Fact Check | ಕರ್ನಾಟಕ ಕಾಂಗ್ರೆಸ್‌ ಕಾರ್ಯಕರ್ತರು ಮೋದಿ ಪ್ರತಿಕೃತಿ ಸುಡಲು ಹೋಗಿ ಬೆಂಕಿ ಹಚ್ಚಿಕೊಂಡಿದ್ದಾರೆ ಎಂಬುದು ಸುಳ್ಳು

“ಕರ್ನಾಟಕದಲ್ಲಿ ಬಿಜೆಪಿ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯೊಂದರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರಧಾನಿ ಮೋದಿ ಪ್ರತಿಕೃತಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ, ಈ ವೇಳೆ ಐದು ಜನ ಕಾಂಗ್ರೆಸ್‌ ಕಾರ್ಯಕರ್ತರ ಪಂಚೆ(ಲುಂಗಿ)ಗೆ ಬೆಂಕಿ ತಗುಲಿ ಎಲ್ಲರೂ ಓಡಿ ಹೋಗಿದ್ದಾರೆ. ನೋಡಿ ವಾಸ್ತವದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ಕೂಡ ವಿರೋಧಿಗಳಿಗೆ ಪಾಠ ಕಲಿಸುತ್ತಿದೆ. ಇದೇ ಮೋದಿ ಹೆಸರಿಗಿರುವ ಶಕ್ತಿ” ಎಂದು ವಿಡಿಯೋದೊಂದಿಗೆ ಬರೆದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ನೋಡಿದವರು, ಇದು ನಿಜವಿರಬಹುದು ಎಂದು ತಮ್ಮ ಖಾತೆಗಳಲ್ಲೂ ಶೇರ್‌ ಮಾಡುತ್ತಿದ್ದಾರೆ. ಈ ವಿಡಿಯೋದಲ್ಲಿ ಒಂದಷ್ಟು ಪ್ರತಿಭಟನಾಕಾರರು ಪ್ರತಿಕೃತಿಯೊಂದನ್ನು ಹಿಡಿದುಕೊಂಡು, ತಿಳಿ ನೀಲಿ ಬಣ್ಣದ ಬಾವುಟ ಹಿಡಿದು, ಯಾರದ್ದೋ ವಿರುದ್ಧ ಘೋಷಣೆ ಕೂಗುತ್ತಿರುವುದನ್ನು ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್‌

ಈ ಕುರಿತು ಸತ್ಯಶೋಧನೆ ನಡೆಸಲು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ವಿಡಿಯೋದ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿ ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಟವನ್ನು ನಡೆಸಿತು. ಈ ವೇಳೆ ಜುಲೈ 2012ರಲ್ಲಿ ಟೈಮ್ಸ್ ಆಫ್ ಇಂಡಿಯಾ ಮಾಡಿದ ವರದಿ ಲಭ್ಯವಾಗಿದೆ.

ಈ ವರದಿಯ ಪ್ರಕಾರ, ಮಹಾತ್ಮ ಗಾಂಧಿ  ವಿಶ್ವವಿದ್ಯಾನಿಲಯದ ಉಪಕುಲಪತಿ ವಿರುದ್ದ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಕೆಎಸ್‌ಯು (ಕೇರಳಾ ಸ್ಟೂಡೆಂಟ್ಸ್ ಯೂನಿಯನ್‌)ನ ಕಾರ್ಯಕರ್ತರು ಉಪಕುಲಪತಿಗಳ ಪ್ರತಿಕೃತಿ ದಹಿಸುವಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಇನ್ನು ಇದೇ ವಿಚಾರದ ಕುರಿತು ಮಲಯಾಳಂನ ಏಷ್ಯಾನೆಟ್‌ ನ್ಯೂಸ್‌ ವರದಿ ಮಾಡಿದ್ದು ಆ ವರದಿಯ ಪ್ರಕಾರ ಪ್ರತಿಕೃತಿ ದಹಿಸುವಾಗ ಕೆಎಸ್‌ಯು ಸದಸ್ಯರಾದ ಶ್ರೀನಾಥ್ ಮತ್ತು ವಿಷ್ಣು ಪನ್ನಕಲ್ ಗಾಯಗೊಂಡು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಉಲ್ಲೇಖಿಸಿದೆ. ಒಟ್ಟಾರೆಯಾಗಿ, 12 ವರ್ಷದ ಹಿಂದೆ ಕೇರಳದಲ್ಲಿ ನಡೆದ ಪ್ರತಿಭಟನೆಯ ವಿಡಿಯೋವನ್ನು ಪ್ರಸ್ತುತ ಕರ್ನಾಟಕದ್ದು ಎಂದು ಎಕ್ಸ್‌ ಖಾತೆಯ ಬಳಕೆದಾರರು ತಪ್ಪಾಗಿ ಹಂಚಿಕೊಂಡಿದ್ದಾರೆ. ಹಾಗಾಗಿ ವೈರಲ್‌ ಪೋಸ್ಟ್‌ ಸುಳ್ಳಿನಿಂದ ಕೂಡಿದೆ.


ಇದನ್ನೂ ಓದಿ : Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ


ಈ ವಿಡಿಯೋ ನೋಡಿ : Fact Check: ಕಾಂಗ್ರೆಸ್‌ ನಿಮ್ಮ ಹಣ ದೋಚಿ ಮುಸ್ಲಿಮರಿಗೆ ಕೊಡುತ್ತದೆ ಎಂದು ಖರ್ಗೆ ಹೇಳಿಲ್ಲ. ಇದು ಎಡಿಟೆಡ್‌ ವಿಡಿಯೋ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *