Fact Check: ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿಲ್ಲ

ರಾಹುಲ್ ಗಾಂಧಿ

ಈ ಬಾರಿ ರಾಹುಲ್ ಗಾಂಧಿಯವರು ಅಮೇಥಿ ಕ್ಷೇತ್ರವನ್ನು ತೊರೆದು ಕಾಂಗ್ರೆಸ್‌ನ ಭದ್ರಕೋಟೆಯಾದ ರಾಯ್ ಬರೇಲಿಯಿಂದ ಸ್ಪರ್ಥಿಸುತ್ತಿದ್ದಾರೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಾಕಷ್ಟು ಮಾಧ್ಯಮಗಳು ವರದಿ ಮಾಡಿವೆ.

ಈಗ,”ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ಅಲ್ಲಿ ನೆರೆದಿದ್ದ ಜನರು ಮೋದಿ, ಮೋದಿ ಎಂದು ಘೋಷಣೆ ಕೂಗಿದರು.” ಎಂದು ಪ್ರತಿಪಾದಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್: ಈ ವೀಡಿಯೋ ಫೆಬ್ರವರಿ 2024 ರಲ್ಲಿ, ಜಾರ್ಖಂಡ್‌ನ ದಿಯೋಘರ್‌ನಲ್ಲಿರುವ ಬಾಬಾ ಬೈದ್ಯನಾಥ ಧಾಮದಲ್ಲಿ ರಾಹುಲ್ ಗಾಂಧಿಯವರು ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಂದರ್ಭದ್ದಾಗಿದೆ. ಈ ಕುರಿತು ನಾವು ವೀಡಿಯೊ ಕೀಫ್ರೇಮ್‌ಗಳ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದಾಗ, ಇನ್‌ಸ್ಟಾಗ್ರಾಮ್ ರೀಲ್‌ ಒಂದು ಳಭ್ಯವಾಗಿದ್ದು, ಇದನ್ನು ಫೆಬ್ರವರಿ 3, 2024 ರಂದು ಬಿಜೆಪಿ ಗುಜರಾತ್‌ನ ಅಧಿಕೃತ ಖಾತೆಯಿಂದ ಅಪ್‌ಲೋಡ್ ಮಾಡಲಾಗಿದೆ, “ಮೋದಿ-ಮೋದಿ ಘೋಷಣೆಗಳನ್ನು @ರಾಹುಲ್‌ಗಾಂಧಿ ಅವರ ಮುಂದೆ ಕೂಗಲಾಗಿದೆ. ಸನಾತನದ ಧಾಮ್ ದೇವಘರ್, ಬಾಬಾ ವೈದ್ಯನಾಥ ಧಾಮ್.” ಎಂದು ಬರೆದಿದೆ.

 

ಫೆಬ್ರವರಿ 3-4, 2024 ರಿಂದ ಅನೇಕ ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು, ಗಾಂಧಿಯವರು ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಲ್ಲಿ ಜಾರ್ಖಂಡ್‌ನ ದಿಯೋಘರ್‌ನಲ್ಲಿರುವ ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದರು. “ರಾಹುಲ್ ಗಾಂಧಿ ಅವರು ಭಗವಾನ್ ಶಿವನಿಗೆ ಸಮರ್ಪಿತವಾದ ದಿಯೋಘರ್‌ನಲ್ಲಿರುವ ಪುರಾತನ ದೇವಾಲಯಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ಪ್ರಾರ್ಥನೆ ಮತ್ತು ಆಚರಣೆಗಳಲ್ಲಿ ಭಾಗವಹಿಸಿದರು” ಎಂದು ವರದಿ ಮಾಡಿವೆ.

“ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಫೆಬ್ರವರಿ 02 ರಂದು ಜಾರ್ಖಂಡ್ ತಲುಪಿತು. ಗುಲಾಬಿ ಧೋತಿ ಮತ್ತು ಶ್ರೀಗಂಧದ ಪುಡಿಯನ್ನು ಧರಿಸಿ, ರಾಹುಲ್ ಗಾಂಧಿ ಫೆ.03 ರಂದು ಬಾಬಾ ಬೈದ್ಯನಾಥ ಧಾಮದಲ್ಲಿ ಪ್ರಾರ್ಥನೆ ಸಲ್ಲಿಸಿದರು. ರಾಹುಲ್ ಗಾಂಧಿ ಜಾರ್ಖಂಡ್‌ನ ದಿಯೋಘರ್‌ನಲ್ಲಿರುವ ಪ್ರಸಿದ್ಧ ಜ್ಯೋತಿರ್ಲಿಂಗವನ್ನು ಪ್ರವೇಶಿಸಿದ ತಕ್ಷಣ, ಜೋರಾಗಿ ಘೋಷಣೆ ಶುರುವಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ‘ರಾಹುಲ್ ಗಾಂಧಿ ಜಿಂದಾಬಾದ್’ ಘೋಷಣೆಗಳನ್ನು ಎತ್ತಿದರು, ಆದರೆ ಅದು ಇದ್ದಕ್ಕಿದ್ದಂತೆ ‘ಮೋದಿ-ಮೋದಿ’ ಘೋಷಣೆಗಳಾಗಿ ಮಾರ್ಪಟ್ಟಿತು, ”ಫೆಬ್ರವರಿ 3, 2024 ರ ಟೈಮ್ಸ್ ಆಫ್ ಇಂಡಿಯಾ ವರದಿಯನ್ನು ಓದಿದ ನಂತರ, ವೈರಲ್ ವೀಡಿಯೊದಲ್ಲಿ ಮಾಡಿರುವ ಪ್ರತಿಪಾದನೆ ಸುಳ್ಳು ಎಂಬುದು ಖಚಿತವಾಗಿದೆ.

ರಾಹುಲ್ ಅವರು ಶುಕ್ರವಾರ ರಾಯ್ ಬರೇಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು, ಇತರ ಬ್ಲಾಕ್ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು  ನಾಮಪತ್ರವನ್ನು ಸಲ್ಲಿಸುವಾಗ ರಾಹುಲ್ ಗಾಂಧಿಯವರು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಸೋದರ ಮಾವ ರಾಬರ್ಟ್ ವಾದ್ರಾ ಅವರೊಂದಿಗೆ ಇದ್ದರು ಎಂದು ವರದಿಯಾಗಿದೆ. ಸಧ್ಯ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದ ಒತ್ತಡದಲ್ಲಿರುವ ರಾಹುಲ್ ಗಾಂಧಿಯವರು ರಾಮ ಮಂದಿರಕ್ಕೆ ಭೇಟಿ ನೀಡಿಲ್ಲ.


ಇದನ್ನು ಓದಿ: ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು ಬಿಜೆಪಿ ಬೆಂಬಲಿಸುವಂತೆ ಮತದಾರರಿಗೆ ಕರೆ ನೀಡಿಲ್ಲ


ವಿಡಿಯೋ ನೋಡಿ: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *