Fact Check| ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಮಾರಾಟ ಮಾಡಿಲ್ಲ
ವಿದೇಶಾಂಗ ಸಚಿವ ಜೈಶಂಕರ್‌ರವರ ಮೂರು ದಿನಗಳ ಮಾಲ್ಡೀವ್ಸ್ ಪ್ರವಾಸದ ಚಿತ್ರಗಳು ವೈರಲ್ ಆದ ಬೆನ್ನಲ್ಲೇ “ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಮಾರಾಟ ಮಾಡಿದೆ” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವಿವಿಧ ಆಯಾಮಗಳಲ್ಲಿ ಚರ್ಚೆಯಾಗುತ್ತಿದೆ. ಚೀನಾ ವಿರುದ್ಧ ಮೋದಿ ಸರಕಾರಕ್ಕೆ ರಾಜತಾಂತ್ರಿಕ ಗೆಲುವು. 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟುಕೊಟ್ಟ ಮಾಲ್ಡೀವ್ಸ್ ಎಂಬ ಶೀರ್ಷಿಕೆಯಲ್ಲಿ ಪೋಸ್ಟ್ ಕಾರ್ಡ್ ಸುಳ್ಳು ಮಾಹಿತಿಯನ್ನು ಹರಿಬಿಡುತ್ತಿದೆ. ಇದರಂತೆಯೇ ಸಾಮಾಜಿಕ ಜಾಲತಾಣ ಎಕ್ಸ್‌ನ ಕೆಲವು ಅಧಿಕೃತ ಖಾತೆಗಳಲ್ಲಿ…