ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಇಸ್ರೇಲ್ ಹಾಗೂ ಅದರ ಸುತ್ತಲಿನ ದೇಶಗಳ ನಡುವಿನ ಸಂಘರ್ಷ ಹೆಚ್ಚಾಗುತ್ತಿರುವ ಸನ್ನಿವೇಶದಲ್ಲಿ ಹಲವು ರೀತಿಯ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈಗ ಅಂತಹದ್ದೇ ಒಂದು ಸುಳ್ಳು ಸುದ್ದಿ ವೈರಲ್ ಆಗುತ್ತಿದ್ದು, “ಟೆಲ್ ಅವಿವ್ನಲ್ಲಿದ್ದ ಸೈನಿಕರ ಗುಂಪಿನ ಬಳಿ ವೇಗವಾಗಿ ಬಂದ ಟ್ರಕ್ನಿಂದ IDF ಸೈನಿಕರ ಮೇಲೆ ದಾಳಿಯನ್ನು ನಡೆಸಲಾಗಿದೆ.” ಎಂದು ಇತ್ತೀಚಿಗಿನ ಯುದ್ಧಕ್ಕೆ ಸಂಬಂಧಿಸಿದಂತೆ ಸುದ್ದಿಯೊಂದನ್ನು ಹಂಚಿಕೊಳ್ಳಲಾಗುತ್ತಿದೆ.
Breaking 💀🇮🇱🖕🏻
Dozens of 🇮🇱 IDF sоIdiers get deliberately run over by a speeding truck near Tel Aviv‼️ pic.twitter.com/magCxmrq60
— Fahim Faisal 🇧🇩❣️🇵🇸 (@FaisalFahi27397) October 27, 2024
42 ಸೆಕೆಂಡುಗಳ ಈ ವಿಡಿಯೋ ಕ್ಲಿಪ್ನಲ್ಲಿ ಟ್ರಕ್ವೊಂದು ಜನರ ಗುಂಪಿನ ಮೇಲೆ ದಾಳಿ ನಡೆಸುವುದನ್ನು ನೋಡಬಹುದಾಗಿದೆ. ಇನ್ನು ಈ ದಾಳಿಯಿಂದ ಭಯಭೀತರಾಗಿ ಜನರು ಮತ್ತು ಕೆಲ ಸೈನಿಕರು ಓಡುವುದನ್ನು ನೋಡಬಹುದಾಗಿದೆ. ಹೀಗಾಗಿ ಈ ವೈರಲ್ ವಿಡಿಯೋ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ಮಂದಿ ಇಸ್ರೇಲ್ ಸೈನಿಕರ ಮೇಲೆ ಟ್ರಕ್ ದಾಳಿ ನಡೆಸಲಾಗಿದೆ. ಇದು ಇತ್ತೀಚಿನ ಯುದ್ಧದ ಬೆಳವಣಿಗೆ ಎಂದು ಹಂಚಿಕೊಳ್ಳುತ್ತಿದ್ದಾರೆ. ಹೀಗೆ ಹಂಚಿಕೊಳ್ಳಗುತ್ತಿರುವ ವೈರಲ್ ವಿಡಿಯೋ ಎಷ್ಟರ ಮಟ್ಟಿಗೆ ನಿಜ ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
Dozens of 🇮🇱 IDF sоIdiers get deliberately run over by a speeding truck near Tel Aviv What the media hides. pic.twitter.com/5uTTt4V6b9
— RP (@RiefdaP10704) October 27, 2024
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ವೈರಲ್ ವಿಡಿಯೋವಿನ ವಿವಿಧ ಕೀ ಪ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಲಾಯಿತು. ಈ ವೇಳೆ 8 ಜನವರಿ 2017 ರಂದು ಅರೇಬಿಕ್ ಜೆರುಸಲೇಂ ಕಾರ್ಯಾಚರಣೆ ಇದು, ಇಂದು ಶೀರ್ಷಿಕೆಯೊಂದಿಗೆ ಅಪ್ಲೋಡ್ ಮಾಡಲಾದ ವಿಡಿಯೋವೊಂದು ಕಂಡುಬಂದಿದೆ.

ಇದರ ಆಧಾರದ ಮೇಲೆ ಕೆಲವೊಂದು ಕೀವರ್ಡ್ಗಳನ್ನು ಬಳಸಿ ಗೂಗಲ್ನಲ್ಲಿ ಹುಡುಕಾಟವನ್ನು ನಡೆಸಿದಾಗ, ದಿ ವಾಷಿಂಗ್ಟನ್ ಪೋಸ್ಟ್ ವರದಿಯೊಂದು ಕಂಡು ಬಂದಿದ್ದು, ಅದರಲ್ಲಿ 2017ರ ಟ್ರಕ್ ದಾಳಿ ಎಂಬುದನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದ್ದು, ಇಸ್ರೇಲ್ ಅಧಿಕಾರಿಗಳು ಘಟನೆಯನ್ನು ಭಯೋತ್ಪಾದಕ ದಾಳಿ ಎಂದು ಪರಿಗಣಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ದಾಳಿಯಲ್ಲಿ ನಾಲ್ವರು ಇಸ್ರೇಲ್ ಸೈನಿಕರು ಹತರಾದರು ಮತ್ತು ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿಯನ್ನು ನೀಡಲಾಗಿದೆ.

ಇನ್ನು ಇದೇ ವರದಿಯನ್ನು 8 ಜನವರಿ 2017ರಂದು ಜೆರುಸಲೇಂ ಟ್ರಕ್ ದಾಳಿಯಲ್ಲಿ ನಾಲ್ವರು ಇಸ್ರೇಲ್ ಸೈನಿಕರು ಕೊಲ್ಲಲ್ಪಟ್ಟರು ಎಂಬ ಶೀರ್ಷಿಕೆಯನ್ನು ನೀಡಿ, ಬಿಬಿಸಿ ನ್ಯೂಸ್ ವರದಿಯೊಂದನ್ನು ಮಾಡಿದೆ. ಈ ವರದಿಯಲ್ಲೂ ಕೂಡ ಇದೇ ಅಂಶಗಳನ್ನು ಉಲ್ಲೇಖಿಸಲಾಗಿದ್ದು, ಇಸ್ಲಾಮಿಕ್ ಸ್ಟೇಟ್ ಉಗ್ರರು ಈ ದಾಳಿಯನ್ನು ನಡೆಸಿದ್ದಾರೆ ಎಂಬ ಶಂಕೆಯನ್ನು ವ್ಯಕ್ತಪಡಿಸಲಾಗಿತ್ತು. ಇನ್ನು ಈ ದಾಳಿಯಲ್ಲಿ 17 ಮಂದಿ ಗಾಯಗೊಂಡಿದ್ದರು, ನಾಲ್ವರು ಸೈನಿಕರು ಪ್ರಾಣವನ್ನು ಕಳೆದುಕೊಂಡಿದ್ದರು. ದಾಳಿಕೋರರಲ್ಲಿ ಒಬ್ಬ 28 ವರ್ಷದ ಫಾಡಿ ಕುನ್ಬರ್ ಎಂದು ಗುರುತಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ರೀತಿಯಲ್ಲಿ ಇತ್ತೀಚೆಗೆ ಇಸ್ರೇಲ್ನ ಸೈನಿಕರ ಮೇಲೆ ಟ್ರಕ್ನಿಂದ ದಾಳಿ ನಡೆಸಲಾಗಿದೆ ಎಂಬುದು ಸುಳ್ಳು. ವೈರಲ್ ವಿಡಿಯೋ 2017ರದ್ದಾಗಿದೆ. ಹಾಗಾಗಿ ಈ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಗಳಿಂದ ಕೂಡಿದ ವಿಡಿಯೋವನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check : “ಭೀಕರ ವಿಮಾನ ಅಪಘಾತ ದೃಶ್ಯ” ಎಂದು ಗ್ರಾಫಿಕ್ ಡಿಸೈನರ್ ಚಿತ್ರ ಹಂಚಿಕೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ.

