Fact Check: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಅಸಾದುದ್ದೀನ್ ಓವೈಸಿ ಹೇಳಿಲ್ಲ

ನೆನ್ನೆ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಅವರ ವೀಡಿಯೊ ಒಂದು ವೈರಲ್ ಆಗುತ್ತಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಆಶಿಸುತ್ತಿದ್ದಾರೆ ಎಂದು ಹೇಳುವುದನ್ನು ಕೇಳಬಹುದು. ನಿಜವಾಗಿಯೂ ಈ ಹೇಳಿಕೆಯನ್ನು ಓವೈಸಿ  ಅವರು ನೀಡಿದ್ದಾರೆಯೇ ಎಂದು ಈ ಲೇಖನದ ಮೂಲಕ ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್: ವೈರಲ್ ವಿಡಿಯೋದಲ್ಲಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಇಂಟರ್ನೆಟ್‌ನಲ್ಲಿ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ, ಮೂಲ ವಿಡಿಯೋ ನಮಗೆ ದೊರತಿದ್ದು, ಇದರಲ್ಲಿ ಅಸಾದುದ್ದೀನ್ ಓವಾಸಿ ಅವರು ನರೇಂದ್ರ ಮೋದಿ ಮೂರನೇ ಬಾರಿ ನಮ್ಮ ದೇಶದ ಪ್ರಧಾನಿಯಾಗುವುದಿಲ್ಲ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ಅಮರ್ ಉಜಾಲಾ, ಎಎನ್‌ಐ, ಇಂಡಿಯಾ ಟುಡೆ ಮತ್ತು ನ್ಯೂಸ್ 24 ನಂತಹ ಇತರ ಮಾಧ್ಯಮ ಸಂಸ್ಥೆಗಳು ಸಹ ಮೂಲ ವಿಡಿಯೋವನ್ನು ಪೋಸ್ಟ್ ಮಾಡಿವೆ. ಬಿಹಾರದ ಪಾಟ್ನಾದಲ್ಲಿ ಚುನಾವಣಾ ಪ್ರಚಾರದ ವೇಳೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಮೂಲ ವಿಡಿಯೋದಲ್ಲಿ, ಓವೈಸಿ, “ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಈ ದೇಶದ ಪ್ರಧಾನಿಯಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ. ಅದನ್ನು ಮಾಡಲು ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಈಗ ದೇಶವು ನಿರ್ಧರಿಸಬೇಕು (ಮುಂದೇನಾಗಬೇಕೆಂದು)” ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗುತ್ತಾರೆ ಎಂದು ಓವೈಸಿ ಅವರು ಆಶಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿರುವಂತೆ ಈ ವಿಡಿಯೋ ಕ್ಲಿಪ್‌ನ ಕೆಲವು ಭಾಗವನ್ನು ಎಡಿಟ್‌ ಮಾಡಿ ಹಂಚಿಕೊಳ್ಳಲಾಗುತ್ತಿದೆ.

ಇದೇ ವಿಡಿಯೋದಲ್ಲಿ, ಮುಸ್ಲಿಂ ಮೀಸಲಾತಿಯನ್ನು ತೆಗೆದುಹಾಕುವ ಗೃಹ ಸಚಿವ ಅಮಿತ್ ಶಾ ಅವರ ಚುನಾವಣಾ ಭರವಸೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು,“ಅವರು (ಅಮಿತ್ ಶಾ) ಎಲ್ಲರಿಗೂ ಮೀಸಲಾತಿಯನ್ನು ಕೊನೆಗೊಳಿಸುತ್ತಾರೆ; ಅವರು ಸಂವಿಧಾನವನ್ನು ಸಹ ಕೊನೆಗೊಳಿಸುತ್ತಾರೆ” ಎಂದಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗುವುದಿಲ್ಲ ಎಂದು ಹೇಳಿರುವ ವಿಡಿಯೋವನ್ನು, ಎಡಿಟ್ ಮಾಡಿ ” ಮೋದಿ ಮತ್ತೆ ಮೂರನೇ ಬಾರಿಗೆ ಪ್ರಧಾನಿ ಆಗಲಿ” ಎಂದಿದ್ದಾರೆ ಎನ್ನುವಂತೆ ಹಂಚಿಕೊಳ್ಳಲಾಗಿದೆ.


ಇದನ್ನು ಓದಿ: ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿಲ್ಲ


ವಿಡಿಯೋ ನೋಡಿ: ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ 63 ಲಕ್ಷದಷ್ಟು ದುಬಾರಿ ಮಾವಿನ ಹಣ್ಣುಗಳನ್ನು ತಿನ್ನಲು ಖರ್ಚು ಮಾಡಿದ್ದಾರೆ ಎಂಬುದು ಸುಳ್ಳು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *