ವಿವಿಧ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಕ್ಲಿಪ್ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲ್ಪಡುತ್ತಿದೆ. ಇದರಲ್ಲಿ ಒಬ್ಬ ಮಹಿಳಾ ಪೊಲೀಸ್ ಅಧಿಕಾರಿಯನ್ನು ಮತ್ತೊಬ್ಬ ಮಹಿಳೆ ಹಿಡಿದುಕೊಂಡಿರುವುದನ್ನು ಕಾಣಬಹುದು. ಇದಲ್ಲದೆ, ಪೊಲೀಸ್ ಅಧಿಕಾರಿ ಕೈಯಲಿದ್ದ ಹಣವನ್ನು ವಶ ಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ. ಕೆಲವು ಬಳಕೆದಾರರು ಈ ವಿಡಿಯೋವನ್ನು ಇತ್ತೀಚಿನದ್ದು ಎಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ,

ಈ ವಿಡಿಯೋದಲ್ಲಿ ಕೂಡ ವೈರಲ್ ಪೋಸ್ಟ್ನಲ್ಲಿ ಉಲ್ಲೇಖಿಸಿದಂತೆ ದೃಶ್ಯಗಳು ಇರುವುದು ಕಂಡು ಬಂದಿರುವುದರಿಂದ ಸಾಕಷ್ಟು ಮಂದಿ ವೈರಲ್ ಪೋಸ್ಟ್ ಅನ್ನು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಹೀಗೆ ವಿವಿಧ ನಿರೂಪಣೆಗಳೊಂದಿಗೆ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಟೈಮ್ಸ್ ಆಫ್ ಇಂಡಿಯಾ ವೆಬ್ಸೈಟ್ನಲ್ಲಿ 29 ಮಾರ್ಚ್ 2023 ರಂದು ಪ್ರಕಟವಾದ ವರದಿಯೊಂದು ಕಂಡು ಬಂದಿದೆ.


ಈ ವರದಿಯ ಪ್ರಕಾರ ಹರಿಯಾಣದ ಭಿವಾನಿಯಲ್ಲಿರುವ ಮಿನಿ ಸೆಕ್ರೆಟರಿಯೇಟ್ನಲ್ಲಿರುವ ವಿಜಿಲೆನ್ಸ್ ಇಲಾಖೆಯು ಐದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಮುನ್ನಿ ದೇವಿ ಎಂಬ ಸಬ್-ಇನ್ಸ್ಪೆಕ್ಟರ್ ಅವರನ್ನು ಸಾಕ್ಷಿ ಸಮೇತ ಸೆರೆ ಹಿಡಿದಿದೆ ಎಂದು ಉಲ್ಲೇಖಿಸಲಾಗಿದೆ. ಇದೇ ರೀತಿ ಮಾರ್ಚ್ 29, 2023 ರಂದು, ರಾಷ್ಟ್ರೀಯ ಅಪರಾಧ ತನಿಖಾ ಬ್ಯೂರೋ (NCIB) x ಹ್ಯಾಂಡಲ್ ವೈರಲ್ ವೀಡಿಯೊವನ್ನು ಪೋಸ್ಟ್ ಮಾಡಿ, “ನಿನ್ನೆ, ಹಿಸಾರ್ ಮತ್ತು ಭವಾನಿ ವಿಜಿಲೆನ್ಸ್ ಇಲಾಖೆಯ ಜಂಟಿ ತಂಡವು ಭಿವಾನಿ ಮಿನಿ ಸೆಕ್ರೆಟರಿಯೇಟ್ನಲ್ಲಿ 5,000 ರೂ. ಲಂಚ ಪಡೆಯುತ್ತಿದ್ದಾಗ ಬವಾನಿಖೇಡಾದ ಮಹಿಳಾ ಸಬ್-ಇನ್ಸ್ಪೆಕ್ಟರ್ ಮುನ್ನಿ ದೇವಿಯನ್ನು ಬಂಧಿಸಿದೆ.” ಎಂದು ಪೋಸ್ಟ್ ಮಾಡಿರುವುದು ಕಂಡು ಬಂದಿದೆ. ಇನ್ನು ಇದೇ ರೀತಿಯ ಮಾಹಿತಿಯುಳ್ಳ ಹಲವು ವರದಿಗಳು ಕಂಡು ಬಂದಿವೆ.
कल हिसार एवं भवानी विजिलेस विभाग की संयुक्त टीम ने बवानीखेड़ा की महिला सब इंस्पेक्टर मुन्नी देवी को भिवानी लघु सचिवालय में 5 हजार रुपए रिश्वत लेते किया गिरफ़्तार। विदित हो कि, ये वही महिला एसआई हैं जिसे गणतंत्र दिवस पर उनके बेहतर काम और ईमानदारी के लिए सम्मानित किया गया था। pic.twitter.com/lzofLm1guk
— NCIB Headquarters (@NCIBHQ) March 29, 2023
ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಇತ್ತೀಚೆಗೆ ಹರಿಯಾಣದಲ್ಲಿ ಮಹಿಳಾ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಲಂಚ ಪಡೆಯುವಾಗ ಬಂಧಿಸಲಾಗಿದೆ ಎಂಬುದು ಸುಳ್ಳು. ವೈರಲ್ ವಿಡಿಯೋ 2023ಕ್ಕೆ ಸಂಬಂಧಿಸಿದ್ದಾಗಿದೆ. ಈ ಕಾರಣದಿಂದಾಗಿ ವೈರಲ್ ವಿಡಿಯೋವನ್ನು ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ :Fact Check | ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಹಳೆಯ ಫೋಟೋವನ್ನು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

