Fact Check | ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ನೀಡುತ್ತದೆ ಎಂಬುದು ಸುಳ್ಳು

“ಮಲಬಾರ್ ಗೋಲ್ಡ್ ಮತ್ತು ಡೈಮಂಡ್ ವ್ಯವಹಾರದ ಭಾಗವಾಗಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಕೇವಲ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ.  ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸ್ಕಾಲರ್‌ಶಿಪ್ ಪ್ರಮಾಣಪತ್ರಗಳನ್ನು ಹೊಂದಿರುವ ಬುರ್ಖಾಧಾರಿ ಮುಸ್ಲಿಂ ವಿದ್ಯಾರ್ಥಿಗಳ ಗುಂಪು ಈ ಫೋಟೋದಲ್ಲಿದೆ ನೋಡಿ.” ಎಂದು ಕೋಮು ದ್ವೇಷದ ಬರಹದೊಂದಿಗೆ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಇನ್ನು ಇದೇ ಫೋಟೋದ ಜೊತೆಗೆ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಮಾಲೀಕ ಎಂಪಿ ಅಹಮ್ಮದ್ ಅವರ ಫೋಟೋವನ್ನು ಹಂಚಿಕೊಳ್ಳಲಾಗಿದೆ. ಈ ಫೋಟೋಗಳು ಮತ್ತು ಬರಹಗಳನ್ನ ನೋಡಿದ ಬಹುತೇಕ ಮಂದಿ ಇದು ನಿಜವಿರಬಹುದು ಎಂದು ವೈರಲ್‌ ಆಗುತ್ತಿರುವ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಂಡಿದ್ದಾರೆ.

https://twitter.com/Modified_Hindu9/status/1785688371093999620

ಫ್ಯಾಕ್ಟ್‌ಚೆಕ್‌

ವೈರಲ್ ಫೋಟೋ ಹಾಗೂ ಅದರಲ್ಲಿ ಗ್ರಾಫಿಕ್‌ ಫೋಟೋವಿನ ಕುರಿತು ಹೆಚ್ಚಿನ ವಿವರಗಳನ್ನು ಹುಡುಕಲು, ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಕಂಪನಿಯಿಂದ ಪ್ರಕಟಿಸಲಾದ ಕರಪತ್ರದ ನಕಲನ್ನು ಬಳಸಿಕೊಂಡು ವಿವಿಧ ಕೀವರ್ಡ್ಸ್‌ಗಳನ್ನು ಬಳಸಿ ಹುಡುಕಾಟ ನಡೆಸಿದ್ದೇವು. ಈ ವೇಳೆ ಮಂಗಳೂರಿನ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸುಮಾರು 60 ಕಾಲೇಜುಗಳಲ್ಲಿ ಓದುತ್ತಿರುವ 630 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದೆ ಎಂದು ಕರಪತ್ರದಲ್ಲಿ ತಿಳಿಸಲಾಗಿದೆ.

ಆದರೆ, ಈ ಕರಪತ್ರದಲ್ಲಿ ಪ್ರಕಟವಾಗಿರುವ ಚಿತ್ರಗಳಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಕೇವಲ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ ಅನ್ಯ ಧರ್ಮದವರಿಗೂ ವಿದ್ಯಾರ್ಥಿವೇತನ ನೀಡಿರುವುದು ಸ್ಪಷ್ಟವಾಗಿದೆ. ಮಂಗಳೂರಿನಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದ ಇನ್ನೂ ಕೆಲವು ಫೋಟೋಗಳು ಕೂಡ ಕಂಡು ಬಂದಿದೆ. ಈ ಫೋಟೋಗಳಲ್ಲಿ, ವೈರಲ್ ಫೋಟೋದಲ್ಲಿ ಕಂಡುಬರುವ ಜನರು ಹಿಂದೂ ಮತ್ತು ಇತರ ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿರುವುದನ್ನು ಕಾಣಬಹುದಾಗಿದೆ.

 

ಮಲಬಾರ್ ಚಾರಿಟೇಬಲ್ ಟ್ರಸ್ಟ್ ತನ್ನ ವೆಬ್‌ಸೈಟ್‌ನಲ್ಲಿ ಜಾತಿ ಮತ್ತು ಧರ್ಮದ ತಾರತಮ್ಯವಿಲ್ಲದೆ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ ಎಂದು ತಿಳಿಸಿದೆ. ಈ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸ್ಕಾಲರ್‌ಶಿಪ್‌ನ ಅರ್ಹತಾ ಮಾನದಂಡವು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ನೀಡಲಾಗುವ ಈ ವಿದ್ಯಾರ್ಥಿವೇತನವನ್ನು ಅರ್ಹತೆ ಮತ್ತು ಅವರ ಕುಟುಂಬದ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಮಾತ್ರ ಆಯ್ಕೆ ಮಾಡಲಾಗುತ್ತದೆ ಎಂದು ಹೇಳುತ್ತದೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಂತೆ ಕೆಲವೊಂದು ಸುದ್ದಿ ಸಂಸ್ಥೆಗಳಲ್ಲಿ ವರದಿಗಳು ಕೂಡ ಪ್ರಕಟವಾಗಿದೆ.

ಇನ್ನು ಈ ಕುರಿತು ಖಾಸಗಿ ಸುದ್ದಿ ಸಂಸ್ಥೆಯೊಂದು ಮಲಬಾರ್‌ ಆಡಳಿತ ಮಂಡಳಿಯ ಬಳಿ ಪ್ರತಿಕ್ರಿಯೆಯನ್ನು ಪಡೆದಿದ್ದು, ಮಂಡಳಿಯವರು ಕೂಡ ಯಾವುದೇ ಜಾತಿ ಹಾಗು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿವೇತನವವನ್ನು ನೀಡುತ್ತಿಲ್ಲ ಎಂಬುದನ್ನು ತಿಳಿಸಿದ್ದಾರೆ. ಒಟ್ಟಾರೆಯಾಗು ಮಲಬಾರ್‌ ಚಾರಿಟಟೇಬಲ್‌ ಟ್ರಸ್ಟ್‌ನಿಂದ ಮುಸಲ್ಮಾನರಿಗೆ ಮಾತ್ರ ವಿದ್ಯಾರ್ಥಿ ವೇತನ ಎಂಬುದು ಸುಳ್ಳಾಗಿದೆ


ಇದನ್ನೂ ಓದಿ : ಸಿದ್ದರಾಮಯ್ಯ ಲಾ ಕಾಲೇಜು ಸುತ್ತೋಲೆ ಆರೋಗ್ಯ ಇಲಾಖೆಗೆ ಸಂಬಂಧಿಸಿಲ್ಲ


ಈ ವಿಡಿಯೋ ನೋಡಿ : ಸಿದ್ದರಾಮಯ್ಯ ಲಾ ಕಾಲೇಜು ಸುತ್ತೋಲೆ ಆರೋಗ್ಯ ಇಲಾಖೆಗೆ ಸಂಬಂಧಿಸಿಲ್ಲ 


ನಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *