋಡಿ ರಾಷ್ಟ್ರದ ಸಂಪತ್ತನ್ನು ಅಲ್ಪಸಂಖ್ಯಾತರಿಗೆ ಮರುಹಂಚಿಕೆ ಮಾಡುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ. ಇವರಿಗೆ ಮತ ಕೊಟ್ಟರೆ ದೇಶದ ಸಂಪತ್ತು ಯಾರ ಬಳಿ ಹೋಗುತ್ತದೆ ಎಂಬುದು ಈ ವಿಡಿಯೋದಿಂದಲೇ ಬಹಿರಂಗವಾಗಿದೆ.” ಎಂಬ ಬರಹದೊಂದಿಗೆ ವಿಡಿಯೋವೊಂದನ್ನು ಶೇರ್ ಮಾಡಲಾಗುತ್ತಿದೆ. ಈ ವಿಡಿಯೋವನ್ನು ಮೊದಲ ಬಾರಿಗೆ ನೋಡಿದಾಗ ರಾಹುಲ್ ಗಾಂಧಿ ಈ ರೀತಿಯಾದ ಹೇಳಿಕೆ ನೀಡಿದ್ದರು ನೀಡಿರಬಹುದು ಎಂಬ ಅಭಿಪ್ರಾಯ ಮೂಡುತ್ತದೆ.
ಇದೇ ಕಾರಣದಿಂದ ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಬಿಜೆಪಿ ಕಾರ್ಯಕರ್ತರು ಈ ವಿಡಿಯೋವನ್ನು ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಓಲೈಕೆಯ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂಬ ಅಭಿಪ್ರಾಯವನ್ನು ಜನರಲ್ಲಿ ಮೂಡಿಸಲು ಯತ್ನಿಸಲಾಗುತ್ತಿದೆ. ಹಾಗಾದರೆ ನಿಜಕ್ಕೂ ರಾಹುಲ್ ಗಾಂಧಿ ಅವರು ಈ ರೀತಿಯಾದ ಹೇಳಿಕೆಯನ್ನು ನೀಡಿದ್ದಾರೆಯೇ ಎಂಬುದನ್ನು ಈ ಅಂಕಣದಲ್ಲಿ ಪರಿಶೀಲಿಸೋಣ.
🚨 Rahul Gandhi : "We will do an X-ray of the country, and the minorities will know how much this country owes them."
By X-ray, he means the economic survey on the basis of which Congress will redistribute the people's hard-earned money if its Govt is formed. pic.twitter.com/hokXwFtXC5
— Political Views (@PoliticalViewsO) April 23, 2024
ಫ್ಯಾಕ್ಟ್‌ಚೆಕ್
ವ್ಯಾಪಕವಾಗಿ ವೈರಲ್ ಆಗುತ್ತಿರುವ ಈ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಕನ್ನಡ ಫ್ಯಾಕ್ಟ್‌ಚೆಕ್ ತಂಡ ವಿಡಿಯೋವಿನ ಕೆಲವೊಂದು ಕೀ ಫ್ರೇಮ್‌ಗಳನ್ನು ಬಳಸಿ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಟವನ್ನು ನಡೆಸಿತು. ಈ ವೇಳೆ ಇದೇ ರೀತಿಯಾದ ವಿಡಿಯೋವೊಂದು ಪತ್ತೆಯಾಗಿದ್ದು. ಅದರಲ್ಲಿ ರಾಹುಲ್ ಗಾಂಧಿಯವರು ಆಡಿರುವ ಸಂಪೂರ್ಣ ಮಾತುಗಳು ಪತ್ತೆಯಾಗಿವೆ.
6 ಏಪ್ರಿಲ್ 2024ರಂದು ಯುಟ್ಯುಬ್‌ನಲ್ಲಿ ಅಪ್‌ಲೋಡ್ ಮಾಡಲಾದ ಈ ವಿಡಿಯೋದ ಪೂರ್ಣ ಆವೃತ್ತಿಯಲ್ಲಿ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ಜಾತಿಗಳು ಮತ್ತು ಅಲ್ಪಸಂಖ್ಯಾತರ ಜಾತಿ ಗಣತಿಯನ್ನು ನಡೆಸಬೇಕು ಮತ್ತು ಸಂಪತ್ತಿನ ಮರುಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಚರ್ಚಿಸಿಬೇಕು ಎಂದಿರುವುದು ಪೂರ್ಣ ಆವೃತ್ತಿಯ ಮೂಲ ವಿಡಿಯೋದಲ್ಲಿ ಪತ್ತೆಯಾಗಿದೆ. ಈ ಕುರಿತು ಕೆಲವೊಂದು ವರದಿಗಳಲ್ಲಿ ಕೂಡ ನಿಜಾಂಶ ಉಲ್ಲೇಖವಾಗಿರುವುದನ್ನು ಗಮನಿಸಬಹುದಾಗಿದೆ.
ಆದರೆ ಕಿಡಿಗೇಡಿಗಳು ಅವರ ಭಾಷಣದ ಕೆಲವು ತುಣುಕುಗಳನ್ನು ಎಡಿಟ್ ಮಾಡಿ, ರಾಹುಲ್ ಗಾಂಧಿ ಅವರು ಸಂಪೂರ್ಣ ಆಸ್ತಿಯನ್ನು ಮುಸಲ್ಮಾನರಿಗೆ ಹಂಚುತ್ತೇನೆ ಎಂದು ಹೇಳಿದ್ದಾರೆಂಬ ಸುಳ್ಳನ್ನು ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ : ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ
ಈ ವಿಡಿಯೋ ನೋಡಿ : ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ
ನಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ