ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷ ತೀವ್ರ ಗೊಳ್ಳುತ್ತಿರುವ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಒಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ “ಭಾರತ ಸರ್ಕಾರ ದೇಶದಲ್ಲಿ ಉಂಟಾಗಿರುವ ಗಡಿ ಪ್ರದೇಶದ ಉದ್ವಿಗ್ನ ಸ್ಥಿತಿಯ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವುದರ ಜೊತೆಗೆ ಮನೆಯಲ್ಲಿ ಅಗತ್ಯ ವಸ್ತುಗಳನ್ನು ಸಂಗ್ರಹಿಸಿರುವಂತೆ ಸೂಚಿಸಿದೆ” ಎಂದು ಬರೆದಿರುವುದು ಕಂಡುಬಂದಿದೆ.

ಇದನ್ನು ನಿಜವೆಂದು ಭಾವಿಸಿ ಹಲವರು ಅವರು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವೈರಲ್ ಫೋಟೋವನ್ನು ಪೋಸ್ಟ್ ಮಾಡುತ್ತಿದ್ದಾರೆ. ಇನ್ನು ಕೆಲವರು “ಸರ್ಕಾರದ ಈ ಸಲಹಾ ಪತ್ರ ಮುಂದಿನ ದೀರ್ಘ ಅವಧಿಯ ಯುದ್ಧದ ಮುನ್ಸೂಚನೆಯಾಗಿದೆ, ಹಾಗಾಗಿ ಇದನ್ನು ಎಲ್ಲರಿಗೂ ಶೇರ್ ಮಾಡಿ ಮತ್ತು ದೇಶದ ನಾಗರಿಕರು ಯುದ್ಧಕ್ಕೆ ತಯಾರಾಗಲು ನೆರವಾಗಿ” ಎಂದು ಬರೆದುಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ಪೋಸ್ಟ್ಗೆ ಸಂಬಂಧಿಸಿದಂತೆ “ಭಾರತ ಸರ್ಕಾರದ ಸಲಹಾ ಪತ್ರ” ಸೇರಿದಂತೆ ಇನ್ನೂ ಹಲವು ಕೀವರ್ಡ್ಗಳನ್ನು ಬಳಸಿ ಹುಡುಕಾಟವನ್ನು ನಡೆಸಿದೆವು. ಆದರೆ ಈ ಕುರಿತು ಯಾವುದೇ ರೀತಿಯ ಅಧಿಕೃತ ವರದಿಗಳು ಕಂಡುಬಂದಿಲ್ಲ. ಅದೇ ರೀತಿ ಭಾರತ ಸರ್ಕಾರದಿಂದಲೂ ಈ ಬಗ್ಗೆ ಯಾವುದೇ ಮಾಹಿತಿ ಬಾರದಿರುವುದು ನಮ್ಮ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಇನ್ನಷ್ಟು ಹುಡುಕಾಟವನ್ನು ನಡೆಸಿದಾಗ 6 ಮೇ 2025 ರಂದು PIB ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಭಾರತ ಸರ್ಕಾರ ಯಾವುದೇ ಸಲಹಾ ಪತ್ರವನ್ನು ನೀಡಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಿರುವುದು ಕಂಡುಬಂದಿದೆ. “ಈ ಸುಳ್ಳು ಮಾಹಿತಿಯನ್ನು ನಂಬಬೇಡಿ, ಕೇವಲ ಸರ್ಕಾರದ ಅಧಿಕೃತ ಮೂಲಗಳಿಂದ ಮಾಹಿತಿಯನ್ನು ಪಡೆದುಕೊಳ್ಳಿ ಮತ್ತು ಪರಿಶೀಲಿಸದ ಸುದ್ದಿಗಳನ್ನು ಹಂಚಿಕೊಳ್ಳುವುದನ್ನು ತಪ್ಪಿಸಿ” ಎಂದು ಸಲಹೆಯನ್ನು ನೀಡಿದೆ ಇದರ ಜೊತೆಗೆ ಜನರಿಗೆ ಈ ರೀತಿಯ ಸುದ್ದಿಗಳಿಂದ ಜಾಗೃತೆ ವಹಿಸುವಂತೆ PIB ಕರೆ ನೀಡಿದೆ.
An image of an advisory is being shared online, claiming that the Government has urged individuals to take precautionary measures and keep essential items ready at home.#PIBFactCheck
❌ This claim is #FAKE. The government has not issued any such advisory
✅ Beware! Trust… pic.twitter.com/JtEcr8iRge
— PIB Fact Check (@PIBFactCheck) May 6, 2025
ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ, ಭಾರತ ಸರ್ಕಾರ ಸಲಹಾ ಪತ್ರವನ್ನು ದೇಶದ ನಾಗರಿಕರಿಗೆ ಹೊರಡಿಸಿದೆ ಎಂಬುದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ. ಈ ಕುರಿತು ಯಾವುದೇ ರೀತಿಯಾದ ಸುದ್ದಿಗಳಿಗಾಗಿ ಸರ್ಕಾರದ ಅಧಿಕೃತ ವೆಬ್ಸೈಟ್ಗಳನ್ನು ಅಥವಾ ಸರ್ಕಾರದ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆಗಳನ್ನು ಪರಿಶೀಲಿಸಿ. ಸುಳ್ಳು ಸುದ್ದಿ ನಂಬಬೇಡಿ ಮತ್ತು ಹಂಚಿಕೊಳ್ಳಬೇಡಿ ಸುಳ್ಳು ಸುದ್ದಿ ಹಂಚುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಭಾರತೀಯ ಸೈನಿಕರ ಮೇಲೆ ಆತ್ಮಾಹುತಿ ದಾಳಿ ನಡೆದಿದೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

