ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ, ಅದರಲ್ಲಿ ಅವರು ಹಿಂದೂಗಳಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂಬ ಹೇಳಿಕೆ ಇದೆ. ಇದನ್ನು ವಿವಿಧ ಬರಹಗಳೊಂದಿಗೆ ಬಲಪಂಥಿಯರು ಮತ್ತು ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಕೆಲ ಕಾಂಗ್ರೆಸ್ನ ಬೆಂಬಲಿಗರು ಕೂಡ ರಾಹುಲ್ ಗಾಂಧಿ ಅವರ ಸವಾಲು ಸ್ವೀಕರಿಸಿ ಎಂದು ಬರೆದುಕೊಂಡು ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವೈರಲ್ ಪೋಸ್ಟ್ ನೋಡಿದ ಹಲವು ಮಂದಿ ಸಾಮಾಜಿಕ ಜಾಲತಾಣದ ಬಳಕೆದಾರರು ಇದನ್ನು ನಿಜವೆಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, ರಾಹುಲ್ ಗಾಂಧಿ ಅವರ ವಿರುದ್ಧ ಕಿಡಿ ಕಾರಲು ಆರಂಭಿಸಿದ್ದಾರೆ. ಇನ್ನೂ ಕೆಲವರು ರಾಹುಲ್ ಗಾಂಧಿ ರಾಷ್ಟ್ರ ರಾಜಕಾರಣದಲ್ಲಿ ದ್ವೇಷ ರಾಜಕೀಯವನ್ನು ಮಾಡಲು ಸಂಚು ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಹೀಗೆ ವಿವಿಧ ಆಯಾಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ವಿಡಿಯೋವಿನ ವಿವಿಧ ಕೀ ಫ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜ್ನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ ನಮಗೆ 29 ಮಾರ್ಚ್ 2024ರಂದು ರಾಹುಲ್ ಗಾಂಧಿಯವರ X ಹ್ಯಾಂಡಲ್ನಲ್ಲಿ ಅಪ್ಲೋಡ್ ಮಾಡಲಾದ ಈ ಸಂಪೂರ್ಣ ವೀಡಿಯೊವನ್ನು ನಾವು ಕಂಡುಕೊಂಡಿದ್ದೇವೆ .
जब सरकार बदलेगी तो ‘लोकतंत्र का चीरहरण’ करने वालों पर कार्रवाई ज़रूर होगी!
और ऐसी कार्रवाई होगी कि दोबारा फिर किसी की हिम्मत नहीं होगी, ये सब करने की।
ये मेरी गारंटी है।#BJPTaxTerrorism pic.twitter.com/SSkiolorvH
— Rahul Gandhi (@RahulGandhi) March 29, 2024
ಇದರಲ್ಲಿ ಅವರು ತನಿಖಾ ಸಂಸ್ಥೆಗಳ ಬಗ್ಗೆ ಬರೆದುಕೊಂಡಿದ್ದು, ಸರಕಾರ ಬದಲಾದಾಗ ‘ಪ್ರಜಾಪ್ರಭುತ್ವ ವಿಘಟನೆ’ ಮಾಡುವವರ ವಿರುದ್ಧ ಖಂಡಿತ ಕ್ರಮ ಕೈಗೊಳ್ಳಲಾಗುವುದು! ಹಾಗೂ ಮತ್ತೊಮ್ಮೆ ಇದನ್ನೆಲ್ಲಾ ಮಾಡಲು ಯಾರಿಗೂ ಧೈರ್ಯ ಬರದಂತಹ ಕ್ರಮ ಕೈಗೊಳ್ಳಲಾಗುವುದು.ಇದು ನನ್ನ ಗ್ಯಾರಂಟಿ ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ.

ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಆಧರಿಸಿ ಕೆಲವೊಂದು ಕೀ ವರ್ಡ್ಗಳನ್ನು ಬಳಸಿಕೊಂಡು ಹುಡುಕಾಟವನ್ನು ನಡೆಸಿದಾಗ 29 ಮಾರ್ಚ್ 2024ರಂದು ABP Live.com ನಲ್ಲಿ ಪ್ರಕಟವಾದ ಸುದ್ದಿ ಕಂಡು ಬಂದಿದೆ. ಇದರಲ್ಲಿ “ತೆರಿಗೆ ವಿಷಯದ ಬಗ್ಗೆ, ಸರ್ಕಾರ ಬದಲಾವಣೆಯ ನಂತರ ಪ್ರಜಾಪ್ರಭುತ್ವದ ವಿರುದ್ಧ ಕೆಲಸ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.” ಎಂದು ಉಲೇಖಿಸಲಾಗಿದೆ. ಆದರೆ ಇದರಲ್ಲಿ ಎಲ್ಲಿಯೂ ರಾಹುಲ್ ಗಾಂಧಿ ಅವರು ಹಿಂದೂಗಳಿಗೆ ಎಚ್ಚರಿಕೆ ನೀಡಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ.

ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ ರಾಹುಲ್ ಗಾಂಧಿ ಅವರು ಹಿಂದೂಗಳಿಗೆ ಸುದ್ದಿಗೋಷ್ಟಿಯಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ ಎಂಬುದು ಸುಳ್ಳು. ವೈರಲ್ ವಿಡಿಯೋದಲ್ಲಿ ರಾಹುಲ್ ಗಾಂಧಿ ಅವರು ತನಿಖಾ ಸಂಸ್ಥೆಯ ಕಾರ್ಯವೈಖರಿಯ ವಿರುದ್ಧ ಅಸಮಾಧಾನವನ್ನು ವ್ಯಕ್ತ ಪಡಿಸಿದ್ದಾರೆ. ಜೊತೆಗೆ ಸಂವಿಧಾನ ವಿರೋಧಿಗಳ ಕೇಂದ್ರದಲ್ಲಿ ಸರ್ಕಾರ ಬದಲಾದ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಇದನ್ನು ತಿರುಚಿ ವೈರಲ್ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಹೀಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಸ್ಕೂಬಾ ಡೈವರ್ಗಳು ಸಮುದ್ರದ ಒಳಗಿನಿಂದ ರಾಮಸೇತುವನ್ನು ತೋರಿಸಿದ್ದಾರೆ ಎಂದು AI ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

