Fact Check | ಬಾಂಗ್ಲಾದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾರತದ ವಿರುದ್ಧ ಘೋಷಣೆ ಕೂಗಿಲ್ಲ

ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳು ಕೋಟ ವ್ಯವಸ್ಥೆಯನ್ನು ವಿರೋಧಿಸಿ ವ್ಯಾಪಕವಾಗಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾರತದ ವಿರುದ್ಧ ಘೋಷಣೆಯನ್ನು ಕೂಗಲಾಗಿದೆ ಎಂದು ವಿಡಿಯೋ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಮೂಲಕ ಬಾಂಗ್ಲಾದೇಶದಲ್ಲಿ ಯಾವುದೇ ಪ್ರತಿಭಟನೆ ನಡೆದರೂ ಅಲ್ಲಿ ಭಾರತ ವಿರೋಧಿ ನಿಲುವು ಇರುತ್ತದೆ ಎಂದು ಹಂಚಿಕೊಳ್ಳಲಾಗುತ್ತಿದೆ.

ವೈರಲ್ ವಿಡಿಯೋದಲ್ಲಿ ಕೂಡ ಭಾರತದ ವಿರುದ್ಧ ಘೋಷಣೆಯನ್ನು ಕೂಗುತ್ತಿರುವುದನ್ನು ನೋಡಬಹುದಾಗಿದೆ. ಹೀಗಾಗಿ ಈ ವೈರಲ್ ವಿಡಿಯೋವನ್ನು ನೋಡಿದ ಹಲವು ಮಂದಿ, ಬಾಂಗ್ಲಾದೇಶವು ಪ್ರತಿಯೊಂದು ವಿಚಾರದಲ್ಲೂ ಭಾರತದ ವಿರುದ್ಧದ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಬರೆದುಕೊಂಡು, ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಶೇರ್ ಮಾಡಲಾಗುತ್ತಿರುವ ವಿಡಿಯೋದ ಸತ್ಯಾಸತ್ಯತೆ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್‌ಚೆಕ್

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಕುರಿತು ಕನ್ನಡ ಪ್ಯಾಕ್ಟ್‌ಚೆಕ್‌ ತಂಡ ಪರಿಶೀಲನೆ ನಡೆಸಲು ಮುಂದಾಯಿತು. ಈ ವಿಡಿಯೋಗೆ ಸಂಬಂಧಿಸಿದಂತೆ ವಿವಿಧ ಕೀಬೋರ್ಡ್‌ಗಳನ್ನು ಬಳಸಿ ಅಂತರ್ಜಾಲದಲ್ಲಿ ಹುಡುಕಾಟವನ್ನು ನಡೆಸಲಾಯಿತು. ಈ ವೇಳೆ 5 ಜುಲೈ 2024 ರಂದು ಜಾಗೋ ನ್ಯೂಸ್ ವರದಿ ಮಾಡಿದ ಸುದ್ದಿಯೊಂದು ಕಂಡು ಬಂದಿದೆ.

ಆ ವರದಿಯ ಪ್ರಕಾರ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಹೊಸ ರೈಲ್ವೆ ಒಪ್ಪಂದದ ವಿರುದ್ಧ ಬಾಂಗ್ಲಾದೇಶದ ಸಾರ್ವಜನಿಕರು ಮತ್ತು ಹಲವು ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿವೆ ಎಂಬುದು ತಿಳಿದು ಬಂದಿದೆ. ಇನ್ನು ಹೀಗೆ ಪ್ರತಿಭಟನೆ ನಡೆಸಿದವರಲ್ಲಿ ಗಣ ಓಧಿಕಾರ್ ಪರಿಷತ್ ಸಂಘಟನೆಯ ಕಾರ್ಯಕರ್ತರು ಹೆಚ್ಚಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇನ್ನು ಇವರು ಭಾರತ ಮತ್ತು ಬಾಂಗ್ಲಾದೇಶದ ನಡುವೆ ನಡೆದ ರೈಲ್ವೆ ಒಪ್ಪಂದವನ್ನು ಅಕ್ರಮ ಎಂದು ಪ್ರತಿಪಾದಿಸಿದ್ದಾರೆ ಎಂಬುದು ಕೂಡ ವರದಿಯಲ್ಲಿ ಪ್ರಕಟಿಸಲಾಗಿದೆ.

ವರದಿಯ ಮೂಲಕ ಎರಡೂ ಪ್ರತಿಭಟನೆಗಳು ಜುಲೈ ತಿಂಗಳಿನಲ್ಲಿಯೇ ನಡೆದಿವೆ. ಆದರೆ ಪ್ರತಿಭಟನೆಗೆ ಕಾರಣಗಳು ಮಾತ್ರ ಬೇರೆ ಬೇರೆಯಾಗಿವೆ.  ಅದರಲ್ಲಿ ವಿದ್ಯಾರ್ಥಿಗಳ ಕೋಟ ವಿರೋಧಿ ಪ್ರತಿಭಟನೆ ಎಂದು ಭಾರತ ಮತ್ತು ಬಾಂಗ್ಲಾ ನಡುವಿನ ರೈಲ್ವೇ ಒಪ್ಪಂದದ ವಿಡಿಯೋಗಳನ್ನು ಹಂಚಿಕೊಳ್ಳಲಾಗಿದ್ದು, ಇದೇ ವಿಡಿಯೋ ಇತ್ತೀಚಿನದ್ದು ಎಂದು ಹಂಚಿಕೊಳ್ಳಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ ಇತ್ತೀಚಿದ್ದೇ ಆಗಿದೆ. ಆದರೆ ಈ ವೈರಲ್‌ ವಿಡಿಯೋ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಕೋಟ ವಿರೋಧಿ ಪ್ರತಿಭಟನೆಗೂ ಭಾರತದ ವಿರುದ್ಧ ಘೋಷಣೆ ಕೂಗಿದ ವಿಡಿಯೋ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂಬುದು ಸಾಬೀತಾಗಿದೆ. ಹಾಗಾಗಿ ಇಂತಹ ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲನೆ ನಡೆಸುವುದು ಉತ್ತಮ.


ಇದನ್ನೂ ಓದಿ : Fact Check | ಪ್ಯಾರಿಸ್ ಒಲಿಂಪಿಕ್ಸ್‌ನ ವಿವಾದಾತ್ಮಕ ಉದ್ಘಾಟನಾ ಸಮಾರಂಭವನ್ನು ಕಮಲಾ ಹ್ಯಾರಿಸ್ ಹೊಗಳಿಲ್ಲ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *