Fact Check: ರಾಷ್ಟ್ರಗೀತೆ ವೇಳೆ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹಾಜರಿದ್ದರು, ತಡವಾಗಿ ಆಗಮಿಸಿದರು ಎಂಬ ಹೇಳಿಕೆ ಸುಳ್ಳು
ದೆಹಲಿಯಲ್ಲಿ ಹೊಸದಾಗಿ ನಿರ್ಮಿಸಲಾದ ಸಂಸತ್ ಭವನದಲ್ಲಿ ಜೂನ್ 24 ರಿಂದ ಜೂನ್ 26 ರವರೆಗೆ ಹೊಸದಾಗಿ ಆಯ್ಕೆಯಾದ ಸಂಸತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಈ ಅಧಿವೇಶನದ ವೀಡಿಯೋ (ಇದರಲ್ಲಿ ಸಂಸದರು ಪ್ರಮಾಣವಚನ ಸ್ವೀಕರಿಸುವ ಮೊದಲು ರಾಷ್ಟ್ರಗೀತೆಯನ್ನು ನುಡಿಸಲಾಗುತ್ತದೆ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ರಾಷ್ಟ್ರಗೀತೆ ಮುಗಿದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಡವಾಗಿ ಸಂಸತ್ತಿಗೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆಂಧ್ರಪ್ರದೇಶದ ಬಿಜೆಪಿ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ (@SVishnuReddy) ಜೂನ್ 24 ರಂದು ವೀಡಿಯೊ…