ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಹರಿಯಾಣದ ಹಿಸಾರ್‌ನ 33 ವರ್ಷದ ಟ್ರಾವೆಲ್ ವ್ಲಾಗರ್ ಜ್ಯೋತಿ ಮಲ್ಹೋತ್ರಾ ಅವರನ್ನು ಮೇ 17 ರಂದು ಬಂಧಿಸಲಾಯಿತು. ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ 26 ನಾಗರಿಕರು ಸಾವನ್ನಪ್ಪಿದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ನಾಲ್ಕು ದಿನಗಳ ಸಂಘರ್ಷದ ಸಮಯದಲ್ಲಿ ಮಲ್ಹೋತ್ರಾ ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಪಾಕಿಸ್ತಾನಿ ಅಧಿಕಾರಿಯೊಂದಿಗೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದೆ.

ಇದೀಗ ಇದಕ್ಕೆ ಸಂಬಂಧ ಪಟ್ಟಂತೆ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಫೋಟೋದಲ್ಲಿ ಸೋಫಾದ ಮೇಲೆ ಕುಳಿತಿರುವ ಮಹಿಳೆ ಜ್ಯೋತಿ ಮಲ್ಹೋತ್ರಾ ಎಂದು ಹೇಳಿಕೊಳ್ಳಲಾಗುತ್ತಿದೆ. ಇವರ ಜೊತೆಗೆ ನಟಿ ಆಲಿಯಾ ಭಟ್ ಮತ್ತು ಅವರ ಸಹೋದರಿ ಪೂಜಾ ಭಟ್ ಕೂಡ ಫೋಟೋಗೆ ಫೋಸ್ ನೀಡಿದ್ದಾರೆ ಎಂದು ಬರೆದುಕೊಳ್ಳಲಾಗಿದೆ. ಹೀಗೆ ಹಂಚಿಕೊಳ್ಳಲಾಗುತ್ತಿದೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಫೋಟೋ ಕುರಿತು ಈ ಫ್ಯಾಕ್ಟ್‌ಚೆಕ್‌ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್‌ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಬಳಸಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 27 ನವೆಂಬರ್, 2014 ರಂದು ರಾಣ ಅಯ್ಯೂಬ್ ಅವರು X ನಲ್ಲಿ ಪೋಸ್ಟ್ ಮಾಡಿದ ವೈರಲ್ ಚಿತ್ರ ನಮಗೆ ಕಂಡು ಬಂದಿದೆ.. ಇದರಲ್ಲಿ ಅವರು ಆಲಿಯಾ ಮತ್ತು ಪೂಜಾ ಭಟ್ ಅವರು ಇರುವ ಚಿತ್ರವನ್ನು ಪೋಸ್ಟ್ ಮಾಡಿ ‘ಸಿಸ್ಟರ್ಸ್ ಆಕ್ಟ್’ ಎಂದು ಬರೆದುಕೊಂಡಿರುವುದು ಸ್ಪಷ್ಟವಾಗಿ ಕಂಡು ಬಂದಿದೆ. ಹೀಗಾಗಿ ವೈರಲ್ ಚಿತ್ರದಲ್ಲಿ ಇರುವುದು ಜ್ಯೋತಿ ಮಲ್ಹೋತ್ರಾ ಅಲ್ಲ ರಾಣ ಆಯ್ಯೂಬ್ ಎಂಬುದು ಸ್ಪಷ್ಟವಾಗಿದೆ.
Sister act with @aliaa08 @PoojaB1972. Power women @MaheshNBhatt pic.twitter.com/6iBYdDfy6q
— Rana Ayyub (@RanaAyyub) November 27, 2014
ಈ ಬಗ್ಗೆ ಇನ್ನಷ್ಟು ಸ್ಪಷ್ಟತೆಗಾಗಿ ನಾವು ರಾಣ ಆಯ್ಯೂಬ್ ಮತ್ತು ಜ್ಯೋತಿ ಮಲ್ಹೋತ್ರಾ ಅವರ ಫೋಟೋವನ್ನು ಕೂಡ ಹೋಲಿಕೆ ಮಾಡಿ, ಇಬ್ಬರ ಫೋಟೊಗಳನ್ನು ಹೋಲಿಕೆ ಮಾಡಿದ್ದೇವೆ. ಆದರೆ ಈ ಎರಡೂ ಫೋಟೋಗಳು ತಾಳೆಯಾಗಿಲ್ಲ. ಹೀಗಾಗಿ ವೈರಲ್ ಫೋಟೋ ಸುಳ್ಳು ಮಾಹಿತಿಯಿಂದ ಹಂಚಿಕೊಂಡಿರುವುದು ನಮಗೆ ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಜ್ಯೋತಿ ಮಲ್ಹೋತ್ರಾ ಅವರು ಆಲಿಯಾ ಮತ್ತು ಪೂಜಾ ಭಟ್ ಅವರೊಂದಿಗೆ ಫೋಟೋ ತೆಗೆಸಿಕೊಂಡಿದ್ದರು ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ವೈರಲ್ ಆಗುತ್ತಿರುವ ಫೋಟೋವನ್ನು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹೀಗಾಗಿ ವೈರಲ್ ಆಗುತ್ತಿರುವ ಫೋಟೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಪಾಕಿಸ್ತಾನ ವಿರುದ್ಧದ ಸಂಘರ್ಷದಲ್ಲಿ ಪ್ರಧಾನಿ ಮೋದಿ ತಮ್ಮ ಸಹಾಯ ನಿರಾಕರಿಸಿದ್ದರು ಎಂದು ಡೊನಾಲ್ಡ್ ಟ್ರಂಪ್ ಹೇಳಿಲ್ಲ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್‌ಚೆಕ್ ವಾಟ್ಸಾಪ್ ನಂಬರ್‌ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ
