Fact Check | ಫರೀದ್‌ಪುರ ದೇವಸ್ಥಾನದಲ್ಲಿ ವಿಗ್ರಹಗಳನ್ನು ದ್ವಂಸಗೊಳಿಸಿದ ವ್ಯಕ್ತಿ ಬಾಂಗ್ಲಾದೇಶದವನೇ ಹೊರತು ಭಾರತೀಯನಲ್ಲ

“ಹರಿ ಮಂದಿರ ಮತ್ತು ಕಾಳಿ ಎಂಬ ಎರಡು ಹಿಂದೂ ದೇವಾಲಯಗಳಲ್ಲಿ ವಿಗ್ರಹಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫರೀದ್‌ಪುರದ ಪೊಲೀಸರು 45 ವರ್ಷ ವಯಸ್ಸಿನ ಸಂಜಿತ್ ಬಿಸ್ವಾಸ್ ಅವರನ್ನು ಬಂಧಿಸಿದ್ದಾರೆ . ಈ ಸರಣಿ ಘಟನೆಗಳು ಇದೇ ಸೆಪ್ಟೆಂಬರ್ 14 ರ ರಾತ್ರಿ ಸಂಭವಿಸಿವೆ ಎಂಬ ಮಾಹಿತಿ ಲಭ್ಯವಾಗಿದೆ.” ಎಂದು ಕೆಲವರು ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು “ಇತ್ತೀಚೆಗೆ, ಧರ್ಮದಿಂದ ಹಿಂದೂ ಆಗಿರುವ ಮತ್ತು ಮಾನಸಿಕ ಅಸ್ವಸ್ಥನಂತೆ ನಟಿಸುತ್ತಿರುವ ಭಾರತೀಯ ವ್ಯಕ್ತಿಯೊಬ್ಬರು ಬಾಂಗ್ಲಾದೇಶದಲ್ಲಿ ಹಿಂದೂ ವಿಗ್ರಹಗಳನ್ನು ಧ್ವಂಸ ಮಾಡುವಾಗ ಸಿಕ್ಕಿಬಿದ್ದಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ವಿವಿಧ ಬರಹಗಳಿಂದ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಪೋಸ್ಟ್‌ಗಳನ್ನು ಸಾಕಷ್ಟು ಮಂದಿ ನಿಜವೆಂದು ನಂಬಿದ್ದಾರೆ. ಹಲವರು ತಮ್ಮ ಸಾಮಾಜಿಕ ಜಾಲತಾಣದ ವೈಯಕ್ತಿಕ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ಈ ಪ್ರಕರಣದ ಕುರಿತು ಹಲವು ರೀತಿಯಾದ ಗೊಂದಲಗಳು ಕೂಡ ಉಂಟಾಗುತ್ತಿದೆ. ಹಲವರು ಇದೊಂದು ಸುಳ್ಳು ಮಾಹಿತಿ ಎಂದು ಹೇಳುತ್ತಿದ್ದಾರೆ. ಹಾಗಾಗಿ ಈ ಪ್ರಕರಣದ ಕುರಿತು ಸಾಕಷ್ಟು ಮಂದಿಗೆ ಸ್ಪಷ್ಟತೆ ಇಲ್ಲದಿರುವುದು ಖಚಿತವಾಗಿದೆ. ಹೀಗಾಗಿ ವೈರಲ್‌ ಘಟನೆಯ ಕುರಿತು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿರುವ ಪೋಸ್ಟ್‌ ಕುರಿತು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಪರಿಶೀಲನೆ ನಡೆಸಲು ಮುಂದಾಯಿತು. ಇದಕ್ಕಾಗಿ ನಾವು ವೈರಲ್‌ ವಿಡಿಯೋಗೆ ಸಂಬಂಧಿಸಿದಂತೆ ಕೆಲವೊಂದು ಕೀ ವರ್ಡ್‌ಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ಡೈಲಿ ಸನ್‌ ಸುದ್ದಿತಾಣದ ವರದಿಯೊಂದು ಪ್ರಕಟಗೊಂಡಿದ್ದು, ಅದರಲ್ಲಿ ಫರೀದ್‌ಪುರದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ವ್ಯಕ್ತಿ ಭಾರತೀಯನಲ್ಲ ಎಂಬುದನ್ನು ಉಲ್ಲೇಖಿಸಿರುವುದನ್ನು ಕಂಡುಕೊಂಡಿದ್ದೇವೆ. ಇದೇ ರೀತಿಯ ಹಲವು ವರದಿಗಳಲ್ಲಿ ಕೂಡ ಉಲ್ಲೇಖವಾಗಿರುವುದು ನಮಗೆ ಕಂಡು ಬಂದಿವೆ.

ವರದಿಗಳ ಪ್ರಕಾರ  ಫರೀದ್‌ಪುರದ ಹೆಚ್ಚುವರಿ ಪೊಲೀಸ್ ಅಧೀಕ್ಷಕರು  ಹಿಂದೂ ವಿಗ್ರಹಗಳನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ಬಂಧಿತರಾಗಿರುವವರು ಭಾರತೀಯ ಪ್ರಜೆ ಎಂಬುದು ಸುಳ್ಳು. ಬಂಧಿತ ವ್ಯಕ್ತಿ ಮಾನಸಿಕ ಅಸ್ವಸ್ಥ, ಬಾಂಗ್ಲಾದೇಶಿ ಎಂದು ಮಾಹಿತಿ ನೀಡಿದ್ದಾರೆ. ಸುಮಾರು 24-25 ವರ್ಷಗಳ ಹಿಂದೆ ಕೆಲಸಕ್ಕಾಗಿ ಭಾರತಕ್ಕೆ ತೆರಳಿದ್ದ ಸಂಜಿತ್ ಬಾಂಗ್ಲಾದೇಶಕ್ಕೆ ಮರಳಿದ್ದಾನೆ. ಮತ್ತು ನಂತರ ಸುಮಾರು ನಾಲ್ಕು ವರ್ಷಗಳ ಹಿಂದೆ ನಾಪತ್ತೆಯಾಗಿದ್ದರು. ಅಂದಿನಿಂದ ಸಂಜಿತ್ ತನ್ನ ಕುಟುಂಬದೊಂದಿಗೆ ಯಾವುದೇ ಸಂಪರ್ಕವನ್ನು ಹೊಂದಿಲ್ಲ ಮತ್ತು ಆಗಾಗ್ಗೆ ಭಾರತಕ್ಕೆ ಪ್ರಯಾಣಿಸುತ್ತಿದ್ದ ಎಂದು ತಿಳಿದುಬಂದಿದೆ. ಸಂಜಿತ್ ಮಾನಸಿಕ ಅಸ್ವಸ್ಥ ಎಂದು ಆತನ ತಂದೆ ಬಹಿರಂಗಪಡಿಸಿದ್ದಾರೆ.

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ, ಹಿಂದೂ ದೇವರ ವಿಗ್ರಹ ನಾಶ ಮಾಡಿದ ಬಂಧಿತ ವ್ಯಕ್ತಿ ಸಂಜಿತ್ ಬಿಸ್ವಾಸ್ ಭಾರತೀಯರಲ್ಲ ಬದಲಾಗಿ ಭಾರತಕ್ಕೆ ಪದೇ ಪದೇ ಪ್ರಯಾಣಿಸುತ್ತಿದ್ದ ಮಾನಸಿಕ ಅಸ್ವಸ್ಥ ಮತ್ತು ಈತನ ಮೂಲ ಬಾಂಗ್ಲಾದೇಶವೇ ಆಗಿದೆ ಎಂಬುದು ಹಲವು ವರದಿಗಳು ಮತ್ತು ಪೊಲೀಸರ ತನಿಖೆಯಿಂದ ಬಯಲಾಗಿದೆ. ಹಾಗಾಗಿ ಯಾವುದೇ ಸುದ್ದಿಗಳನ್ನು ನಂಬುವ ಮುನ್ನ ಒಮ್ಮೆ ಪರಿಶೀಲಿಸಿಕೊಳ್ಳಿ, ಯಾವುದಾದರೂ ಸುದ್ದಿಗಳ ಬಗ್ಗ ಅನುಮಾನ ಬಂದರೆ ಅವುಗಳನ್ನು ಹಂಚಿಕೊಳ್ಳಬೇಡಿ.


ಇದನ್ನೂ ಓದಿ : Fact Check : ಇತ್ತೀಚೆಗೆ ಲೆಬನಾನ್‌ನಲ್ಲಿ ಸೌರ ಫಲಕಗಳು ಸ್ಪೋಟಗೊಂಡಿವೆ ಎಂಬುದು ಸುಳ್ಳು


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *