Fact Check | ಕುಕ್ಕೆ ದೇವಸ್ಥಾನಕ್ಕೆ ರಾಜ್ಯ ಸರ್ಕಾರ ಕ್ರಿಶ್ಚಿಯನ್‌ ಅಧಿಕಾರಿ ನೇಮಿಸಿದೆ ಎಂಬುದು ಸುಳ್ಳು

“ಕ್ರಿಶ್ಚಿಯನ್‌ ಅಧಿಕಾರಿಯನ್ನು ಕುಕ್ಕೆ ದೇವಸ್ಥಾನದ ಮುಖ್ಯ ಅಧಿಕಾರಿಯಾಗಿ ಕಾಂಗ್ರೆಸ್‌ ಸರ್ಕಾರ ನೇಮಿಸಿದೆ. ಏನಿದರ ಹುನ್ನಾರ..?” ಎಂದು ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಇದರಲ್ಲಿ ಕಾಂಗ್ರೆಸ್‌ ಸರ್ಕಾರ ಹಿಂದೂ ದೇವಸ್ಥಾನಕ್ಕೆ ಅಪಚಾರ ಮಾಡಲು ಹೊರಟಿದೆ. ಇದರ ಹಿಂದೆ ಏನೋ ಷಡ್ಯಂತ್ರವಿದೆ ಎಂದು ಬಿಂಬಿಸಲಾಗಿದೆ. ಹೀಗಾಗಿ ಇದು ನಿಜವಿರಬಹುದು ಎಂದು ಸಾಕಷ್ಟು ಮಂದಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ಸುಳ್ಳು ಮಾಹಿತಿಯ ಪೋಸ್ಟರ್‌
ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ಸುಳ್ಳು ಮಾಹಿತಿಯ ಪೋಸ್ಟರ್‌

ವಾಸ್ತವದಲ್ಲಿ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರ ಹೆಸರನ್ನು ನೋಡಿದ ತಕ್ಷಣವೇ ಬಹುತೇಕರು ಇವರು ಕ್ರೈಸ್ತರಿರಬಹುದು ಎಂದು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಹೀಗಾಗಿ ವೈರಲ್‌ ಫೋಟೋದ ಸತ್ಯಾಸತ್ಯತೆಯನ್ನು ಕಂಡುಕೊಳ್ಳದೆ ಈ ನಕಲಿ ಪೋಸ್ಟರ್‌ ಅನ್ನು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್‌

ಈ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಪರಿಶೀಲನೆ ನಡೆಸಲು ಮುಂದಾಯಿತು, ಇದಕ್ಕಾಗಿ ವಿಡಿಯೋದ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿ ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಪರಿಶೀಲನೆ ನಡೆಸಿತು ಆಗ ಕರ್ನಾಟಕದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದು ಕಾಣಿಸಿಕೊಂಡಿದ್ದು ಅದರಲ್ಲಿ ಅವರು ವೈರಲ್‌ ಪೋಸ್ಟರ್‌ನ ಅಸಲಿಯತ್ತನ್ನು ಬಹಿರಂಗ ಪಡಿಸಿದ್ದಾರೆ.

ರಾಮಲಿಂಗ ರೆಡ್ಡಿ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ “ಬಿಜೆಪಿಯ ಮತ್ತೊಂದು ಫೇಕ್ ವಾಟ್ಸಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಓ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು @BJP4Karnatakaದ ಮತ್ತೊಂದು ಸುಳ್ಳು ಹಬ್ಬಿಸುವ ಸೋಶಿಯಲ್ ಮೀಡಿಯಾ ವಾಟ್ಸಾಪ್ ಫೇಕ್ ಯುನಿವರ್ಸಿಟಿ ಆಟವಾಗಿದೆ. ಅವರು ಹಿಂದುಳಿದ ಜಾತಿಗೆ ಸೇರಿದವರಾಗಿದ್ದು, ದಾಖಲೆಗಳು ಇಲ್ಲಿವೆ. ರಾಜ್ಯದಲ್ಲಿ ಇನ್ನೊಂದು ಹಂತದ ಚುನಾವಣೆ ಹತ್ತಿರ ಇರೋದರಿಂದ ಜನರನ್ನು ದಾರಿ ತಪ್ಪಿಸಿ ಅವರ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಸೋಲಿನ ಭಯ ಶುರುವಾಗಿರುವುದು ಸ್ಪಷ್ಟ.” ಎಂದು ಬರೆದುಕೊಂಡಿದ್ದರು.

ಇನ್ನು ಅವರು ಹಂಚಿಕೊಂಡಿರುವ ದಾಖಲೆಗಳನ್ನು ಪರಿಶೀಲಿಸಿದಾಗ ಎಇಓ ಏಸುರಾಜ್‌ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂಬುದು ಖಚಿತವಾಗಿದೆ. ಒಟ್ಟಾರೆಯಾಗಿ ಅವರ ಹೆಸರಿನ ಆಧಾರದ ಮೇಲೆ ಅವರ ಹಿನ್ನೆಲಯನ್ನು ತಿಳಿಯದೆ ಕೆಲ ಕಿಡಿಗೇಡಿಗಳು ಕ್ರಿಶ್ಚಿಯನ್‌ ಅಧಿಕಾರಿಯನ್ನು ನೇಮಿಸಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದಾರೆ. ಆ ಮೂಲಕ ಸಾಮಾಜದಲ್ಲಿ ಶಾಂತಿ ಕದಡುವ ಕೆಲಸಕ್ಕೂ ಮುಂದಾಗಿದ್ದಾರೆ.


ಇದನ್ನು ಓದಿ : ಕಾಂಗ್ರೆಸ್‌ ವಿರೋಧಿಗಳಿಂದ ರಾಹುಲ್‌ ಗಾಂಧಿ ವಿರುದ್ಧ ನಕಲಿ ಜಾಹಿರಾತು


ಈ ವಿಡಿಯೋ ನೋಡಿ :  ಕಾಂಗ್ರೆಸ್‌ ವಿರೋಧಿಗಳಿಂದ ರಾಹುಲ್‌ ಗಾಂಧಿ ವಿರುದ್ಧ ನಕಲಿ ಜಾಹಿರಾತು


ನಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *