Fact Check | ಚಿಕಾಗೋ ಧರ್ಮ ಸಮ್ಮೇಳನದಲ್ಲಿ ವಿವೇಕಾನಂದರು ಮಾಡಿದ ಭಾಷಣದ ವೀಡಿಯೊ ಎಂದು ಸಿನಿಮಾದ ದೃಶ್ಯ ಹಂಚಿಕೆ

ಅಮೆರಿಕದ ಚಿಕಾಗೋದಲ್ಲಿ 1893ರ ಸೆಪ್ಟೆಂಬರ್ 11ರಂದು ಸ್ವಾಮಿ ವಿವೇಕಾನಂದರು ವಿಶ್ವಧರ್ಮ ಸಮ್ಮೇಳನದಲ್ಲಿ ಮಾಡಿದ್ದ ಭಾಷಣದ ನಿಜವಾದ ವಿಡಿಯೋ ಲಭ್ಯವಾಗಿದೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾಮಿ ವಿವೇಕಾನಂದರಂತೆಯೇ ವ್ಯಕ್ತಿಯೊಬ್ಬರು ಭಾಷಣ ಮಾಡುತ್ತಿರುವುದನ್ನು ನೋಡಬಹುದಾಗಿದೆ. ಈ ಭಾಷಣವು ಸ್ವಾಮಿ ವಿವೇಕಾನಂದರ ಮೂಲ ಭಾಷಣಕ್ಕೆ ಹೋಲಿಕೆಯಾಗಿದೆ.

ಹೀಗೆ ವ್ಯಾಪಕವಾಗಿ ವೈರಲ್ ಆಗಿರುವ ವಿಡಿಯೋ ಮೂಲ ವಿಡಿಯೋವಿನಂತೆ ಭಾಸವಾಗುತ್ತಿದ್ದು, ಇದರಲ್ಲಿ ಸ್ವಾಮಿ ವಿವೇಕಾನಂದರ ಭಾಷಣಗಳೇ ಇರುವುದರಿಂದ, ಹಲವು ಮಂದಿ ಈ ಪೋಸ್ಟ್ ಅನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಇದು ವಿವೇಕಾನಂದರ ಅಭಿಮಾನಿಗಳು, ಹಿಂಬಾಲಕರು, ಭಕ್ತರಲ್ಲಿ ಗೊಂದಲವನ್ನು ಮೂಡಿಸುತ್ತಿದೆ. ಹೀಗೆ ಶೇರ್ ಮಾಡಲಾಗುತ್ತಿರುವ ಪೋಸ್ಟ್‌ನ ಹಿನ್ನೆಲೆ ಏನು ಎಂಬುದನ್ನು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್‌ನ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್‌ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್‌ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ 28 ಸೆಪ್ಟೆಂಬರ್ 2018 ರಂದು “ಸ್ವಾಮಿ ವಿವೇಕಾನಂದರ ಆತ್ಮಕಥೆ ಪೂರ್ಣ ಸಿನಿಮಾ ಹಿಂದಿ” ಎಂಬ ಶೀರ್ಷಿಕೆಯಲ್ಲಿ ವೈರಲ್ ವಿಡಿಯೋ ಅನ್ನು ಒಳಗೊಂಡಿರುವ ಮೂಲ ವಿಡಿಯೋವನ್ನು ಹಂಚಿಕೊಂಡಿರುವುದು ಕಂಡುಬಂದಿದೆ. ಹೀಗಾಗಿ ವೈರಲ್ ವಿಡಿಯೋ ಸ್ವಾಮಿ ವಿವೇಕಾನಂದರ ಜೀವನಗಾತೆಯ ಸಿನಿಮಾದ ದೃಶ್ಯಾವಳಿಗಳಾಗಿವೆ ಎಂಬುದು ನಮಗೆ ಖಚಿತವಾಗಿದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಹುಡುಕಾಟವನ್ನು ನಡೆಸಿದಾಗ ನ್ಯೂಸ್ ಹಿಂದುಸ್ತಾನ್ 24 ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ 12 ಸೆಪ್ಟೆಂಬರ್ 2017ರಂದು Swami Vivekananda Chicago Speech In Hindi Version ಎಂಬ ಶೀರ್ಷಿಕೆಯಲ್ಲಿ ಬೇರೆಯದ್ದೇ ದ್ವನಿಯಲ್ಲಿ ಸ್ವಾಮಿ ವಿವೇಕಾನಂದರ ಭಾಷಣ ಇರುವುದು ಕಂಡುಬಂದಿದೆ. ಇದೇ ರೀತಿಯಲ್ಲಿ ಸ್ವಾಮಿ ವಿವೇಕಾನಂದರ ಮೂಲ ಭಾಷಣ ಎಂದು ವಿವಿಧ ರೀತಿಯಲ್ಲಿ ಅವರ ಭಾಷಣಗಳನ್ನು ಹಂಚಿಕೊಳ್ಳಲಾಗಿದೆ. ಸ್ವಾಮಿ ವಿವೇಕಾನಂದರ ಭಾಷಣದ ಯಾವುದೇ ಮೂಲ ಧ್ವನಿ ಇರುವ ಆಡಿಯೋಗಳು ಕೂಡ ಪತ್ತೆಯಾಗಿಲ್ಲ ಎಂಬುದು ತಿಳಿದು ಬಂದಿದೆ. ಹಾಗಾಗಿ ಸ್ವಾಮಿ ವಿವೇಕಾನಂದರ ಮೂಲ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಸಿನಿಮಾಗೆ ಸಂಬಂಧಪಟ್ಟಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಸ್ವಾಮಿ ವಿವೇಕಾನಂದರ ವಿಶ್ವಧರ್ಮ ಸಮ್ಮೇಳನದಲ್ಲಿ ಮಾಡಿದ ಭಾಷಣದ ವಿಡಿಯೋ ಪತ್ತೆಯಾಗಿದೆ ಎಂಬುದು ಸುಳ್ಳಾಗಿದೆ. ವೈರಲ್ ವಿಡಿಯೋ ವಿವೇಕಾನಂದರ ಆತ್ಮಕತೆಯ ಸಿನಿಮಾಗೆ ಸಂಬಂಧಿಸಿದಾಗಿದ್ದು, ಇದನ್ನೇ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ ಮತ್ತು ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.


ಇದನ್ನೂ ಓದಿ : Fact Check | ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು ಸಂಭವಿಸಿದೆ ಎಂದು ಚಿಲಿಯ ವಿಡಿಯೋ ಹಂಚಿಕೆ


ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

Leave a Reply

Your email address will not be published. Required fields are marked *