ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದನ್ನು ಹಿಂದೂ ಮಹಿಳೆಯ ಮೇಲೆ ಮುಸ್ಲಿಂ ವ್ಯಕ್ತಿಯೊಬ್ಬ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಬರೆದುಕೊಳ್ಳಲಾಗಿದೆ. ಈ ವಿಡಿಯೋಗೆ ಹೀಗೆ ಹೋಮ ನಿರೂಪಣೆಯನ್ನು ನೀಡಿರುವ ಕಾರಣದಿಂದಾಗಿ ಇದು ವೈರಲ್ ಆಗಿದೆ. ಹಲವರು ಮುಸ್ಲಿಂ ಸಮುದಾಯದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಈ ದೌರ್ಜನ್ಯಕ್ಕೆ ಉತ್ತರ ನೀಡಬೇಕು ಎಂದು ಬರೆದುಕೊಳ್ಳುತ್ತಿದ್ದಾರೆ.

ವೈರಲ್ ವಿಡಿಯೋದಲ್ಲಿ ಕೂಡ ವ್ಯಕ್ತಿಯೊಬ್ಬ ಮಹಿಳೆಯೊಬ್ಬಳನ್ನು ತೀವ್ರವಾಗಿ ಹಲ್ಲೆ ನಡೆಸುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಹೀಗಾಗಿ ಘಟನೆ ನಿಜವೆಂದು ಭಾವಿಸಿರುವ ಹಲವರು ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದು, ಹಿಂದುಗಳು ಅಪಾಯದಲ್ಲಿದ್ದಾರೆ ಮತ್ತು ಮುಸ್ಲಿಮರು ರಹಸ್ಯವಾಗಿ ಈ ರೀತಿಯ ದಾಳಿಗಳನ್ನು ಮಾಡುತ್ತಿದ್ದಾರೆ ಎಂದು ಹಲವರು ಬರೆದುಕೊಂಡಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋವಿನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ

ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಫ್ಯಾಕ್ಟ್ಚೆಕ್ ತಂಡ ಮುಂದಾಯ್ತು. ಇದಕ್ಕಾಗಿ ವಿಡಿಯೋವಿನ ವಿವಿಧ ಕಿ ಪ್ರೇಮ್ಗಳನ್ನು ಬಳಸಿಕೊಂಡು ಗೂಗಲ್ ರಿವರ್ಸ್ ಇಮೇಜಿನಲ್ಲಿ ಹುಡುಕಾಟವನ್ನು ನಡೆಸಿದೆವು. ಈ ವೇಳೆ 19 ಜೂನ್ 2025 ರಲ್ಲಿ ಪ್ರಕಟಗೊಂಡ ವಿಡಿಯೋ ವರದಿಯೊಂದು ಕಂಡುಬಂದಿದೆ. ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ ವಿಡಿಯೋದಲ್ಲಿ ಮಹಿಳೆಯನ್ನು ಥಳಿಸುತ್ತಿರುವ ವ್ಯಕ್ತಿ ಮಹಿಳೆಯ ಪತಿಯಾಗಿದ್ದು, ಇವರಿಬ್ಬರೂ ಗಂಡ ಹೆಂಡತಿ ಎಂಬುದನ್ನು ಉಲ್ಲೇಖಿಸಲಾಗಿದೆ.

ಈ ಕುರಿತು ಇನ್ನಷ್ಟು ಹುಡುಕಾಟವನ್ನು ನಡೆಸಿದಾಗ ಘಟನೆಗೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಹಾಪೂರ್ ಪೊಲೀಸರು ಮಾಡಿರುವ ಎಕ್ಸ್ ಪೋಸ್ಟ್ವೊಂದು ಕಂಡುಬಂದಿದೆ. ಇದರಲ್ಲಿ ವಿಡಿಯೋದಲ್ಲಿ ಮಹಿಳೆಯನ್ನು ಹೊಡೆಯುತ್ತಿರುವ ವ್ಯಕ್ತಿ ಆಕೆಯ ಪತಿಯಾಗಿದ್ದು, ಇವರಿಬ್ಬರೂ ಕೂಡ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂಬ ಮಾಹಿತಿಯನ್ನು ನೀಡಲಾಗಿದೆ. ಈ ಮೂಲಕ ವೈರಲ್ ವಿಡಿಯೋದಲ್ಲಿ ಯಾವುದೇ ರೀತಿಯಾದ ಕೋಮು ಆಯಾಮವಿಲ್ಲ ಎಂಬುದು ಖಚಿತವಾಗಿದೆ.
#भ्रामक_खबर_का_खण्डन
सोशल मीडिया पर कुछ शरारती तत्वों द्वारा मुस्लिम दंपती के आपसी झगड़े को हिन्दू-मुस्लिम का रूप देकर भ्रामक खबर पोस्ट की जा रही है।#HapurPolice द्वारा भ्रामक खबर पोस्ट करने वालो के विरूद्ध अभियोग पंजीकृत कर विधिक कार्यवाही की जा रही है।@UPPViralCheck@Uppolice pic.twitter.com/zgiuk6DuBJ— HAPUR POLICE (@hapurpolice) June 26, 2025
ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ, ಮುಸ್ಲಿಂ ವ್ಯಕ್ತಿಯೊಬ್ಬ ಹಿಂದು ಮಹಿಳೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ ಎಂಬುದು ಸಂಪೂರ್ಣವಾಗಿ ಸುಳ್ಳಾಗಿದೆ. ವೈರಲ್ ವಿಡಿಯೋದಲ್ಲಿ ಹಲ್ಲೆಗೊಳಗಾದ ಮಹಿಳೆ ಮತ್ತು ಹಲ್ಲೆ ಮಾಡಿರುವ ವ್ಯಕ್ತಿ ಇಬ್ಬರೂ ಕೂಡ ಗಂಡ ಹೆಂಡತಿಯಾಗಿದ್ದು, ಇವರಿಬ್ಬರೂ ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹೀಗಾಗಿ ವೈರಲ್ ವಿಡಿಯೋವನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿ ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಫ್ಲಿಪ್ಕಾರ್ಟ್ ರಾಹುಲ್ ಗಾಂಧಿ ಫೋಟೋ ಬಳಸಿ ಕಾಂಗ್ರೆಸ್ ಟಿ-ಶರ್ಟ್ ಮಾರುತ್ತಿದೆ ಎಂಬುದಕ್ಕೆ ಪುರಾವೆಗಳಿಲ್ಲ
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

