ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲು ಕ್ಷಣಗಣನೆ ಆರಂಭವಾಗಿದೆ. ಎನ್‌ಡಿಎ ಮೈತ್ರಿ ಪಕ್ಷಗಳ ಮುಖಂಡರಾದ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರು ಬಿಜೆಪಿಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.
ಆದರೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ತೇಜಸ್ವಿ ಯಾದವ್ ಸೇರಿದಂತೆ INDIA ಒಕ್ಕೂಟದ ನಾಯಕರೊಂದಿಗೆ JD(U) ಮುಖ್ಯಸ್ಥ ಮತ್ತು NDA ಮಿತ್ರ ನಿತೀಶ್ ಕುಮಾರ್ ಅವರು ಭೇಟಿಯಾಗಿದ್ದಾರೆ ಎಂದು ವೀಡಿಯೊವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಅನೇಕರ ಎಕ್ಸ್ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ, “ಕಾಂಗ್ರೆಸ್ ಕಚೇರಿಯಲ್ಲಿ ಏನಾಯಿತು, ಆಟ ಇನ್ನೂ ನಡೆಯುತ್ತಿದೆ. (ಹಿಂದಿಯಿಂದ ಅನುವಾದಿಸಲಾಗಿದೆ)” ಎಂದು ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ.
ಫ್ಯಾಕ್ಟ್‌ಚೆಕ್: ಯುಟ್ಯೂಬ್‌ನಲ್ಲಿ “ನಿತೀಶ್ ಕುಮಾರ್,” “ತೇಜಸ್ವಿ ಯಾದವ್,” “ಮೀಟ್ಸ್” “ರಾಹುಲ್ ಗಾಂಧಿ,” ಮತ್ತು “ಮಲ್ಲಿಕಾರ್ಜುನ ಖರ್ಗೆ” ಗಾಗಿ ಕೀವರ್ಡ್ ಹುಡುಕಾಟ ನಡೆಸಿದಾಗ ಏಪ್ರಿಲ್ 12, 2023 ರ ಮಿಡ್‌ಡೇ ಇಂಡಿಯಾದ ವರದಿ ದೊರಕಿದ್ದು. ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರೊಂದಿಗೆ ಕಾಂಗ್ರೆಸ್ ನಾಯಕರು ನಡೆಸಿದ ಸಭೆಯ ಕುರಿತು ವರದಿಯಲ್ಲಿ ವಿವರಿಸಲಾಗಿದೆ. ಸಧ್ಯ ಇದೇ ವಿಡಿಯೋ ತುಣುಕನ್ನು ಬಳಸಿಕೊಂಡು ಇತ್ತೀಚೆಗೆ ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದ ಮುಖಂಡರನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ.
ಇದೇ ವಿಡಿಯೋ ತುಣುಕನ್ನು ಬಳಸಿಕೊಂಡು, ಏಪ್ರಿಲ್ 2023 ರಂದು NDTV ವರದಿ ಮಾಡಿದ್ದು ಅದರಲ್ಲಿ, “2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಒಂದು ಸಂಯುಕ್ತ ವಿರೋಧ ಪಕ್ಷವನ್ನು ಒಟ್ಟಿಗೆ ಸೇರಿಸುವ ಮತ್ತೊಂದು ಪ್ರಯತ್ನದಲ್ಲಿ, ಕಾಂಗ್ರೆಸ್, ಜನತಾ ದಳ (ಯುನೈಟೆಡ್) (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸುವ ಸಾಧ್ಯತೆಯನ್ನು ಅನ್ವೇಷಿಸಲು ಇಂದು ದೆಹಲಿಯಲ್ಲಿ ಸಭೆ ನಡೆದರು” ಎಂದು ತಿಳಿಸಿದೆ.
ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ. ನಾವು ವಿರೋಧ ಪಕ್ಷಗಳ ದೃಷ್ಟಿಕೋನವನ್ನು ಅಭಿವೃದ್ಧಿಪಡಿಸುತ್ತೇವೆ ಮತ್ತು ಮುಂದುವರಿಯುತ್ತೇವೆ … ನಾವು ದೇಶಕ್ಕಾಗಿ ಒಟ್ಟಾಗಿ ನಿಲ್ಲುತ್ತೇವೆ ”ಎಂದು ಸಭೆಯ ನಂತರ ರಾಹುಲ್ ಗಾಂಧಿ ಹೇಳಿದರು.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಏಪ್ರಿಲ್ 12, 2023 ರಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಸಭೆಯ ಛಾಯಾಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಅದನ್ನು ಕೆಳಗೆ ನೋಡಬಹುದು.
ಗಮನಾರ್ಹವಾಗಿ, ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ವಿರೋಧ ಪಕ್ಷವಾದ ಇಂಡಿಯಾ ಒಕ್ಕೂಟದ ಸಂಬಂಧವನ್ನು ಕಡಿದುಕೊಂಡರು ಮತ್ತು 2024 ರ ಜನವರಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರಿದರು.
ಆದ್ದರಿಂದ, ನಿತೀಶ್ ಕುಮಾರ್ ಅವರು ಇಂಡಿಯಾ ಒಕ್ಕೂಟದ ನಾಯಕರೊಂದಿಗಿನ ಹಳೆಯ ವೀಡಿಯೋವನ್ನು ಇತ್ತೀಚಿಗೆ ಸಭೆ ನಡೆಸಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.
ಇದನ್ನು ಓದಿ: ಕಂಗನಾ ರಣಾವತ್ ಕೆನ್ನೆಯಲ್ಲಿ ಮೂಡಿದ ಹಸ್ತದ ಗುರುತು ಎಂದು ಸೊಳ್ಳೆ ಸ್ಪ್ರೇಗಾಗಿ ಮಾಡಿದ ಜಾಹಿರಾತಿನ ಪೋಟೋ ಹಂಚಿಕೆ
ವಿಡಿಯೋ ನೋಡಿ: ಗಾಂಧಿ ಸಿನಿಮಾ ಬಿಡುಗಡೆಗೂ ಮುನ್ನ ಅವರ ಬಗ್ಗೆ ಜಗತ್ತಿಗೆ ತಿಳಿದಿರಲಿಲ್ಲ ಎಂಬ ಮೋದಿ ಹೇಳಿಕೆ ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ