ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾದ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ (ಇಲ್ಲಿ, ಮತ್ತು ಇಲ್ಲಿ). 2024 ರ ಲೋಕಸಭೆಯ ಫಲಿತಾಂಶಗಳನ್ನು ಗ್ರಹಿಸಿದ ನಂತರ ಅಖಿಲೇಶ್ ಯಾದವ್ ಇತ್ತೀಚೆಗೆ ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ ಎಂದು ಇಬ್ಬರು ಭೇಟಿಯಾದ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.
ಫ್ಯಾಕ್ಟ್‌ಚೆಕ್: ನಿಜಕ್ಕೂ ಅಖಿಲೇಶ್ ಯಾದವ್ ಅವರು ಮೋದಿಯವರನ್ನು ಭೇಟಿಯಾಗಿದ್ದಾರೆಯೇ ಎಂದು ಸಂಬಂಧಿತ ಕೀವರ್ಡ್ ಹುಡುಕಾಟ ನಡೆಸಿದಾಗ, ಇತ್ತೀಚಿನ ದಿನಗಳಲ್ಲಿ ಅಖಿಲೇಶ್ ಯಾದವ್ ಅವರು ಪ್ರಧಾನಿ ಮೋದಿಯನ್ನು ಭೇಟಿಯಾದ ಬಗ್ಗೆ ಯಾವುದೇ ವಿಶ್ವಾಸಾರ್ಹ ವರದಿಗಳು ಲಭ್ಯವಾಗಿಲ್ಲ.
ಈ ಹುಡುಕಾಟದ ಸಮಯದಲ್ಲಿ, 13 ಜೂನ್ 2014 ರಂದು ಪಿಎಂ ಮೋದಿ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ಇದೇ ರೀತಿಯ ದೃಶ್ಯಗಳನ್ನು ಒಳಗೊಂಡಿರುವ ವೀಡಿಯೊ ಒಂದು ನಮಗೆ ಲಭ್ಯವಾಗಿದ್ದು: “ಶ್ರೀ ನರೇಂದ್ರ ಮೋದಿ ಅವರು ಯುಪಿ ಸಿಎಂ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ.” (ಅಖಿಲೇಶ್ ಯಾದವ್ ಅವರು ಮಾರ್ಚ್ 2012 ರಿಂದ ಮಾರ್ಚ್ 2017 ರವರೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.) ಎಂದು ಶೀರ್ಷಿಕೆಯಲ್ಲಿ ತಿಳಿಸಲಾಗಿದೆ.
12 ಜೂನ್ 2014 ರಂದು ಪ್ರಧಾನ ಮಂತ್ರಿಗಳ ಕಚೇರಿಯ (PMO) ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಈ ಸಭೆಯ ಫೋಟೋವನ್ನು ಅಪ್‌ಲೋಡ್ ಮಾಡಿರುವುಡು ಕಂಡು ಬಂದಿದ್ದು: “ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಅಖಿಲೇಶ್ ಯಾದವ್ ಅವರು ರೇಸ್ ಕೋರ್ಸ್ ರಸ್ತೆಯ 7 ರಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದರು.“ ಹೆಚ್ಚುವರಿಯಾಗಿ, PMO ನ ಅಧಿಕೃತ ವೆಬ್‌ಸೈಟ್ ಈ ಸಭೆಯ ಫೋಟೋವನ್ನು ಹಂಚಿಕೊಂಡಿದೆ, ಇದು 12 ಜೂನ್ 2014 ರಂದು ವೈರಲ್ ವೀಡಿಯೊದಲ್ಲಿ ಕಂಡುಬರುವ ದೃಶ್ಯಗಳನ್ನು ಹೋಲುತ್ತದೆ. PMO ವೆಬ್‌ಸೈಟ್‌ನಲ್ಲಿ ಒದಗಿಸಿದ ಮಾಹಿತಿಯ ಪ್ರಕಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್, 7, ರೇಸ್ ಕೋರ್ಸ್ ರಸ್ತೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೌಜನ್ಯಕ್ಕಾಗಿ ಭೇಟಿಯಾದರು. ಆದ್ದರಿಂದ, ಅಖಿಲೇಶ್ ಯಾದವ್ ಪ್ರಧಾನಿ ಮೋದಿಯವರನ್ನು ಭೇಟಿಯಾದ ಈ ವೈರಲ್ ವೀಡಿಯೊ ಇತ್ತೀಚಿನದಲ್ಲ ಮತ್ತು 2014 ರ ಹಿಂದಿನದು ಎಂಬುದು ಸ್ಪಷ್ಟವಾಗಿದೆ.
ಅಖಿಲೇಶ್ ಯಾದವ್ ಮತ್ತು ಪಿಎಂ ಮೋದಿ ನಡುವಿನ ಈ ಭೇಟಿಗೆ ಸಂಬಂಧಿಸಿದ ಹೆಚ್ಚುವರಿ ಸುದ್ದಿ ವರದಿಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ಕಾಣಬಹುದು.
ಒಟ್ಟಾರೆಯಾಗಿ ಹೇಳುವುದಾದರೆ, ಅಖಿಲೇಶ್ ಯಾದವ್ ಅವರು ಪಿಎಂ ಮೋದಿ ಅವರನ್ನು ಭೇಟಿ ಮಾಡಿದ ಹಳೆಯ ವೀಡಿಯೊವನ್ನು 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಇತ್ತೀಚಿನ ವೀಡಿಯೊ ಎಂದು ಹಂಚಿಕೊಳ್ಳಲಾಗುತ್ತಿದೆ.
ಇದನ್ನು ಓದಿ: ಮೋದಿ ಪ್ರಧಾನಿಯಾಗುವ ಮುನ್ನ ಭಾರತದಲ್ಲಿ ಕೇವಲ 300 ಸ್ಟಾರ್ಟಪ್‌ಗಳಿದ್ದವು ಎಂಬುದು ಸುಳ್ಳು
ವಿಡಿಯೋ ನೋಡಿ: 2019ರಲ್ಲಿ ತಮಿಳುನಾಡಿನ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿರುವುದು UAE ರಾಜಕುಮಾರಿಯೇ ಹೊರತು, ದುಬೈ ಶೇಖ್‌ನ ಪತ್ನಿಯಲ್ಲ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.