ಹವಮಾನ ವೈಪರಿತ್ಯದಿಂದಾಗಿ ಮತ್ತು ಈ ಬಾರಿ ರಾಜ್ಯದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ ಬಿಸಿ ಹೆಚ್ಚಾಗುತ್ತಿದೆ. ಹವಮಾನ ಇಲಾಖೆ ಸೂಚಿಸಿದಂತೆ ಏಪ್ರಿಲ್ ಎರಡನೇ ವಾರದಲ್ಲಿ ಮಳೆಯಾದರೂ ಸಹ ಕೇವಲ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿ ಧಗೆಯನ್ನು ಇನ್ನಷ್ಟು ಹೆಚ್ಚಿಸಿದೆ.
ಈಗ, ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ! ಹವಾಮಾನ ಇಲಾಖೆ ಇಂದಿನಿಂದ 5 ದಿನ ರಾಜ್ಯದ ಹಲವೆಡೆ ಬಿಸಿಗಾಳಿ ಎಚ್ಚರಿಕೆ ನೀಡಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಸೂಚಿಸಿದೆ” ಎಂಬ ವರದಿಯೊಂದು ಸಾಕಷ್ಟು ಹರಿದಾಡುತ್ತಿದೆ. ಇದನ್ನು ಬಳ್ಳಾರಿಯ ಸಿದ್ದಿ ಟಿವಿ ಎಂಬ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಫ್ಯಾಕ್ಟ್‌ಚೆಕ್: ಹವಾಮಾನ ಇಲಾಖೆ ಏಪ್ರಿಲ್ 25ರಿಂದ ಮುಂದಿನ 5 ದಿನ ರಾಜ್ಯದ ಹಲವೆಡೆ ಬಿಸಿಗಾಳಿ ಬೀಸುವ ಕುರಿತು ಎಚ್ಚರಿಕೆ ನೀಡಿದೆ. ಆದರೆ ಎಲ್ಲಿಯೂ ಸಂಜೆ 4ರವರೆಗೆ ಮನೆಯಿಂದ ಹೊರ ಬರಬೇಡಿ ಎಂಬ ಎಚ್ಚರಿಕೆ ನೀಡಿಲ್ಲ. ಆರೋಗ್ಯದ ದೃಷ್ಟಿಯಿಂದ ಈ ರೀತಿಯಲ್ಲಿ ಸುದ್ದಿ ಮಾಡಲಾಗಿದೆ.
ಏಪ್ರಿಲ್ 25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಏ. 26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ; ಏ. 27ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಹಾಗೂ ಏ. 28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇದರ ನಡುವೆಯೂ ಹವಾಮಾನ ಇಲಾಖೆ ಏಪ್ರಿಲ್ 29ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಮೇ 1 ರಿಂದ 4ರವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಏಪ್ರಿಲ್ 1ರ ಬುಧವಾರ ಬೀದರ್ ಕಲಬುರ್ಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಮೈಸೂರು, ಬೆಳಗಾವಿ, ಬಾಗಲಕೋಟೆ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
- ಮೇ 2ರ ಗುರುವಾರ ರಾಯಚೂರು, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ.
- ಮೇ 3ರ ಶುಕ್ರವಾರ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
- ಮೇ 4ರ ಶನಿವಾರ ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಮಳೆ ಬರುವ ಸಾಧ್ಯತೆ ಇದೆ. ಎಂದು ಹವಮಾನ ಇಲಾಖೆ ತಿಳಿಸಿದೆ.
ಆದ್ದರಿಂದ ಬಿಸಿಗಾಳಿಯ ಕಾರಣ ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಹೊರಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸುವಂತೆ ಸೂಚಿಸಿದೆ ಎಂಬುದು ಸುಳ್ಳು.
ಇದನ್ನು ಓದಿ: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ
ವಿಡಿಯೋ ನೋಡಿ: ನೇಹಾ ಹಿರೇಮಠ್ ಮನೆಗೆ ಕಾಂಗ್ರೆಸ್‌ನ ಒಬ್ಬ ವ್ಯಕ್ತಿಯೂ ಭೇಟಿ ನೀಡಿಲ್ಲ ಎಂಬುದು ಸಂಪೂರ್ಣ ಸುಳ್ಳು
ನಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ