Fact Check | ವಯನಾಡ್ ಭೂಕುಸಿತದ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ರಾಹುಲ್‌ ಗಾಂಧಿ ಪ್ರಸಿದ್ಧ ಹೋಟೆಲ್‌ಗೆ ತೆರಳಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ನಲ್ಲಿ ಉಂಟಾದ ಭೂಕುಸಿತದ ಭೇಟಿ ವೇಳೆ ಐಷಾರಾಮಿ ಹೋಟೆಲ್‌ಗೆ ಭೇಟಿ ನೀಡಿದ್ದರು ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದ ಹಲವರು ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಹಾಗೆಯೇ ಈ ವಿಡಿಯೋ ಹಲವು ರೀತಿಯಾದ ಚರ್ಚೆಯನ್ನು ಕೂಡ ಹುಟ್ಟು ಹಾಕಿದೆ. ಹಲವಾರು ಮಂದಿ ವಿವಿಧ ರೀತಿಯ ಟಿಪ್ಪಣಿಗಳನ್ನು ಬರೆದು ರಾಹುಲ್‌ ಗಾಂಧಿ ಅವರ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸುತ್ತಿದ್ದಾರೆ.

ಇನ್ನೂ ಕೆಲವರು ಈ ವಿಡಿಯೋ ಹಾಗೂ ಟಿಪ್ಪಣಿಯ ಸತ್ಯಾಸತ್ಯತೆಯನ್ನು ತಿಳಿಯದೆ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಶೇರ್‌ ಮಾಡಿ ರಾಹುಲ್‌ ಗಾಂಧಿ ಅವರ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಇನ್ನು ವೈರಲ್‌ ವಿಡಿಯೋದಲ್ಲಿ ಕೂಡ ರಾಹುಲ್‌ ಗಾಂಧಿ ಅವರು ಹೋಟೆಲ್‌ವೊಂದರಲ್ಲಿ ಇರುವಂತೆಯೇ ಕಾಣುತ್ತಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತು ಏನು ಎಂಬುದನ್ನು ನಾವು ಈ ಫ್ಯಾಕ್ಟ್‌ಚೆಕ್‌ನಲ್ಲಿ ಸಂಪೂರ್ಣವಾಗಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿರುವ ವಿಡಿಯೋ ಕುರಿತು ಪರಿಶೀಲನೆ ನಡೆಸಲು ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿಕೊಂಡು ಅಂತರ್ಜಾಲದಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 15 ಜುಲೈ 2024 ರ ಹಿಂದೂಸ್ತಾನ್‌ ಟೈಮ್ಸ್‌ ” Rahul Gandhi spotted at pizzeria in viral video while Anant Ambani, Radhika Merchant wedding captivates internet” ಎಂಬ ಶೀರ್ಷಿಕೆಯಡಿ ಪ್ರಕಟಿಸಿದ ವರದಿಯೊಂದು ಕಂಡು ಬಂದಿದೆ.

ಈ ವರದಿಯಲ್ಲಿ ವೈರಲ್‌ ವಿಡಿಯೋ ಕಂಡು ಬಂದಿದ್ದು, ಹಿಂದೂಸ್ತಾನ್‌ ಟೈಮ್ಸ್‌ ವರದಿಯನ್ನು ಆಧಾರವಾಗಿ ಪರಿಶೀಲಿಸಿದಾಗ ಈ ವೈರಲ್‌ ವಿಡಿಯೋ ಕೇರಳದ ಭೂಕುಸಿತಕ್ಕೂ ಹಿಂದಿನದ್ದು ಎಂದು ಸಾಬೀತಾಗಿದೆ. ಇನ್ನೂ ಕೆಲವರು ರಾಹುಲ್‌ ಗಾಂಧಿ ಸಂತ್ರಸ್ಥರನ್ನು ಭೇಟಿ ಮಾಡಲೇ ಇಲ್ಲ ಎಂದು ಹಂಚಿಕೊಳ್ಳುತ್ತಿದ್ದಾರೆ. ಆದರೆ  ಈ ತಿಂಗಳ ಆರಂಭದಲ್ಲೇ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ , ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ, ಕೇರಳದ ವಯನಾಡಿನ ಚೂರಲ್ಮಲಾದಲ್ಲಿ ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದರು. ಕಾಂಗ್ರೆಸ್ ನಾಯಕರು ಸಂತ್ರಸ್ತರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಒಟ್ಟಾರೆಯಾಗಿ ಹೇಳುವುದಾದರೆ, ರಾಹುಲ್ ಗಾಂಧಿ ರೆಸ್ಟೋರೆಂಟ್‌ನಲ್ಲಿ ಊಟ ಮಾಡುತ್ತಿರುವ ಹಳೆಯ ವೀಡಿಯೊವನ್ನು ಇತ್ತೀಚಿನ ಕೇರಳ ಭೂಕುಸಿತಕ್ಕೆ ತಪ್ಪಾಗಿ ಲಿಂಕ್ ಮಾಡಲಾಗುತ್ತಿದೆ. ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋ 15 ಜುಲೈ 2024ರಿಂದಲೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಇದು ಇತ್ತೀಚಿನ ವಿಡಿಯೋ ಎಂಬುದು ಕೂಡ ಸುಳ್ಳಾಗಿದೆ. ಹಾಗಾಗಿ ಇಂತಹ ಸುಳ್ಳು ಸುದ್ದಿಗಳನ್ನು ನಂಬುವ ಮುನ್ನ ಒಮ್ಮೆ ಪರಿಶೀಲನೆ ನಡೆಸುವುದು ಉತ್ತಮವಾಗಿದೆ.


ಇದನ್ನೂ ಓದಿ : Fact Check: ಆಸ್ಟ್ರೇಲಿಯಾವು ಜಾರ್ಜ್ ಸೊರೊಸ್ ನನ್ನು ‘ಜಾಗತಿಕ ಭಯೋತ್ಪಾದಕ’ ಎಂದು ಘೋಷಿಸಿಲ್ಲ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

Leave a Reply

Your email address will not be published. Required fields are marked *