ಭಾರತ ಸರ್ಕಾರವು 2025 ರ ಸರ್ವ ಶಿಕ್ಷಾ ಅಭಿಯಾನದ ಅಡಿಯಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ, ಎಲ್ಲರಿಗೂ ಪ್ರವೇಶಿಸಬಹುದಾದ ಮತ್ತು ಗುಣಮಟ್ಟದ ಪ್ರಾಥಮಿಕ ಶಿಕ್ಷಣವನ್ನು ಖಚಿತಪಡಿಸಿಕೊಳ್ಳಲು ಶಿಕ್ಷಣ ವಲಯದಲ್ಲಿ ದೊಡ್ಡ ಪ್ರಮಾಣದ ನೇಮಕಾತಿಯನ್ನು ಘೋಷಿಸಲಾಗಿದೆ ಎಂದು ಹಲವರು ಪೋಸ್ಟ್ವೊಂದನ್ನು ಹಂಚಿಕೊಳ್ಳುತ್ತಿದ್ದಾರೆ. ಇದು ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದವರ ಗಮನವನ್ನು ಸೆಳೆದಿದ್ದು, ಹಲವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೂಡ ಮುಂದಾಗಿದ್ದಾರೆ.

ಇನ್ನು ಕೆಲವರು ವೈರಲ್ ಪೋಸ್ಟ್ನಲ್ಲಿ ನೀಡಲಾದ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಭರ್ತಿ ಮಾಡುತ್ತಿದ್ದಾರೆ. ಪೋಸ್ಟ್ ಕೂಡ ಸರ್ಕಾರಿ ಲಾಂಛನವನ್ನು ಹೊಂದಿರುವುದರಿಂದ ಹಲವರು ಇದು ಸರ್ಕಾರದಿಂದಲೇ ನಡೆಯುತ್ತಿರುವ ನೇಮಕಾತಿ ಎಂದು ಭಾವಿಸಿ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ಪೋಸ್ಟ್ನ ನಿಜಾಂಶ ಏನು ಎಂಬುದನ್ನು ಈ ಫ್ಯಾಕ್ಟ್ಚೆಕ್ನಲ್ಲಿ ಪರಿಶೀಲನೆ ನಡೆಸೋಣ
ಫ್ಯಾಕ್ಟ್ಚೆಕ್
ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವೈರಲ್ ವಿಡಿಯೋ ಕುರಿತು ಪರಿಶೀಲನೆ ನಡೆಸಲು ನಮ್ಮ ಕನ್ನಡ ಪ್ಯಾಕ್ಟ್ಚೆಕ್ ತಂಡ ಮುಂದಾಯಿತು. ಇದಕ್ಕಾಗಿ ನಾವು ವೈರಲ್ ಪೋಸ್ಟ್ಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ನಾವು ಸರ್ವ ಶಿಕ್ಷಾ ಅಭಿಯಾನದ ಅಧಿಕೃತ ವೆಬ್ಸೈಟ್ ಅನ್ನು ಪರಿಶೀಲನೆ ನಡೆಸಿದೆವು. ವೆಬ್ಸೈಟ್ ಅನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, 2025 ರಲ್ಲಿ ಯಾವುದೇ ನೇಮಕಾತಿ ಅಧಿಸೂಚನೆಯನ್ನು ಸಸರ್ವ ಶಿಕ್ಷಾ ಅಭಿಯಾನದ ಅಡಿಯಲ್ಲಿ ಘೋಷಿಸಿಲ್ಲ ಎಂಬುದು ನಮಗೆ ಕಂಡು ಬಂದಿದೆ.

ಈ ಬಗೆಗಿನ ಇನ್ನಷ್ಟು ಮಾಹಿತಿಗಾಗಿ ನಾವು ಕೆಲವೊಂದು ಕೀ ವರ್ಡ್ಗಳನ್ನು ಬಳಸಿಕೊಂಡು ಹುಡುಕಾಟವನ್ನು ನಡೆಸಿದಾಗ ಫೆಬ್ರವರಿ 08, 2025 ರಂದು PIB ಫ್ಯಾಕ್ಟ್ ಚೆಕ್ ತಂಡ X ನಲ್ಲಿ ಹಂಚಿಕೊಂಡ ಪೋಸ್ಟ್ವೊಂದು ಕಂಡು ಬಂದಿದೆ. ಇದರಲ್ಲಿ ವೈರಲ್ ಆಗಿರುವ ಉದ್ಯೋಗ ನೇಮಕಾತಿ ಅಧಿಸೂಚನೆ ಮತ್ತು ವೆಬ್ಸೈಟ್ ನಕಲಿ ಎಂದು ಉಲ್ಲೇಖಿಸಿರುವುದು ಕಂಡು ಬಂದಿದೆ. ಇದರಲ್ಲಿ ವೈರಲ್ ಪೋಸ್ಟ್ನಲ್ಲಿರುವ ವೆಬ್ಸೈಟ್ ಲಿಂಕ್ಗೂ ಭಾರತ ಸರ್ಕಾರಕ್ಕೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂಬುದನ್ನು ಕೂಡ ಖಚಿತ ಪಡಿಸಲಾಗಿದೆ.
Beware!⚠️#Fake website 'https://t.co/7SBNovCTVq' is posing as the official website of Sarva Shiksha Abhiyan & offering fake job opportunities#PIBFactCheck
▶️This website is not associated with GOI
▶️Official website: https://t.co/pCjN1ZGIMW
Read: https://t.co/Pi56ELk7hn pic.twitter.com/EKPzKScQqO
— PIB Fact Check (@PIBFactCheck) February 8, 2025
ಒಟ್ಟಾರೆಯಾಗಿ ಈ ಎಲ್ಲಾ ಅಂಶಗಳನ್ನು ಗಮನಿಸಿ ಹೇಳುವುದಾದರೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ರೀತಿ ಸರ್ವ ಶಿಕ್ಷಾ ಅಭಿಯಾನದ ಭಾಗವಾಗಿ ಕೇಂದ್ರ ಶಿಕ್ಷಣ ಇಲಾಖೆ ಬೃಹತ್ ನೇಮಕಾತಿಯನ್ನು ಮಾಡುತ್ತಿದೆ ಎಂಬುದು ಸುಳ್ಳಾಗಿದೆ. ವೈರಲ್ ಪೋಸ್ಟ್ಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಲಿಂಕ್ ನಕಲಿಯಾಗಿದೆ. ಈ ಕಾರಣದಿಂದಾಗಿ ವೈರಲ್ ಪೋಸ್ಟ್ ಅನ್ನು ಹಂಚಿಕೊಳ್ಳಬೇಡಿ. ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ.
ಇದನ್ನೂ ಓದಿ : Fact Check | ಮಹಾ ಕುಂಭಮೇಳದಲ್ಲಿ ದೋಣಿ ಮುಳುಗಿ 11 ಜನರು ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು
ನಿಮಗೆ ಯಾವುದೇ ಸುದ್ದಿ, ಫೋಟೋ, ವಿಡಿಯೋ ಬಗ್ಗೆ ಸಂದೇಹ ಬಂದರೆ ಕನ್ನಡ ಫ್ಯಾಕ್ಟ್ಚೆಕ್ ವಾಟ್ಸಾಪ್ ನಂಬರ್ಗೆ 7892502991 ಕಳಿಸಿ. ಸತ್ಯ ತಿಳಿಸುತ್ತೇವೆ

