” ಯಾವುದೇ ಒಂದು ಪಕ್ಷ ಅಧಿಕಾರಕ್ಕೆ ಬರಲು 272 ಸ್ಥಾನ ಬೇಕು, ಆದರೆ ಕಾಂಗ್ರೆಸ್ ಪಕ್ಷದ ಚಿಹ್ನೆಯಡಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಕೇವಲ 230, ಹೀಗಾಗಿ ಕಾಂಗ್ರೆಸ್ ತನ್ನ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲು ಸಧ್ಯಾವಿಲ್ಲ. ಮತ್ತು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಜಾರಿಯಾಗಲು ಸಾಧ್ಯವಿಲ್ಲ. ಹೀಗಾಗಿ ಇವರ ಸುಳ್ಳು ಭರವಸೆಗಳನ್ನು ನಂಬಿ ಮತ ಚಲಾಯಿಸಿ ನೀವು ಮೋಸ ಹೋಗಬೇಡಿ” ಎಂಬ ಸಂದೇಶದ ಜೊತೆಗೆ ಪೋಸ್ಟರ್ ಒಂದು ವೈರಲ್ ಆಗುತ್ತಿದೆ.
ಈ ಪೋಸ್ಟರ್ ನೋಡಿದ ಬಹುತೇಕರು ಇದನ್ನು ನಿಜ ಎಂದು ನಂಬಿ ಶೇರ್ ಮಾಡುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಗಳ ಕುರಿತು ಮಾಹಿತಿಯ ಕೊರತೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಸಾಕಷ್ಟು ಮಾಧ್ಯಮಗಳು ಕೂಡ ಬಿಜೆಪಿ ಅಭ್ಯರ್ಥಿಗಳ ಸಂಖ್ಯೆಯನ್ನು ನಿಖರವಾಗಿ ಕೊಟ್ಟಷ್ಟು ಕಾಂಗ್ರೆಸ್‌ನ ಅಭ್ಯರ್ಥಿಗಳ ಸಂಖ್ಯೆಯನ್ನು ಹೇಳಿಲ್ಲ. ಹಾಗಾಗಿ ಸಾರ್ವಜನಿಕರಲ್ಲಿ ಈ ರೀತಿಯ ಗೊಂದಲ ಮೂಡಲು ಆರಂಭವಾಗಿದೆ.
ಫ್ಯಾಕ್ಟ್‌ಚೆಕ್
ಈ ಕುರಿತು ಸತ್ಯ ಶೋಧನೆಯನ್ನು ನಡೆಸಲು ಕನ್ನಡ ಫ್ಯಾಕ್ಟ್‌ಚೆಕ್ ತಂಡ ವಿವಿಧ ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಟವನ್ನು ನಡೆಸಿತು ಈ ವೇಳೆ ಹಲವು ವರದಿಗಳು ಪತ್ತೆಯಾಗಿದ್ದು, ಕಾಂಗ್ರೆಸ್ ಕಡಿಮೆ ಸಂಖ್ಯೆಯಲ್ಲಿ ಲೋಕಸಭಾ ಚುನಾವಣಾ ಕಣದಲ್ಲಿ ಇಳಿದಿದೆ ಇಲ್ಲಿದೆ ಮಾಹಿತಿ ಎಂಬ ಶೀರ್ಷಿಕೆಯೊಂದಿ ಆಂಗ್ಲ ಭಾಷೆಯ ನ್ಯೂಸ್ ವೆಬ್‌ಸೈಟ್ ಮಿಂಟ್ ವರದಿಯೊಂದನ್ನ ಪ್ರಕಟಿಸಿದೆ. ಈ ವರದಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸಂಖ್ಯೆ ಎಷ್ಟು ಎಂಬ ಮಾಹಿತಿಯನ್ನು ನೀಡಲಾಗಿದೆ.
ಇನ್ನು, ಮಿಂಟ್ ಪ್ರಕಟಿಸಿದ ವರದಿಯು ಹಿಂದೂಸ್ತಾನ್ ಟೈಮ್ಸ್ ವರದಿಯ ಮೂಲದಿಂದ ಆಯ್ದುಕೊಳ್ಳಲಾಗಿದೆ. ಈ ವರದಿಯಲ್ಲಿ ಕಾಂಗ್ರೆಸ್ 278 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ. ಇನ್ನೂ 20 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದೆ ಎಂಬ ಮಾಹಿತಿಯನ್ನು ಪ್ರಕಟಿಸಿದೆ.
ಇನ್ನೂ ಕೆಲವೊಂದು ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಬಾಕಿ ಇದ್ದು ಅಲ್ಲಿಯೂ ಕೂಡ ಕಾಂಗ್ರೆಸ್ ನಾಮಪತ್ರ ಸಲ್ಲಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಪೋಸ್ಟ್ ಸುಳ್ಳಿನಿಂದ ಕೂಡಿದೆ
ಇದನ್ನೂ ಓದಿ : ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ
ಈ ವಿಡಿಯೋ ನೋಡಿ :ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ
ನಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ