ಸಾಮಾಜಿಕ ಜಾಲತಾಣಗಳಲ್ಲಿ ನ್ಯೂಜಿಲೆಂಡ್ ಸರ್ಕಾರ ಎಲ್ಲಾ ಮಸೀದಿಗಳನ್ನು ಮುಚ್ಚಲು ಆದೇಶಿಸಿದೆ ಎಂಬ ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಈ ಸುದ್ದಿಯನ್ನು ಕೆಲವು ಗುಂಪುಗಳು, ವಿಶೇಷವಾಗಿ ಬಲಪಂಥೀಯ ರಾಜಕೀಯ ಒಲವು ಹೊಂದಿರುವ ಫೇಸ್ಬುಕ್ ಗುಂಪುಗಳು ಮತ್ತು ವಾಟ್ಸಾಪ್ ಮೂಲಕ ಹಂಚಿಕೊಳ್ಳಲಾಗುತ್ತಿದೆ. ಈ ಸಂದೇಶದ ಜೊತೆಗೆ ವಿದೇಶಗಳು ಮಸೀದಿಗಳನ್ನು ಮುಚ್ಚಲು ಕಾನೂನನ್ನು ಜಾರಿಗೆ ತರುತ್ತವೆ, ಆದರೆ ಭಾರತದಲ್ಲಿ ಮಾತ್ರ ಇದು ಸಾಧ್ಯವಿಲ್ಲ ಎಂದು ಹಲವರು ಬರೆದುಕೊಳ್ಳುತ್ತಿದ್ದಾರೆ.


ಫ್ಯಾಕ್ಟ್ಚೆಕ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ಪೋಸ್ಟ್ಗೆ ಸಂಬಂಧಿಸಿದಂತೆ ವಿವಿಧ ಕೀ ವರ್ಡ್ಗಳನ್ನು ಬಳಸಿಕೊಂಡು ಈ ಕುರಿತು ಯಾವುದಾದರು ವರದಿಗಳು ಪ್ರಕಟವಾಗಿವೆಯೇ ಎಂದು ಹುಡುಕಾಟವನ್ನು ನಡೆಸಿದೆವು. ಆದರೆ ಈ ಕುರಿತು ನಮಗೆ ಯಾವುದೇ ವರದಿಗಳು ಕಂಡು ಬಂದಿಲ್ಲ. ಹೀಗಾಗಿ ವೈರಲ್ ವರದಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು.



ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ನ್ಯೂಜಿಲ್ಯಾಂಡ್ ಸರ್ಕಾರ ತನ್ನ ದೇಶದಲ್ಲಿರುವ ಎಲ್ಲಾ ಮಸೀದಿಗಳನ್ನು ಮುಸಚ್ಚಲು ಆದೇಶವನ್ನು ನೀಡಿದೆ ಎಂಬುದು ಸಂಪೂರ್ಣವಾಗಿ ಸುಳ್ಳು. ವೈರಲ್ ಆಗುತ್ತಿರುವ ಪೋಸ್ಟ್ 2019ರಲ್ಲಿ ಭಯೋತ್ಪಾದನಾ ದಾಳಿಯ ನಂತರ ಭದ್ರತಾ ದೃಷ್ಟಿಯಿಂದ ತಾತ್ಕಾಲಿಕವಾಗಿ ಮಸೀದಿಯನ್ನು ಬಂದ್ ಮಾಡಲು ಪೊಲೀಸರು ಮನವಿ ಮಾಡಿದ್ದಕ್ಕೆ ಸಂಬಂಧಿಸಿದ್ದಾಗಿದೆ. ಹಾಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ, ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ
ಇದನ್ನೂ ಓದಿ : Fact Check | ಮಗುವೊಂದನ್ನು ಅಪಹರಣ ಮಾಡುತ್ತಿರುವ ವಿಡಿಯೋ ಎಂದು ಸ್ಕ್ರಿಪ್ಟೆಡ್ ದೃಶ್ಯಗಳನ್ನು ಹಂಚಿಕೊಳ್ಳಲಾಗುತ್ತಿದೆ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

