ಪ್ರಧಾನಿ ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭಾರತ ಒಲಂಪಿಕ್ಸ್ ನಲ್ಲಿ ಭಾಗವಹಿಸುತ್ತಿತ್ತು. ಆದರೆ ನಾವು ಪದಕಗಳ ಪಟ್ಟಿಯಲ್ಲಿ ಇರಲಿಲ್ಲ. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದಲ್ಲಿ ಕ್ರೀಡಾಪಟುಗಳಿಗೆ ಬೆಂಬಲ ನೀಡುವ ಕೆಲಸ ಮಾಡಲಾಗಿದೆ. ಆ ಮೂಲಕ ಈ ಬಾರಿಯ ಮೊದಲ ಪದಕವನ್ನು ಭಾರತೀಯ ಮಹಿಳೆಯೊಬ್ಬರು ಗೆದ್ದಿರುವುದು ನನಗೆ ತುಂಬಾ ಸಂತಸವನ್ನು ತಂದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಯನ್ನು ನೀಡಿದ್ದಾರೆ.
ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದು, ಹಲವರು ಸಂಸದೆಯ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸಂಸದೆ ನೀಡಿರುವ ಈ ಹೇಳಿಯಲ್ಲಿನ ಸತ್ಯಾಸತ್ಯತೆ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ನಾವು ಪರಿಶೀಲನೆ ನಡೆಸೋಣ
ಫ್ಯಾಕ್ಟ್‌ಚೆಕ್
ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಹಾಗೂ ವಿವಾದಕ್ಕೆ ಕಾರಣವಾಗಿರುವ ಸಂಸದೆ ಶೋಭಾ ಕರಂದ್ಲಾಜೆ ಅವರ ಹೇಳಿಕೆಯ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ಕೆಲವೊಂದು ಕೀಬೋರ್ಡ್‌ಗಳನ್ನು ಬಳಸಿ ಅಂತರ್ಜಲದಲ್ಲಿ ಹುಡುಕಾಟವನ್ನು ನಡೆಸಲಾಯಿತು. ಈ ವೇಳೆ ಪ್ರಧಾನಿ ಮೋದಿ ಸರ್ಕಾರಕ್ಕೂ ಮುಂಚೆ ಭಾರತದ ಕ್ರೀಡಾಪಟುಗಳು ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ ಎಂಬುದಕ್ಕೆ ಹಲವು ದಾಖಲೆಗಳು ಪತ್ತೆಯಾಗಿದೆ.
ದತ್ತಾಂಶ ಸಹಿತ ಮಾಹಿತಿಗಾಗಿ ಹುಡುಕಿದಾಗ ವಿಕಿಪೀಡಿಯದಲ್ಲಿ ಭಾರತ ಒಲಿಂಪಿಕ್ಸ್‌ನಲ್ಲಿ ಇದುವರೆಗೆ ಗೆದ್ದ ಪದಕಗಳ ಕುರಿತು ಮಾಹಿತಿ ಲಭ್ಯವಾಗಿದೆ. ಇದರ ಪ್ರಕಾರ 2004ರಲ್ಲಿ ರಾಜ್ಯವರ್ಧನ್ ಸಿಂಗ್ ರಾಥೋರ್ ಅವರು ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದರು. 2008ರಲ್ಲಿ ಅಭಿನವ ಬಿಂದ್ರ ಶೂಟಿಂಗ್‌ನಲ್ಲಿ ಚಿನ್ನ, ವಿಜೇಂದರ್ ಸಿಂಗ್ ಬಾಕ್ಸಿಂಗ್‌ನಲ್ಲಿ ಕಂಚು, ಸುಶೀಲ್ ಕುಮಾರ್ ವ್ರೆಸ್ಲಿಂಗ್‌ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು.
2012ರಲ್ಲಿ ಲಂಡನ್ ನಲ್ಲಿ ನಡೆದ ಒಲಿಂಪಿಕ್ಸ್ ನಲ್ಲಿ ವಿಜಯ್ ಕುಮಾರ್ ಶೂಟಿಂಗ್‌ನಲ್ಲಿ ಬೆಳ್ಳಿ, ಸುಶೀಲ್ ಕುಮಾರ್ ವ್ರೆಸ್ಲಿಂಗ್‌ನಲ್ಲಿ ಬೆಳ್ಳಿ, ಪಿ.ವಿ. ಸಿಂಧು ಬ್ಯಾಡ್ಮೆಂಟನ್‌ನಲ್ಲಿ ಬೆಳ್ಳಿ, ಸೈನಾ ನೆಹ್ವಾಲ್ ಬ್ಯಾಡ್ಮೆಂಟನ್‌ನಲ್ಲಿ ಕಂಚು ಮೇರಿ ಕೋಮ್ ಬಾಕ್ಸಿಂಗ್‌ನಲ್ಲಿ ಕಂಚು, ಗಗನ್ ನಾರಂಗ್ ಶೂಟಿಂಗ್‌ನಲ್ಲಿ ಕಂಚು, ಯೋಗೇಶ್ವರ್ ದತ್ ವ್ರೆಸ್ಲಿಂಗ್‌ನಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿದ್ದರು.
ಈ ಎಲ್ಲಾ ಅಂಕಿ ಅಂಶಗಳನ್ನು ಪರಿಶೀಲಿಸಿದಾಗ ಸಂಸದೆ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ. ಈ ವಿಡಿಯೋ ನಿಮಗೆ ಕಂಡು ಬಂದರೆ ಅದನ್ನು ನಿರ್ಲಕ್ಷಿಸಿ, ಆ ಮೂಲಕ ಸುಳ್ಳು ಸುದ್ದಿ ಹರಡುವುದನ್ನು ತಡೆಯಿರಿ.
ಇದನ್ನೂ ಓದಿ : Fact Check: ವಿಶ್ವದ ಅತಿ ಎತ್ತರದ ರೈಲು ಸೇತುವೆಯನ್ನು ಕಾಶ್ಮೀರದ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ ಎಂದು AI ಪೋಟೋ ವೈರಲ್
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ