ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೇಫೆಯಲ್ಲಿ ಸ್ಪೋಟ ಸಂಭವಿಸಿ ಅನೇಕರು ಈ ದಾಳಿಯಲ್ಲಿ ಗಾಯಗೊಂಡಿದ್ದರು. ವಿರೋಧ ಪಕ್ಷದವರು ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚು ಸಂಭವಿಸುತ್ತವೆ ಎಂದು ಟೀಕಿಸಿದ್ದರು ಮತ್ತು ಇದಕ್ಕೆ ಕಾರಣ ಮುಸ್ಲಿಮರು ಎಂದು ಆರೋಪಿಸಿದ್ದರು. ಅದರಂತೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮುಸ್ಲಿಂ ಯುವಕರನ್ನೆ ಎನ್‌ಐಎ ಬಂಧಿಸಿದೆ.
ಈಗ, ಮತ್ತೊಂದು ಬ್ಲಾಸ್ಟ್, ಬಳ್ಳಾರಿಯ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಸ್ಫೋಟ. ಫ್ರೀಬೀಸ್ ಕಾಂಗ್ರೆಸ್ ಕರ್ನಾಟಕಕ್ಕೆ ಸುಸ್ವಾಗತ. ಎಂದು ಪ್ರತಿಪಾದಿಸಿ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಫ್ಯಾಕ್ಟ್‌ಚೆಕ್: 2 ಮೇ 2024ರಂದು ಬಳ್ಳಾರಿ ನಗರದ ತೇರು ಬೀದಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಎಸಿ ಸ್ಪೋಟಗೊಂಡು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ನಗರ ಡಿವೈಎಸ್ಪಿ, ಬ್ರೂಸ್‌ಪೇಟೆ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎಂದು ಈಟಿವಿ ಭಾರತ್ ವರದಿ ಮಾಡಿದೆ. ಅವರು ಎಲ್ಲಿಯೂ ಇದು ಉಗ್ರರ ದಾಳಿ ಎಂದು ಉಲ್ಲೇಖಿಸಿಲ್ಲ.
ಈ ಘಟನೆ ಕುರಿತು ಫ್ರಿ ಪ್ರೆಸ್ ಜರ್ನಲ್ ಅವರು ಕೂಡ ಸುದ್ದಿ ಮಾಡಿದ್ದು ವರದಿಯ ಪ್ರಕಾರ, ಕರ್ನಾಟಕದ ಕಲ್ಯಾಣ್ ಜ್ಯುವೆಲರ್ಸ್ ಶೋರೂಮ್‌ನಲ್ಲಿ ಏರ್ ಕಂಡೀಷನರ್ ಬ್ಲಾಸ್ಟ್ ಆಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸಂಜೆ 6:30ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.” ಎಂದು ತಿಳಿಸಿದ್ದಾರೆ.
ಮುಂದುವರೆದು ” ಅಗ್ನಿಶಾಮಕ ಸಿಬ್ಬಂದಿ, ನಗರ ಡಿವೈಎಸ್ಪಿ, ಬ್ರೂಸ್‌ಪೇಟೆ ವೃತ್ತ ನಿರೀಕ್ಷಕರು ಮತ್ತು ಅವರ ತಂಡಗಳು ಘಟನಾ ಸ್ಥಳಕ್ಕೆ ತಕ್ಷಣ ಸ್ಪಂದಿಸಿ ಪರಿಶೀಲನೆ ನಡೆಸಿದರು. ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಥವಾ ಸ್ಥಳೀಯ ಅಧಿಕಾರಿಗಳಿಂದ ಯಾವುದೇ ಅಧಿಕೃತ ಹೇಳಿಕೆ ಇನ್ನೂ ಹೊರಬಂದಿಲ್ಲ.” ಎಂದು ತಿಳಿಸಿದ್ದಾರೆ.
ಆದ್ದರಿಂದ ಈ ಘಟನೆ ಆಚಾತುರ್ಯವಾಗಿ ಸಂಭವಿಸದೆಯೇ ಹೊರತು ಉಗ್ರರ ದಾಳಿ ಅಲ್ಲ ಮತ್ತು ಇದಕ್ಕೂ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಯಾವುದೇ ಸಂಬಂದವಿಲ್ಲ.
ಇದನ್ನು ಓದಿ: ಬಾಂಗ್ಲಾದೇಶದ ಮುಸ್ಲಿಂ ನಾಯಕನ ಹಳೆಯ ವಿಡಿಯೋವನ್ನು ಭಾರತದ್ದು ಎಂದು ಸುಳ್ಳು ಮಾಹಿತಿ ಹಂಚಿಕೆ
ವಿಡಿಯೋ ನೋಡಿ: ಕುಕ್ಕೆ ದೇವಸ್ಥಾನಕ್ಕೆ ರಾಜ್ಯ ಸರ್ಕಾರ ಕ್ರಿಶ್ಚಿಯನ್ ಅಧಿಕಾರಿ ನೇಮಿಸಿದೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ