“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಪ್ರತೀ ಯೂನಿಟ್ ವಿದ್ಯುತ್‌ಗೆ 4.75 ರೂ ಇತ್ತು. ಆದರೆ ಅಧಿಕಾರಕ್ಕೆ ಬಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ ಬಳಿಕ ಕಾಂಗ್ರೆಸ್ ಪ್ರತಿ ಯೂನಿಟ್ ವಿದ್ಯುತ್‌ಗೆ 7.25 ರೂ ಹೆಚ್ಚಳ ಮಾಡಿದೆ.” ಎಂಬ ಸಂದೇಶವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಪೋಸ್ಟರ್‌ವೊಂದರಲ್ಲಿ ಕಾಂಗ್ರೆಸ್ ಸರ್ಕಾರ ಹಲವು ವಸ್ತುಗಳು ಮತ್ತು ವಿದ್ಯುತ್‌ನ ದರವನ್ನು ಕೂಡ ವ್ಯಾಪಕವಾಗಿ ಹೆಚ್ಚಳ ಮಾಡಿದೆ ಎಂದು ಹಂಚಿಕೊಂಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಮಂದಿ ಉಚಿತವಾಗಿ 200 ಯೂನಿಟ್ ವಿದ್ಯುತ್ ಪಡೆಯುತ್ತಿರುವುದರಿಂದ ಈ ದರದ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಹೀಗಾಗಿಯೇ ಸಾಕಷ್ಟು ಮಂದಿ ಇದನ್ನು ನಿಜವಾದ ಸುದ್ದಿ ಎಂದು ನಂಬಿ ವ್ಯಾಪಕವಾಗಿ ಶೇರ್ ಕೂಡ ಮಾಡುತ್ತಿದ್ದಾರೆ. ಆದರೆ ಈ ಕುರಿತು ಸತ್ಯ ಪರಿಶೀಲನೆ ನಡೆಸಿದಾಗ ವಿದ್ಯುತ್ ದರದ ಕುರಿತು ಅಸಲಿ ವಿಚಾರ ಏನು ಎಂಬುದು ಬೆಳಕಿಗೆ ಬಂದಿದೆ.
ಫ್ಯಾಕ್ಟ್‌ಚೆಕ್
ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್ ತಂಡ ಪರಿಶೀಲನೆ ನಡಲು ವಿವಿಧ ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಪರಿಶೀಲನೆ ನಡೆಸಿತು. ಈ ಪರಿಶೀಲನೆಯನ್ನು ವಿದ್ಯುತ್ ದರದ ಹೆಚ್ಚಳವಾಗುವ ಕುರಿತು ಸುವರ್ಣ ನ್ಯೂಸ್ ಒಂದನ್ನು ಹೊರತು ಪಡಿಸಿ ಇನ್ಯಾವ ವರದಿಗಳು ಕೂಡ ಕಂಡು ಬಂದಿಲ್ಲ. ಇನ್ನು ಆ ವರದಿಯನ್ನು ಪರಿಶೀಲನೆ ನಡೆಸಿದಾಗ ಏಪ್ರಿಲ್ 1 ರಿಂದ ವಿದ್ಯುತ್ ದರ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅನುಮಾನಭರಿತವವಾಗಿ ವರದಿಯನ್ನು ಪ್ರಕಟಿಸಲಾಗಿತ್ತು.
ಇನ್ನು ಹೆಚ್ಚಿನ ಮಾಹಿತಿಗಾಗಿ ಬೇರೆ ಕೀ ವರ್ಡ್ಸ್‌ಗಳನ್ನು ಬಳಸಿ ಹುಡುಕಿದಾಗ 2023ರ ಮೇ 12ರಂದು ವಿದ್ಯುತ್ ನಿಗಮ ಮಂಡಳಿ 100 ಯೂನಿಟ್ ನಂತರದ ಒಂದು ಯೂನಿಟ್ ಬೆಲೆಯನ್ನು 4.75 ರೂ ನಿಂದ 7.25 ರೂಗೆ ಏರಿಕೆ ಮಾಡಿದೆ. ಆಗ ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಅಧಿಕಾರಕ್ಕೆ ಬಂದಿರಲಿಲ್ಲ ಎಂಬುದು ತಿಳಿದು ಬಂದಿದ್ದು, ಈ ಬಗ್ಗೆ ಆರೋಪ-ಪ್ರತ್ಯಾರೋಪಗಳಿವೆ. ಆದರೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆ ಮಾಡಿದೆಯೆಂದು ಅಧಿಕೃತ ವರದಿಗಳು ಕೂಡ ಕಂಡು ಬಂದಿದೆ.
100 ಯುನಿಟ್ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್ಗೆ 1.10 ರೂ. ಕಡಿಮೆ ಮಾಡಲಾಗಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ 100ಕ್ಕಿಂತ ಹೆಚ್ಚು ಯುನಿಟ್ ವಿದ್ಯುತ್ ಬಳಕೆ ಮಾಡುವವರಿಗೆ ಪ್ರತಿ ಯುನಿಟ್ಗೆ ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್ಗೆ 4.75 ರೂ. ಪಾವತಿಸುತ್ತಿದ್ದಾರೆ. ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿದಾಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ.
ಇದನ್ನೂ ಓದಿ : ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ
ಈ ವಿಡಿಯೋ ನೋಡಿ : ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿಲ್ಲ
ನಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ